
ರಸ್ತೆ ಅಪಘಾತಗಳನ್ನು(Road Accidents) ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಘಟಕಗಳಲ್ಲಿ ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ವಿಶೇಷ ಕಾರ್ಯಚರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಅದರಲ್ಲೂ ಮುಖ್ಯವಾಗಿ ಅಪಘಾತಕ್ಕೆ ಕಾರಣವಾಗಿರುವ ಪ್ರಖರ ಬೆಳಕು ಹೊರಹಾಕುವ (High Beam Lights) ಮತ್ತು ಕಣ್ಣು ಕುಕ್ಕುವ ಎಲ್ಇಡಿ ಲೈಟ್ ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ರಾಜ್ಯಾದ್ಯಂತ ವಿಶೇಷ ಕಾರ್ಯಚರಣೆ ನಡೆಸಲಾಗಿದೆ. ಇದರ ಜೊತೆಗೆ ಇದೀಗ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ( One Way), ಫುಟ್ಬಾತ್ (Foothbath) ಮೇಲೆ ವಾಹನ ಚಾಲನೆ ಬಗ್ಗೆ ವಿಶೇಷ ಕಾರ್ಯಚರಣೆ ಮಾಡಲು ಪೊಲೀಸರಿಗೆ ಸೂಚಿಸಲಾಗಿದೆ.

ಈ ಕುರಿತು ಸಂಚಾರ ಮತ್ತು ರಸ್ತೆ ಸುರಕ್ಷತೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾದ (Additional Director General of Police Alok Kumar) ಅಲೋಕ್ ಕುಮಾರ್ ಅವರು ಸುತ್ತೋಲೆ ಹೊರಡಿಸಿದ್ದು, ರಸ್ತೆ ಅಪಘಾತ ತಡೆಗಟ್ಟಲು ವಿಶೇಷ ಕಾರ್ಯಚರಣೆ ನಡೆಸುವಂತೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ, ಫುಟ್ಬಾತ್ ಮೇಲೆ ವಾಹನ ಚಾಲನೆ ಬಗ್ಗೆ ವಿಶೇಷ ಕಾರ್ಯಚರಣೆ ಮಾಡುವುದು, ಇದರ ಜೊತೆಗೆ ಡಿಫೆಕ್ಟಿವ್ ನಂಬರ್ ಪ್ಲೇಟ್ ಮೇಲೆ ಸಹ ಆಗಸ್ಟ್ 1ರಿಂದ (From August 1st)ವಿಶೇಷ ಕಾರ್ಯಚರಣೆ ನಡೆಸಲು ಎಲ್ಲಾ ಘಟಕಗಳಲ್ಲಿ ಕ್ರಮ ತೆಗೆದುಕೊಳ್ಳಲು ತಿಳಿಸಿದ್ದಾರೆ.
