ಇಂಧನ ಬೆಲೆಯೇಕೆಯಿಂದಾಗಿ ತರಕಾರಿಗಳ ಬೆಲೆ ಹೆಚ್ಚಳ

ಕೋವಿಡ್‌ ಸಂಕಷ್ಟಕ್ಕೆ ಸಿಲುಕಿ ನಲುಗಿ ಹೋಗಿದ್ದ ಜನಕ್ಕೆ ಬೆಲೆಯೇರಿಕೆಯ ಬಿಸಿ ಮುಟ್ಟಿದೆ. ಪೆಟ್ರೋಲ್‌, ಡಿಸೇಲ್‌, ವಿದ್ಯುತ್‌ ದರ ಏರಿಕೆಯ ಬೆನ್ನೆಲೆ, ತರಕಾರಿಗಳ ಬೆಲೆ ಕೂಡ ಗಗನಕ್ಕೇರಿದೆ. ಲಾಕ್‌ಡೌನ್‌ ಹಿನ್ನೆಲೆ ಕೆಲಸವಿಲ್ಲದೆ ಆರ್ಥಿಕ ಸಂಕಷ್ಟಕ್ಕೊಳಗಾದ ಸಾಮಾನ್ಯರಿಗಿದು ಹಸಿ ಗಾಯದ ಬೇಲೆ ಬರೆ ಎಳೆದಂತಾಗಿದೆ.

ಈ ಸಂಬಂಧ ತೋಟಗಾರಿಕಾ ಉತ್ಪಾದಕರ ಸಹಕಾರಿ ಮಾರುಕಟ್ಟೆ ಮತ್ತು ಸಂಸ್ಕರಣಾ ಸೊಸೈಟಿ (ಹಾಪ್‌ಕಾಮ್ಸ್)ನ ವ್ಯವಸ್ಥಾಪಕ ನಿರ್ದೇಶಕ ಉಮೇಶ್ ಮಿರ್ಜಿ ಪ್ರತಿಕ್ರಿಯಿಸಿ ಸಾಂಕ್ರಾಮಿಕ ರೋಗದ ಪರಿಣಾಮ ಮತ್ತು ದೇಶದಲ್ಲಿ ಇಂಧನ ಬೆಲೆಗಳಲ್ಲಿ ಏರಿಕೆ ಹಾಗು ವಾಹನಗಳ ಸಂಚಾರಕ್ಕೆ ನಿರ್ಬಂಧವಿರುವುದರಿಂದ ಬೆಲೆಯಲ್ಲಿ ಏರಿಕೆ ಕಂಡಿದೆ ಎಂದಿದ್ದಾರೆ.

ಬೀನ್ಸ್‌ ಬೆಲೆ ಕೆ.ಜಿ ಗೆ 60 ರಿಂದ 90 ರೂ ಗೆ ಏರಿಕೆಯಾಗಿದೆ. ಊಟಿ ಕ್ಯಾರೆಟ್‌ ಕೆ.ಜಿ ಗೆ 52-62 ರೂ ಆಲೂಗೆಡ್ಡೆ ಮತ್ತು ಟೊಮೋಟೊ ಸ್ಥಳೀಯವಾಗಿಯೇ ಬೆಳೆಯುವುದರಿಂದ ಬೆಲೆ ಏರಿಕೆ ಕಂಡುಬಂದಿಲ್ಲ, ಆದರೆ ಈರುಳ್ಳಿ  ಬೆಲೆಯಲ್ಲಿ ಏರಿಕೆಯಾಗಿದೆ. ಕಾರಣ ನಾಸಿಕ್ ನಿಂದ ಈರುಳ್ಳಿಯನ್ನು ಖರೀದಿ ಮಾಡಲಾಗುತ್ತಿದ್ದು, ಅಲ್ಲಿ ಪ್ರಯಾಣ ನಿರ್ಬಂಧಗಳಿರುವುದರಿಂದ ಬೆಲೆ ಏರಿಕೆಯಾಗಿದೆ ಎಂದು ಹೇಳಲಾಗುತ್ತಿದೆ. 

ಕರೋನಾ ಲಾಕ್‌ಡೌನ್‌ ನಿರ್ಬಂಧ ಹಿನ್ನೆಲೆ, ಬೆಳಿಗ್ಗೆ 6 ಯಿಂದ 9 ಗಂಟೆ ವರೆಗೆ ಮಾತ್ರ ಮಾರುಕಟ್ಟೆ ತೆರೆಯಲಾಗುತ್ತಿದೆ. ಇತ್ತ ತರಕಾರಿ ಸಾಗಿಸುವ ಹಲವು ಲಾರಿಗಳು ಸಂಚಾರಕ್ಕೆ ಇಳಿಯುತ್ತಿಲ್ಲ ಹೀಗಾಗಿ ಬೆಲೆ ಏರಿಕೆ ಅನಿವಾರ್ಯವಾಗಿದೆ ಎಂಬುವುದು ವ್ಯಾಪಾರಸ್ಥರೊಬ್ಬರು ಹೇಳಿದ್ದಾರೆ.

ಮಳೆಗಾಲದ ವೇಳೆ ತರಕಾರಿ ಬೆಲೆಯಲ್ಲಿ ಏರಿಕೆಯಾಗುವುದು ಸಾಮಾನ್ಯ ಆದರೀಗ ಕರೋನಾ ಸಂಕಷ್ಟದ ಪರಿಸ್ಥಿತಿಯಲ್ಲಿ ಬೆಲೆ ಏರಿಕೆ ಮಾಡಿರುವುದು ಸರಿಯಲ್ಲ,  ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಬೆಲೆ ಹೆಚ್ಚಳವಾಗದಂತೆ ನೋಡಿಕೊಳ್ಳಬೇಕೆಂದು ಬೆಂಗಳೂರಿನ ನಿವಾಸಿ ನೀತು ಕೆ. ಎಂಬುವವರು ಹೇಳಿದ್ದಾರೆ.

Related posts

Latest posts

ಬಡವರಿಗೆ ನೆರವಾಗುವುದನ್ನು ತಡೆಯುವ ಪೊಲೀಸ್ ಅಧಿಕಾರಿಗಳಿಗೆ ಬಿಜೆಪಿ ಬ್ಯಾಡ್ಜ್, ಬಾವುಟ ಕೊಡಿ; ಸರಕಾರದ ವಿರುದ್ಧ ಡಿಕೆಶಿ ಗರಂ

'ಬಿಜೆಪಿ ನಾಯಕರು ಜನರ ತೆರಿಗೆ ಹಣದಲ್ಲಿ ನೀಡುವ ಸರ್ಕಾರಿ ಆಹಾರ ಕಿಟ್, ಔಷಧಿ ಮೇಲೆ ತಮ್ಮ ಹಾಗೂ ಪ್ರಧಾನಿ ಫೋಟೋ ಹಾಕಿಕೊಂಡು ಪ್ರಚಾರ ಪಡೆಯುತ್ತಿದ್ದರೆ, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ತಮ್ಮ ಶ್ರಮಪಟ್ಟು ದುಡಿದ...

ಸುರಕ್ಷಿತವಾಗಿ ಲಾಕ್‌ಡೌನ್ ತೆರವುಗೊಳಿಸಲು ಸರ್ಕಾರಕ್ಕೆ 10 ಶಿಫಾರಸು ನೀಡಿದ ತಜ್ಞರ ತಂಡ SAGE

ಕರ್ನಾಟಕದಲ್ಲಿ ಕರೋನಾ ನಿಯಂತ್ರಿಸಲು ಹೇರಿರುವ ಲಾಕ್‌ಡೌನ್ ಅನ್ನು ಹೇಗೆ ಸುರಕ್ಷಿತವಾಗಿ ಹಾಗೂ ಸೂಕ್ತವಾಗಿ ತೆರವುಗೊಳಿಸಬಹುದೆಂದು ತಜ್ಞರ ತಂಡವು ಸರ್ಕಾರಕ್ಕೆ ಹತ್ತು ಶಿಫಾರಸುಗಳನ್ನು ನೀಡಿದೆ. ಕೋವಿಡ್ ವಿಪತ್ತಿನ ವಿರುದ್ಧದ ಹೋರಾಟಕ್ಕೆ ರೂಪುಗೊಂಡ SAGE (ಸಮಾಜಮುಖಿ ಕಾರ್ಯಪ್ರವೃತ್ತ...

ಬೆಲೆ ಏರಿಕೆ ಮಾಡಿ ಸರ್ಕಾರ ಜನರನ್ನು ಪಿಕ್ ಪಾಕೆಟ್ ಮಾಡುತ್ತಿದೆ- ಡಿ.ಕೆ ಶಿವಕುಮಾರ್

 ಇಂಧನ ಬೆಲೆ ಏರಿಕೆ ಹಿನ್ನೆಲೆ,  ರಾಜ್ಯಾದ್ಯಂತ ಜೂನ್‌ 11 ರಿಂದ 15 ರವರೆಗೆ '100 ನಾಟ್ ಔಟ್' ಹೆಸರಲ್ಲಿ ಕಾಂಗ್ರೆಸ್‌ ಪಕ್ಷದಿಂದ ಆಂದೋಲನ ನಡೆಸಲಾಗುತ್ತಿದೆ. ರಾಜ್ಯಾದ್ಯಂತ ಇಂದು 900ಕ್ಕೂ ಹೆಚ್ಚು ಜಿ.ಪಂ, ಹೋಬಳಿ...