ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಬುಧವಾರ ಅಧಿಕೃತವಾಗಿ ಆಹ್ವಾನಿಸಿದರು.
ಮುಖ್ಯಮಂತ್ರಿಗಳ ನಿವಾಸದಲ್ಲಿ ಭೇಟಿ ಮಾಡಿ, ಶಾಲು ಹೊದಿಸಿ, ವಿಶೇಷ ಪುಷ್ಪಮಾಲಿಕೆಯೊಂದಿಗೆ ಸನ್ಮಾನಿಸಿ, ಫಲತಾಂಬೂಲದ ಜೊತೆಗೆ ಆಹ್ವಾನ ಪತ್ರಿಕೆ ನೀಡುವ ಮೂಲಕ ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಆತ್ಮೀಯವಾಗಿ ಕೋರಿದರು.