ಬೆಂಗಳೂರು : ಕೇಂದ್ರ ಸರ್ಕಾರದ ವಿರುದ್ಧ ಸಚಿವ ರಾಮಲಿಂಗಾರೆಡ್ಡಿ ಹರಿಹಾಯ್ದಿದ್ದು ಕೇಂದ್ರ ಸರ್ಕಾರ ರಾಜ್ಯಕ್ಕೆ ಮಲತಾಯಿ ಧೋರಣೆ ಎಸಗುತ್ತಿದೆ ಅಂತಾ ಕಿಡಿಕಾರಿದ್ದಾರೆ. ವಿಧಾನಸೌಧದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರವಲವಾಗುತ್ತೆ ಎಂಬ ಭಯದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ಕಟ್ ಮಾಡಿದೆ ಎಂದು ಹೇಳಿದ್ದಾರೆ. .

ನಮ್ಮ ಸರ್ಕಾರ ರಾಜ್ಯದ ಜನರಿಗೆ 7 ಕೆಜಿ ಅಕ್ಕಿ ಕೊಡುತ್ತಿತ್ತು, ಆದರೆ ಇದನ್ನು ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ಕಟ್ ಮಾಡಲಾಯ್ತು. ಬಿಜೆಪಿಯವರು ದೊಡ್ಡ ಯಡಬಿಡಂಗಿಗಳು ಎಂದು ಹೇಳಿದ್ದಾರೆ.
ಬಿಜೆಪಿಗರಿಗೆ ಸೋಲಿನಿಂದ ಹತಾಶೆಯಾಗಿದೆ. ನಾವು ಈಗ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಿದ್ರೆ ಲೋಕಸಭಾ ಚುನಾವಣೆಯಲ್ಲಿಯೂ ತಮಗೆ ಸೋಲು ಪಕ್ಕಾ ಅಂತಾ ಈ ರೀತಿ ಮಾಡ್ತಿದ್ದಾರೆ ಅಂತಾ ಆಕ್ರೋಶ ಹೊರಹಾಕಿದ್ರು.
 
			
 
                                 
                                 
                                
