ದುನಿಯಾ ವಿಜಯ್ ( Duniya vijay ) ನಿರ್ದೇಶಿಸಿ ( Direction) ನಟಿಸ್ತಿರೋ ಭೀಮ (Bheema ) ಸಿನಿಮಾ ( Cinema) ಕೆಲಸಗಳುಕೊನೆಯ ಹಂತ ತಲುಪುತಿದ್ದು, ಚಿತ್ರತಂಡ ಸಿನಿಮಾ ರಿಲೀಸ್ಗೆ ಡೇಟ್ ಫಿಕ್ಸ್ (date ) ಮಾಡಿಕೊಳ್ಳುವ ಹಂತದಲ್ಲಿದೆ.
ಸಿನಿಮಾವನ್ನು ನವೆಂಬರ್‌ನಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸಿದೆ. ನವೆಂಬರ್ ನಲ್ಲಿ ದೀಪಾವಳಿ ಇರುವುದರಿಂದ ಅದೇ ದಿನ ಸಿನಿಮಾ ಬಿಡುಗಡೆ ಮಾಡಬೇಕು ಎನ್ನುವ ಲೆಕ್ಕಾಚಾರ ಭೀಮ ಚಿತ್ರತಂಡ ಹಾಕಿಕೊಂಡಿದೆ. ಅಲ್ಲದೆ ಚಿತ್ರತಂಡ ಸಿನಿಮಾ ಪ್ರಚಾರವನ್ನೂ ಶುರು ಮಾಡಿದೆ. ಆದರೆ ಸಿನಿಮಾ ಬಿಡುಗಡೆಯ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ಈ ಸುದ್ದಿ ಓದಿದ್ದೀರಾ? ಅಂಕಣ | ಸಂತ್ರಸ್ತರೊಡನೆ ನಿಲ್ಲುವ ಸಮಾಜ ಕಟ್ಟಬೇಕಿದೆ
ದುನಿಯಾ ವಿಜಯ್,ರಂಗಾಯಣ ರಘು, ಅಚ್ಯುತ್ ಕುಮಾರ್, ಸುಧಿ ಕಾಕ್ರೋಚ್,ಕಲ್ಯಾಣಿ,ಅಶ್ವಿನಿ ಮತ್ತು ಪ್ರಿಯಾ ಶಠಮರ್ಷಣ ಮುಖ್ಯ ಭೂಮಿಕೆಯಲ್ಲಿದ್ದು, ಶಿವಸೇನಾ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ,ಮಾಸ್ತಿ ಡೈಲಾಗ್ಸ್ ಚಿತ್ರಕ್ಕಿದೆ. ದೀಪು ಎಸ್ ಕುಮಾರ್ ಸಂಕಲನ, ಚೇತನ್ ಡಿಸೋಜಾ,ವಿನೋದ್,ಗೌತಮ್ ಸಾಹಸ,ಧನು ನೃತ್ಯ ಭೀಮನಿಗಿದೆ.
ಕೃಷ್ಣ ಸಾರ್ಥಕ್,ಜಗದೀಶ್ ಗೌಡ ನಿರ್ಮಾಣ ಮಾಡಿರೋ ಭೀಮ ಎಲ್ಲಾ ಆ್ಯಂಗಲ್ ನಿಂದ್ಲೂ ಚಿತ್ರರಂಗದಲ್ಲಿ ದೊಡ್ಡ ನಿರಿಕ್ಷೆಯನ್ನ ಹುಟ್ಟಿಸಿದೆ.ಅಲ್ಲದೆ ಈ ವರ್ಷದ ಬಹು ನಿರೀಕ್ಷಿತ ಚಿತ್ರವೂ ಇದೇ ಆಗಿದೆ.