ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮರ್ಮು ಇಂದು ಅಧಿಕಾರ ಸ್ವೀಕರಿಸಿದರು. ಈ ಮೂಲಕ ಬುಡಕಟ್ಟು ಜನಾಂಗದ ಮಹಿಳೆಯೊಬ್ಬರು ರಾಷ್ಟ್ರಪತಿ ಹುದ್ದೆ ಅಲಂಕರಿಸಿದ ಮೊದಲ ಮಹಿಳೆ ಎಂಬ ಇತಿಹಾಸ ಬರೆದರು.
ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಮುಖ್ಯ ನ್ಯಾಯಮೂರ್ತಿ ಎನ್.ಎ.ರಮಣ ಪ್ರಮಾಣ ವಚನ ಬೋಧಿಸಿದರು.
ಸಮಾರಂಭದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ನಿರ್ಗಮಿತ ರಾಷ್ಟ್ರಪತಿ ರಾಮನಾಥನ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಉಪಸ್ಥಿತರಿದ್ದರು.

ದ್ರೌಪದಿ ಮರ್ಮು ರಾಷ್ಟ್ರಪತಿ ಸ್ಥಾನ ಅಲಂಕರಿಸಿದ ದೇಶದ 2ನೇ ಮಹಿಳೆ ಹಾಗೂ ಸ್ವಾತಂತ್ರ್ಯ ನಂತರ ಜನಿಸಿದ ಮೊದಲಿಗರು ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.
ರಾಷ್ಟ್ರಪತಿ ಸ್ಥಾನ ಅಲಂಕರಿಸುವ ಮುನ್ನ ರಾಮನಾಥನ್ ಕೋವಿಂದ್ ಜೊತೆ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರು.