
ಭಾರತದ ಹಲವು ರಾಜ್ಯಗಳಲ್ಲಿ ಮುಂಜಾನೆ ಭೂಕಂಪನದ ಅನುಭವವಾಗಿದೆ. ಬಿಹಾರ, ಕೋಲ್ಕತ್ತಾ, ಮಣಿಪುರ ಮತ್ತು ದೆಹಲಿ-ಎನ್‌ಸಿಆರ್‌ನಲ್ಲಿಯೂ ಭೂಕಂಪದಿಂದಾಗಿ ಭೂಮಿ ಕಂಪಿಸಿದೆ. ಭೂಕಂಪದ ಕೇಂದ್ರಬಿಂದು ನೇಪಾಳವಾಗಿದ್ದು, ಅಲ್ಲಿ 7.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಭೂಕಂಪದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟವಾಗಿರುವ ಬಗ್ಗೆ ಇದುವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
🔴 #BREAKING | Massive earthquake on magnitude 7 jolts Nepal, hits Tibet near border with Nepal. Tremors of the earthquake felt in parts of Bihar and NCR in India as well.#earthquake #Nepal #China #BiharNews pic.twitter.com/mr2tmIDkFW
— Manraj Meena (@ManrajM7) January 7, 2025
ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರದ ಪ್ರಕಾರ, ಭೂಕಂಪದ ಕೇಂದ್ರಬಿಂದು ಚೀನಾದ ಡಿಂಗ್ಗಿ.ನೆರೆಯ ಕಾವ್ರೆಪಲಾಂಚ್‌ವೋಕ್ ಮತ್ತು ಧಾಡಿಂಗ್ ಜಿಲ್ಲೆಗಳಲ್ಲಿಯೂ ಕಂಪನದ ಅನುಭವವಾಗಿದೆ.
ವರದಿಗಳ ಪ್ರಕಾರ, ಬಿಹಾರ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ, ವಿಶೇಷವಾಗಿ ಪಾಟ್ನಾದಲ್ಲಿ ಮತ್ತು ರಾಜ್ಯದ ಉತ್ತರ ಭಾಗದ ಅನೇಕ ಸ್ಥಳಗಳಲ್ಲಿ ಜನರು ತಮ್ಮ ಮನೆಗಳು ಮತ್ತು ಅಪಾರ್ಟ್‌ಮೆಂಟ್‌ಗಳಿಂದ ಹೊರಗೆ ಧಾವಿಸಿದ್ದಾರೆ ಎಂದು ತಿಳಿದು ಬಂದಿದೆ











