ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಡಾ ಬಿ.ಆರ್ ಅಂಬೇಡ್ಕರ್ ಜನ್ಮ ದಿನವನ್ನು ಆಚರಣೆ ಮಾಡಲಾಯ್ತು. ನಂದಿನಿ ಲೇಔಟ್‌ನ ಕಂಠೀರವ ನಗರದ ಬಿ.ಆರ್ ಅಂಬೇಡ್ಕರ್ ಪಾರ್ಕಿನಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರ 133 ನೇ ಜಯಂತಿ ಆಚರಣೆ ಮಾಡಲಾಯ್ತು.

ಸ್ಥಳೀಯ ಶಾಸಕರು ಕೆ.ಗೋಪಾಲಯ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯ್ತು. ಈ ವೇಳೆ ಮಾತನಾಡಿದ ಶಾಸಕ ಗೋಪಾಲಯ್ಯ, ಎಲ್ಲಿವರೆಗೂ ತಳ ಮಟ್ಟದ ಸಮುದಾಯದ ಮಕ್ಕಳಿಗೆ ಶಿಕ್ಷಣ ಕೊಡುವ ಬಗ್ಗೆ ಒತ್ತು ನೀಡುವುದಿಲ್ಲವೋ ಅಲ್ಲಿ ತನಕ ಅಂಬೇಡ್ಕರ್ ಕಂಡ ಕನಸು ನನಸಾಗುವುದಿಲ್ಲ ಎಂದರು.

ಯಾವುದೇ ಕಾರಣಕ್ಕೂ ದೇಶದ ಸಂವಿಧಾನ ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹೀಗಾಗಿ ಅದರ ಬಗ್ಗೆ ಹೆಚ್ಚು ಚಿಂತಿಸುವ ಅಗತ್ಯವಿಲ್ಲ. ನಮಗಿಂತ ಕೆಳಗಿರುವ ವರ್ಗಗಳ ಮಕ್ಕಳಿಗೆ ಶಿಕ್ಷಣ ನೀಡುವ ಬಗ್ಗೆ ಹೆಚ್ಚು ಗಮನಹರಿಸಬೇಕು ಎಂದರು. ಮಹಾಲಕ್ಷ್ಮಿ ಲೇಔಟ್ ಎಸ್‌ಸಿ ಮೋರ್ಚಾ ಅಧ್ಯಕ್ಷ ನಾರಾಯಣ ಸ್ವಾಮಿ.ಬಿ ಸಂವಿಧಾನ ಪೀಠಿಕೆ ಓದಿ ಪ್ರಾಸ್ತಾವಿಕ ಭಾಷಣ ಮಾಡಿದರು.
ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಸ್ ಹರೀಶ್, ಬಿಬಿಎಂಪಿ ಮಾಜಿ ಸದಸ್ಯರಾದ ಕೆ ವಿ ರಾಜೇಂದ್ರ ಕುಮಾರ್, ಮುಖಂಡರಾದ ಹನುಮಂತರಾಯಪ್ಪ, ಎಚ್.ಎನ್ ದೇವರಾಜ್, ಕರಿಯಪ್ಪ, ವಾರ್ಡ್ ಅಧ್ಯಕ್ಷ ಲೋಕೇಶ್, ವಿನೋದ್ ಕುಮಾರ್, ಸುರಭಿ ನಾಗರಾಜ್, ಪ್ರಸನ್ನ, ಬೈಲಪ್ಪ, ತಮ್ಮಣ್ಣ ಗೌಡ, ಬೆಟ್ಟೆಗೌಡ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಮಾರಪ್ಪನಪಾಳ್ಯ ವಾರ್ಡ್‌ನಲ್ಲಿ ಬಿಜೆಪಿ-ಜೆಡಿಎಸ್ ಪಕ್ಷದ ಮೈತ್ರಿಕೂಟದ ಮುಖಂಡರು ಹಾಗೂ ಜೆಡಿಎಸ್ ಪಕ್ಷದ ಎಸ್ ಸಿ ಎಸ್ ಟಿ ವರ್ಗಗಳ ಅಧ್ಯಕ್ಷರಾದ ಲೋಕೇಶ್ ಕಚೇರಿಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ ಮಾಡಲಾಯ್ತು. ಬಿಬಿಎಂಪಿ ಮಾಜಿ ಸದಸ್ಯರಾದ ಎಂ.ಮಹಾದೇವ, ಪುಟ್ಟಸ್ವಾಮಿ, ಸಾಯಿ ರೆಡ್ಡಿ, ಜೆಡಿಎಸ್ ಮುಖಂಡರಾದ ಸುರೇಶ್ ಗೌಡ್ರು, ಲವಕುಮಾರ್, ಯಶೋಧಾ, ಮಂಜುಳಾ, ಬೈರಮ್ಮ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.