ಚಾಮರಾಜನಗರ : ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕುಡುಕರ ಹಾವಳಿ ಜೋರಾಗಿದೆ. ಹೆರಿಗೆ ವಿಭಾಗದ ಬಳಿಯಲ್ಲಿಯೇ ಮದ್ಯಪಾನ ಮಾಡಿಕೊಂಡು ಬಂದು ಮಲಗುವ ಮೂಲಕ ಕಿರಿಕಿರಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಕುಡಿದ ಅಮಲಿನಲ್ಲಿ ಅವಾಚ್ಯ ಶಬ್ದಗಳಿಂದ ರೋಗಿಗಳು ಹಾಗೂ ರೋಗಿಯ ಸಂಬಂಧಿಗಳಿಂದ ನಿಂದಿಸುತ್ತಿದ್ದಾರೆ ಎಂಬುದು ರೋಗಿಯ ಸಂಬಂಧಿಗಳ ಆರೋಪವಾಗಿದೆ.
ಕುಡುಕರ ಹಾವಳಿ ಬಗ್ಗೆ ಈಗಾಗಳೇ ರೋಗಿಗಳ ಕುಟುಂಬಸ್ಥರು ಜಿಲ್ಲಾಸ್ಪತ್ರೆ ಸಿಬ್ಬಂದಿ ಗಮನಕ್ಕೆ ತಂದಿದ್ದಾರೆ. ಆದರೆ ಜಿಲ್ಲಾಸ್ಪತ್ರೆ ಸಿಬ್ಬಂದಿ ಈ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದ್ದು ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ.