ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ಕರ್ನಾಟಕ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸೋಮವಾರ ಈ ಆದೇಶ ಹೊರಡಿಸಿದ್ದು ಮುಂಬರುವ 2023 ಚುನಾವಣೆಗೆ ಪರಮೇಶ್ವರ್ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ.
2023ರ ಕರ್ನಾಟಕ ರಾಜ್ಯ ವಿಧಾನಸಭೇ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶದ ಮೇರೆಗೆ ಈ ಆದೇಶ ಹೊರಡಿಸಲಾಗಿದ್ದು ಸಮಿತಿಯ ಉಪಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ಪ್ರೊ. ರಾಧಾಕೃಷ್ಣರನ್ನು ನೇಮಿಸಲಾಗಿದೆ.