• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಬರ ಪರಿಹಾರ ವಿಚಾರದಲ್ಲಿ ಸುಳ್ಳು ಹೇಳಿ ಸಿಕ್ಕಿಬಿದ್ರಾ ಅಮಿತ್‌ ಷಾ..?

ಪ್ರತಿಧ್ವನಿ by ಪ್ರತಿಧ್ವನಿ
April 3, 2024
in ರಾಜಕೀಯ, ವಾಣಿಜ್ಯ
0
‘ಸುಳ್ಳುಗಳ‌ ಸರದಾರ ಅಮಿತ್‌ ಷಾ ಯಾಕ್ರಿ ಕನ್ನಡಿಗರಿಗೆ ಸುಳ್ಳು ಹೇಳ್ತೀರಿ’
Share on WhatsAppShare on FacebookShare on Telegram

ADVERTISEMENT

ಕರ್ನಾಟಕಕ್ಕೆ ಬರ ಪರಿಹಾರ ನೀಡುವ ವಿಚಾರದಲ್ಲಿ ಅಮಿತ್‌ ಷಾ ಮಾತುಗಳಿಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಸಾಲು ಸಾಲು ಪೋಸ್ಟ್‌ ಹಾಕಿದ್ದು, ಸುಳ್ಳು, ಕೊಳಕು ರಾಜಕೀಯ ಬಿಡಿ, ಪರಿಹಾರ ಕೊಡಿ ಅಂತ ಕಿಡಿಕಾರಿದ್ದಾರೆ. ನಾನು ಕೊಡುವ ಸತ್ಯವನ್ನ ಸುಳ್ಳೆಂದು ನೀವು ಸಾಬೀತು ಮಾಡಿದರೆ, ನಾನು ರಾಜಕೀಯದಿಂದಲೇ ನಿವೃತ್ತಿ ಆಗ್ತೀನಿ ಅಂತ ಸವಾಲು ಎಸೆದಿದ್ದಾರೆ. ನೀವು ಹೇಳುತ್ತಿರುವುದು ಸುಳ್ಳಾದರೆ ನೀವೇನು ಮಾಡ್ತೀರಾ..? ನಿಮಗೇ ಬಿಟ್ಟಿದ್ದು ಅಂತ ಸಿದ್ದರಾಮಯ್ಯ ಕಟು ಮಾತುಗಳಲ್ಲಿ ಟೀಕಿಸಿದ್ದಾರೆ.

ಅಮಿತ್‌ಷಾ ಅವರೇ, ನೀವು ಕೊಟ್ಟ ಒಂದು ವಾರದ ಆಶ್ವಾಸನೆಯ ನಂತರ ಮೂರು ತಿಂಗಳುಗಳು ಉರುಳಿ ಹೋಗಿದೆ. ಈಗ ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಬಂದು ಕರ್ನಾಟಕಕ್ಕೆ ನೀವು ಮಾಡಿರುವ ಘನಘೋರ ಅನ್ಯಾಯವನ್ನು ಮುಚ್ಚಿ ಹಾಕಲು ಸುಳ್ಳಿನ ಮೊರೆ ಹೋಗಿದ್ದೀರಿ. ಈಗಲೂ ಕಾಲ ಮಿಂಚಿಲ್ಲ ಬರಪೀಡಿತರ ಜನರ ಬದುಕಿನ ಜೊತೆ ಕೊಳಕು ರಾಜಕೀಯ ಮಾಡಲು ಹೋಗದೆ, ತಕ್ಷಣ ಬರ ಪರಿಹಾರದ ಹಣವನ್ನು ಬಿಡುಗಡೆ ಮಾಡಿ. ಅಂತ ಒಂದು ಎಕ್ಸ್‌ ಪೋಸ್ಟ್‌ ಮಾಡಿದ್ದಾರೆ.

ಅಮಿತ್‌ಷಾ ಅವರೇ ನಾವು ನಿರೀಕ್ಷಿಸಿದಂತೆಯೇ ಕರ್ನಾಟದಲ್ಲಿ ನಿಮ್ಮ ಪಕ್ಷದ ಚುನಾವಣಾ ಪ್ರಚಾರವನ್ನು ಸುಳ್ಳುಗಳ ಮೂಲಕವೇ ಉದ್ಘಾಟಿಸಿದ್ದೀರಿ. ಇದಕ್ಕಾಗಿ ಅಭಿನಂದನೆಗಳು ಎಂದು ವ್ಯಂಗ್ಯವಾಡಿದ್ದಾರೆ. ‘ರಾಜ್ಯ ಸರ್ಕಾರ ಮೂರು ತಿಂಗಳು ವಿಳಂಬವಾಗಿ ಬರ ಪರಿಹಾರ ಕೋರಿ ಮನವಿ ಸಲ್ಲಿಸಿತ್ತು. ಅಷ್ಟರಲ್ಲಿ ಚುನಾವಣೆ ಘೋಷಣೆ ಆಗಿರುವ ಕಾರಣ ಪರಿಹಾರ ನೀಡಲು ಸಾಧ್ಯವಾಗಿಲ್ಲ’ ಎಂಬ ಅಪ್ಪಟ ಸುಳ್ಳನ್ನು ರಾಮನಗರದ ಚುನಾವಣಾ ಪ್ರಚಾರ ಸಭೆಯಲ್ಲಿ ನೀವು ಹೇಳಿದ್ದೀರಿ. ಈ ಸುಳ್ಳನ್ನು ಹೇಳುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿ ಆದರೂ ಕುಟುಕಲಿಲ್ಲವೇ..? ಈ ನಿಮ್ಮ ಸುಳ್ಳಿಗೆ ನಿಮಗೆ ಇಷ್ಟವಾಗಿರುವ ‘ಕ್ರೊನಾಲಜಿ’ಯಲ್ಲಿಯೇ ಉತ್ತರ ನೀಡುತ್ತೇನೆ ಎಂದು ಟಾಂಟ್‌ ಮಾಡಿದ್ದಾರೆ.

Tags: Congress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಸಿದ್ದರಾಮಯ್ಯ
Previous Post

‘ಸುಳ್ಳುಗಳ‌ ಸರದಾರ ಅಮಿತ್‌ ಷಾ ಯಾಕ್ರಿ ಕನ್ನಡಿಗರಿಗೆ ಸುಳ್ಳು ಹೇಳ್ತೀರಿ’

Next Post

ಸಿಎಂ ಗೆ ಈಗ ಒಕ್ಕಲಿಗರ ಮೇಲೆ ಮಮತೆ ಬಂದಿದೆ.. ಒಂದು ಕಾಲದಲ್ಲಿ ಸಿದ್ದರಾಮಯ್ಯ ದೇವೇಗೌಡ್ರ ಭಜನೆ ಮಾಡ್ತಿದ್ರು : HDK ಕಿಡಿ

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಹಣ ಕಡಿತಕ್ಕೂ ಮುನ್ನ ಎಚ್ಚರಿಕೆ ಕಡ್ಡಾಯ: ಆಟೋ-ಡೆಬಿಟ್ ನಿಯಮದಲ್ಲಿ ಆರ್‌ಬಿಐ ದೊಡ್ಡ ಬದಲಾವಣೆ

ಹಣ ಕಡಿತಕ್ಕೂ ಮುನ್ನ ಎಚ್ಚರಿಕೆ ಕಡ್ಡಾಯ: ಆಟೋ-ಡೆಬಿಟ್ ನಿಯಮದಲ್ಲಿ ಆರ್‌ಬಿಐ ದೊಡ್ಡ ಬದಲಾವಣೆ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
Next Post
ಸಿಎಂ ಗೆ ಈಗ ಒಕ್ಕಲಿಗರ ಮೇಲೆ ಮಮತೆ ಬಂದಿದೆ.. ಒಂದು ಕಾಲದಲ್ಲಿ ಸಿದ್ದರಾಮಯ್ಯ ದೇವೇಗೌಡ್ರ ಭಜನೆ ಮಾಡ್ತಿದ್ರು : HDK ಕಿಡಿ

ಸಿಎಂ ಗೆ ಈಗ ಒಕ್ಕಲಿಗರ ಮೇಲೆ ಮಮತೆ ಬಂದಿದೆ.. ಒಂದು ಕಾಲದಲ್ಲಿ ಸಿದ್ದರಾಮಯ್ಯ ದೇವೇಗೌಡ್ರ ಭಜನೆ ಮಾಡ್ತಿದ್ರು : HDK ಕಿಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada