ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಬರ ಪರಿಹಾರದ ಹಣವನ್ನು ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರ NDRF ಫಂಡ್ನಿಂದ ₹ 3,454 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ತೀವ್ರ ಬರಗಾಲ ಎದುರಾಗಿದ್ದರಿಂದ 36 ಸಾವಿರ ಕೋಟಿ ರುಪಾಯಿ ನಷ್ಟ ಉಂಟಾಗಿದೆ ಎಂದು ಅಧ್ಯಯನ ವರದಿಯಲ್ಲಿ ಗೊತ್ತಾಗಿತ್ತು, ಆ ವರದಿ ಆಧಾರದಲ್ಲಿ ಅರ್ಧದಷ್ಟು ಮೊತ್ತ ₹18,174 ಕೋಟಿ ಬರ ಪರಿಹಾರ ಕೇಳಿದ್ದ ರಾಜ್ಯ ಸರ್ಕಾರ. ಆದರೆ ನಿನ್ನೆಯೇ ಹಣ ರಿಲೀಸ್ ಮಾಡಿ ಕೇಂದ್ರ ಸರ್ಕಾರ ಆದೇಶ
ಕಲಬುರಗಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಅಕ್ರೋಶ ಹೊರಹಾಕಿದ್ದಾರೆ. ನಾವು ಕೇಳಿದ್ದು 18,172 ಕೋಟಿ ರೂಪಾಯಿ. ರಾಜ್ಯದಲ್ಲಿ 35 ಸಾವಿರ ಕೋಟಿ ಬೆಳೆ ನಷ್ಟ ಆಗಿದೆ. 48 ಸಾವಿರ ಹೆಕ್ಟೇರ್ ಬೆಳೆ ನಷ್ಟ ಆಗಿದೆ. NDRF ನಿಯಮದ ಪ್ರಕಾರ ಹಣ ಕೊಡಬೇಕು. ಆದ್ರೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಲಿಲ್ಲ. ನಿರ್ಮಲಾ ಸೀತಾರಾಮನ್, ಅಮಿತ್ ಷಾ ನಮ್ಮ ಮೇಲೆ ಆರೋಪ ಮಾಡಿದ್ದರು. ತಡ ಮಾಡಿ ಮನವಿ ಕೊಟ್ಟಿದ್ದಾರೆ ಅಂತ ಹೇಳಿದ್ರು. ಚುನಾವಣೆ ಬಂದಿದೆ ಅಂತ ಬಿಡುಗಡೆ ಮಾಡಲು ಆಗಿಲ್ಲ ಅಂತ ಸುಳ್ಳು ಹೇಳಿದ್ರು. ಆದ್ರೆ ಈಗ 3 ಸಾವಿರ ಕೋಟಿ ಹಣ ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರ ಕಡಿಮೆ ಹಣ ಬಿಡುಗಡೆ ಮಾಡಿದೆ ಎಂದು ಕಿಡಿಕಾರಿದ್ದಾರೆ.
ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಬರ ಪರಿಹಾರದ ಬಗ್ಗೆ ನಾನು ಅಧಿಕಾರಿಗಳ ಜೊತೆ ಮಾತನಾಡುತ್ತೇನೆ. ನರೇಂದ್ರ ಮೋದಿ ಅವರು ಸುಳ್ಳನ್ನೇ ಮಾರುಕಟ್ಟೆ ಮಾಡಿಕೊಂಡಿದ್ದಾರೆ. ಈಗ ಬಿಡುಗಡೆ ಆಗಿರುವ ಬರ ಪರಿಹಾರ ಪಡೆಯಲು ನಾವು ಸುಪ್ರೀಂಕೋರ್ಟ್ನ ಮೊರೆ ಹೋಗಬೇಕಾಗಿ ಬಂತು. ಆ ಬಳಿಕ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದೆ. ಅದರಲ್ಲೂ ಕಡಿಮೆ ಹಣ ಕೊಟ್ಟಿದೆ ಎಂದು ಕಿಡಿಕಾರಿದ್ದಾರೆ.