• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬರದ ಬಿಗಿ ಎಚ್ಚರಿಕೆ: ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
July 19, 2026
in Top Story
0
ಬರದ ಬಿಗಿ ಎಚ್ಚರಿಕೆ: ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
Share on WhatsAppShare on FacebookShare on Telegram

ಬೆಂಗಳೂರು, ಜುಲೈ 19: ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಮತ್ತು ಬರದ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಮಹತ್ವದ ನಿರ್ದೇಶನ ನೀಡಿದ್ದಾರೆ. ಮುಂದಿನ 15 ದಿನಗಳೊಳಗೆ ಬರ ಪರಿಸ್ಥಿತಿಯ ಸಮಗ್ರ ವರದಿಯನ್ನು ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಸೂಚಿಸಿರುವ ಅವರು, ಕಚೇರಿಯಲ್ಲಿ ಕುಳಿತು ವರದಿ ತಯಾರಿಸದೆ ಕ್ಷೇತ್ರ ಮಟ್ಟದಲ್ಲಿ ಪರಿಶೀಲನೆ ನಡೆಸಿ ವಾಸ್ತವಾಂಶಗಳ ಆಧಾರದ ಮೇಲೆ ವರದಿ ಸಲ್ಲಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಪರಿಸ್ಥಿತಿ ಅತ್ಯಂತ ಗಂಭೀರವಾಗಿರುವುದಾಗಿ ತಿಳಿಸಿದರು.

ADVERTISEMENT
DK Shivakumar : ಬರ ವಿಚಾರದಲ್ಲಿ ಅಧಿಕಾರಿಗಳು ವರದಿ ಕೊಟ್ಟಿದ್ದಾರೆ - ಸಿಎಂ ಡಿಕೆಶಿ  #pratidhvani

ಸಿಎಂ ಅವರ ಮಾಹಿತಿ ಪ್ರಕಾರ, ರಾಜ್ಯದ 178 ತಾಲೂಕುಗಳಲ್ಲಿ ಮಳೆ ಕೊರತೆ ಕಂಡುಬಂದಿದ್ದು, ಅವುಗಳಲ್ಲಿ 20 ತಾಲೂಕುಗಳಲ್ಲಿ ಮಳೆಯೇ ದಾಖಲಾಗಿಲ್ಲ. ವಿಜಯನಗರ ಜಿಲ್ಲೆಯಲ್ಲಿ ಪರಿಸ್ಥಿತಿ ಹೆಚ್ಚು ಆತಂಕಕಾರಿ ಎಂದು ಅವರು ಹೇಳಿದರು.

ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಕೇವಲ 40 ಶೇಕಡಾ ನೀರು ಮಾತ್ರ ಸಂಗ್ರಹವಾಗಿದ್ದು, ಈ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸುವಂತೆ ಸೂಚಿಸಲಾಗಿದೆ. ನೀರಾವರಿಗಾಗಿ ನೀರು ಬಿಡುವ ಕುರಿತು ರೈತರಿಗೆ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಸಣ್ಣ ನೀರಾವರಿ ಇಲಾಖೆಯ 3,817 ಕೆರೆಗಳ ಪೈಕಿ 3,235 ಕೆರೆಗಳಲ್ಲಿ 50 ಶೇಕಡಕ್ಕಿಂತ ಕಡಿಮೆ ನೀರು ಉಳಿದಿದೆ. ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ 32,504 ಕೆರೆಗಳಲ್ಲಿ 27,450 ಕೆರೆಗಳಲ್ಲೂ ನೀರಿನ ಮಟ್ಟ ಅರ್ಧಕ್ಕಿಂತ ಕಡಿಮೆಯಾಗಿದೆ ಎಂದು ಸಿಎಂ ಮಾಹಿತಿ ನೀಡಿದರು.

Anil kumar tadkal Congress NEET ;  ಪಾರ್ಲಿಮೆಂಟ್ ಚಲೋಗೆ ವಾಂಗ್ ಚುಲ್ ಕರೆ.! #pratidhvani #sonamwangchuk

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಲು ಈಗಾಗಲೇ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ₹1 ಕೋಟಿ ಅನುದಾನ ಘೋಷಣೆ ಮಾಡಲಾಗಿದ್ದು, ₹379 ಕೋಟಿ ಬಿಡುಗಡೆ ಮಾಡಲಾಗಿದೆ. ಹಣದ ಕೊರತೆ ಇಲ್ಲ, ಸಮರ್ಪಕವಾಗಿ ಬಳಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ಜಾನುವಾರುಗಳಿಗೆ ಮೇವು, ಕುಡಿಯುವ ನೀರು ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಆದ್ಯತೆ ನೀಡುವಂತೆ ಸೂಚಿಸಿರುವ ಸಿಎಂ, ಕೊಳವೆ ಬಾವಿ ಕೊರೆಯುವ ವೇಳೆ ನಕಲಿ ಬಿಲ್ ಸೃಷ್ಟಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು. ಪ್ರತಿಯೊಂದು ಬೋರ್‌ವೆಲ್ ಕಾಮಗಾರಿಯೂ ವಿಡಿಯೊ ದಾಖಲೆಯೊಂದಿಗೆ ನಡೆಯಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.

ಕೇಂದ್ರ ಸರ್ಕಾರದ ತಂಡ ರಾಜ್ಯಕ್ಕೆ ಭೇಟಿ ನೀಡಿದಾಗ ನೈಜ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು. ಈ ಕುರಿತು ಈಗಾಗಲೇ ಪ್ರಧಾನಮಂತ್ರಿಗೆ ಪತ್ರ ಬರೆದು ಕೇಂದ್ರ ತಂಡವನ್ನು ಕಳುಹಿಸುವಂತೆ ಮನವಿ ಮಾಡಿರುವುದಾಗಿ ಅವರು ತಿಳಿಸಿದರು.

ಇದೇ ವೇಳೆ, ಮನರೇಗಾ, ಬೆಳೆ ವಿಮೆ, ಕುಡಿಯುವ ನೀರು, ವಿದ್ಯುತ್ ಟ್ರಾನ್ಸ್‌ಫಾರ್ಮರ್ ದುರಸ್ತಿ, ವಲಸೆ ತಡೆ ಹಾಗೂ ರೈತರ ಹಿತಾಸಕ್ತಿ ಕುರಿತಂತೆ ಅಧಿಕಾರಿಗಳು ತ್ವರಿತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ನಿರ್ದೇಶನ ನೀಡಿದರು.

Tags: BorewellCabinet MeetingCM DK ShivakumarDrinking WaterDrought ReliefDrought ReportFarmers Newskannada newsKarnataka DroughtKarnataka Governmentkarnataka newsKarnataka WeatherKarnಣataka RainfallMonsoon 2026rain deficitReservoir Water LevelWater Crisis
Previous Post

ಸ್ಪೇನ್–ಅರ್ಜೆಂಟೀನಾ ಫೈನಲ್‌ಗೂ ಮುನ್ನ ಬಹಿರಂಗವಾದ ಬಹುಮಾನ ಮೊತ್ತ! ವಿಜೇತರಿಗೆ ಎಷ್ಟು ಕೋಟಿ ಬಹುಮಾನ

Next Post

ಚೆನ್ನಮ್ಮ ಅಂತ್ಯಕ್ರಿಯೆ ಬೆಟ್ಟದ ರಂಗನಾಥಸ್ವಾಮಿ ತಪ್ಪಲಿನಲ್ಲೇ ಏಕೆ? ಕಾರಣ ಬಹಿರಂಗಪಡಿಸಿದ ಡಾ. ಮಂಜುನಾಥ್

Related Posts

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?
Top Story

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?

by ಪ್ರತಿಧ್ವನಿ
July 25, 2026
0

ನವದೆಹಲಿ: ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮದ ವಿರುದ್ಧ 35 ದಿನಗಳ ಕಾಲ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಯಶಸ್ವಿಯಾಗಿ ಅಂತ್ಯಗೊಂಡಿದೆ. ಕೇಂದ್ರ ಶಿಕ್ಷಣ ಸಚಿವ...

Read moreDetails
ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

July 25, 2026
ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

July 25, 2026
ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

July 25, 2026
ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

July 25, 2026
Next Post
ಚೆನ್ನಮ್ಮ ಅಂತ್ಯಕ್ರಿಯೆ ಬೆಟ್ಟದ ರಂಗನಾಥಸ್ವಾಮಿ ತಪ್ಪಲಿನಲ್ಲೇ ಏಕೆ? ಕಾರಣ ಬಹಿರಂಗಪಡಿಸಿದ ಡಾ. ಮಂಜುನಾಥ್

ಚೆನ್ನಮ್ಮ ಅಂತ್ಯಕ್ರಿಯೆ ಬೆಟ್ಟದ ರಂಗನಾಥಸ್ವಾಮಿ ತಪ್ಪಲಿನಲ್ಲೇ ಏಕೆ? ಕಾರಣ ಬಹಿರಂಗಪಡಿಸಿದ ಡಾ. ಮಂಜುನಾಥ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada