ವಾರಣಾಸಿಯ ಜ್ಞಾನವಾಪಿ ಮಸೀದಿ ಅವರಣದಲ್ಲಿ ‘ಶಿವಲಿಂಗ’ ಪತ್ತೆಯಾಗಿದೆ ಎಂದು ಸಾಮಾಜಿಕ ಜಾಳತಾಣದಲ್ಲಿ ಪೋಸ್ಟ್ ಮಾಡಿದ್ದ ದೆಹಲಿ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ ರತನ್ ಲಾಲ್ ಅವರನ್ನು ಶುಕ್ರವಾರ ರಾತ್ರಿ ಬಂಧಿಸಲಾಗಿದೆ.
ಭಾರತೀಯ ದಂಡ ಸಂಹಿತೆ 153ಎ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸೌಹಾರ್ದತೆ ಮೇಲೆ ದುಷ್ಪರಿಣಾಮ ಬೀರುವ ಕೃತ್ಯಗಳು ಮತ್ತು 295ಎ ಉದ್ದೇ ಶಪೂರ್ವಕವಾಗಿ ಯಾವುದೇ ವರ್ಗದ ಧಾರ್ಮಿಕ ಭಾವನೆಗಳು, ಧರ್ಮವನ್ನು ಅವಮಾನಿಸುವ ಕೃತ್ಯ ಅಡಿಯಲ್ಲಿ ಲಾಲ್ ಅವರನ್ನು ಬಂಧಿಸಲಾಗಿದೆ ಎಂದು ದೆಹಲಿಯ ಉತ್ತರ ಸೈಬರ್ ಪೊಲೀಸರು ತಿಳಿಸಿದ್ದಾರೆ.
ವಕೀಲ ವಿನೀತ್ ಜಿಂದಾಲ್ ಅವರು ತಮ್ಮ ದೂರಿನಲ್ಲಿ, ಲಾಲ್ ಇತ್ತೀ ಚೆಗೆ ‘ಶಿವಲಿಂಗ ಪತ್ತೆ ಕುರಿತಾಗಿ ಪ್ರಚೋದನಕಾರಿ ಟ್ವೀ ಟ್’ಅನ್ನು ಹಂಚಿಕೊಂಡಿದ್ದರು ಎಂದು ಹೇಳಿದ್ದಾರೆ. ಈ ದೂರಿನ ಅನ್ವಯ ಲಾಲ್ ಅವರ ವಿರುದ್ಧ FIR ದಾಖಲಿಸಿ ಬಂಧಿಸಿದ್ದಾರೆ.