ರಾಜ್ಯದಲ್ಲಿ ಮಳೆ ಇಲ್ಲದೆ ಬರದ ಪರಿಸ್ಥಿತಿ ವಾತಾವರಣ ನಿರ್ಮಾಣವಾಗಿದ್ದು, ರಾಜ್ಯ ಸರ್ಕಾರ ಮೊದಲನೇ ಹಂತದ ಬರಪೀಡಿತ ತಾಲೂಕಿನ ಪಟ್ಟಿ ಬಿಡುಗಡೆ ಮಾಡಿತ್ತು. ಈಗ ಹೆಚ್ಚುವರಿ ಬರಪೀಡಿತ ತಾಲೂಕುಗಳನ್ನು ಘೋಷಿಸಿದೆ. ರಾಜ್ಯ ಸರಕಾರ 21 ಬರಪೀಡಿತ 22 ಸಾಧಾರಣ ಬರಪೀಡಿತ ತಾಲೂಕುಗಳ ಪಟ್ಟಿ ಪ್ರಕಟ ಮಾಡಿದೆ.
ರಾಜ್ಯ ಸರ್ಕಾರವು ಘೋಷಿಸಿರುವ ಬರಪೀಡಿತ ತಾಲೂಕುಗಳೆಂದರೆ ಚಾಮರಾಜನಗರ, ಯಳಂದೂರು, ಕೆ ಆರ್ ನಗರ, ಬೆಳಗಾವಿ,ಖಾನಾಪುರ, ಮುಂಡರಗಿ, ಬ್ಯಾಡಗಿ, ಹಾನಗಲ್, ಶಿಗ್ಗಾವಿ, ಕಲಘಟಗಿ, ಅಳ್ನಾವರ್, ಆಲೂರು, ಅರಸೀಕೆರೆ,ಹಾಸನ, ಮೂಡಿಗೆರೆ, ತರೀಕೆರೆ, ಪೊನ್ನಂಪೇಟೆ, ಹೆಬ್ರಿ, ಸಿದ್ದಾಪುರ ಹಾಗೂ ದಾಂಡೇಲಿ ಬರಪೀಡಿತ ತಾಲೂಕುಗಳೆಂದು ಘೋಷಿಸಿದೆ.
ಬೆಂಗಳೂರು ಉತ್ತರ, ಚನ್ನಪಟ್ಟಣ, ಮಾಗಡಿ,ಮಾಲೂರು,ತುಮಕೂರು, ಗುಂಡ್ಲುಪೇಟೆ,ಹನೂರು, ಕೊಳ್ಳೇಗಾಲ, ದೇವದುರ್ಗ, ಮಸ್ಕಿ, ಬೇಲೂರು,ಹೊಳೆನರಸೀಪುರ, ಸಕಲೇಶಪುರ, ಶೃಂಗೇರಿ, ಚನ್ನರಾಯಪಟ್ಟಣ, ಸೋಮವಾರಪೇಟೆ, ಕೊಪ್ಪ, ನರಸಿಂಹರಾಜಪುರ, ಮಂಗಳೂರು, ಮೂಡುಬಿದರೆ, ಬ್ರಹ್ಮಾವರ, ಕಾರವಾರ ಸಾಧಾರಣ ಬರಪೀಡಿತ ಎಂದು ಘೋಷಿಸಲಾಗಿದೆ ಕಂದಾಯ ಇಲಾಖೆ 20 ನಿರ್ವಹಣೆ ಜಂಟಿ ಕಾರ್ಯದರ್ಶಿ ಟಿಸಿ ಕಾಂತರಾಜ್ ಆದೇಶ ಹೊರಡಿಸಿದ್ದಾರೆ.
ಈಗಾಗಲೇ ಮೊದಲು 195 ತಾಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಬರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಕೇಂದ್ರದಿಂದ ಬರ ಅಧ್ಯಯನ ತಂಡ ಒಂದು ಆಗಮಿಸಿ ಬೆಳೆ ಸಮೀಕ್ಷೆ ನಡೆಸುತ್ತಿದೆ. ಸಂಪೂರ್ಣ ವರದಿ ಪಡೆದುಕೊಂಡಿರುವ ತಂಡದಿಂದ ರಾಜ್ಯಕ್ಕೆ ಪರಿಹಾರ ಹಣ ದೊರಕುವುದಾಗಿ ಆಶಯ ವ್ಯಕ್ತಪಡಿಸಿದ್ದಾರೆ.