ಕಳೆದ 10 ವರ್ಷದಲ್ಲಿನ ಕೇಂದ್ರ ಬಿಜೆಪಿ ಸರ್ಕಾರದ (NDA ) ವೈಫಲ್ಯಗಳನ್ನು ಜನರಿಗೆ ಮನವರಿಕೆ ಮಾಡುವುದರ ಜೊತೆಗೆ ನಮ್ಮ ಸರ್ಕಾರದ ಜನಪರ ಕಾರ್ಯಕ್ರಮಗಳ ಆಧಾರದ ಮೇಲೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Parliment election) ಕಾಂಗ್ರೆಸ್ ಪಕ್ಷಕ್ಕೆ (congress) ಮತ ನೀಡುವಂತೆ ಜನರ ಬಳಿ ಕೇಳಿಕೊಳ್ಳುತ್ತೇವೆ ಎಂದು ಮಾಜಿ ಡಿಸಿಎಂ ಹಾಗೂ ಅಥಣಿ ಶಾಸಕ ಲಕ್ಷಣ ನವದಿ (lakshmana savadi) ಹೇಳಿದರು.

ಬೆಳಗಾವಿ(Belagavi) ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. ದೇಶದಲ್ಲಿ ಬದಲಾವಣೆ ತರುತ್ತೇವೆ, ರೈತರ ಆದಾಯ ದ್ವಿಗುಣಗೊಳಿಸುತ್ತೇವೆ ಎಂದು ಮತ ಪಡೆದು ಪ್ರಧಾನಿ ಮೋದಿ (Narendra modi) ಜನರಿಗೆ ಮೋಸ ಮಾಡಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶದಲ್ಲಿನ ನದಿಗಳನ್ನು ಜೋಡಣೆ ಮಾಡುವ ಕನಸ್ಸನ್ನು ಜನರಲ್ಲಿ ಬಿತ್ತಿ ಅವುಗಳನ್ನು ಪೂರ್ಣಗೊಳಿಸಲು ಮೋದಿ ಸರ್ಕಾರ ವಿಫಲವಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡುವ ಮೂಲಕ ಬಿಜೆಪಿಗೆ ಪಾಠ ಕಲಿಸಬೇಕಾಗಿದೆ ಎಂದರು.
ದೇಶದಲ್ಲಿ ಡಬಲ್ ಶ್ರೀಮಂತರಾಗಿದ್ದು ಯಾರಾದರು ಇದ್ದರೆ ಅದು ಅದಾನಿ ಹಾಗೂ ಅಂಬಾನಿ. ಮುಂಬರುವ ಚುನಾವಣೆಯಲ್ಲಿ ನೀವೆ ಯೋಚನೆ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದ ಸವದಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂತಾ ಜಾರಕಿಹೊಳಿ ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.