ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ, ಅವಮಾನಕರ ಹೇಳಿಕೆ ನೀಡಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷಕ್ಕೆ ಚುನಾವಣಾ ಆಯೋಗ ಮಂಗಳವಾರ ನೋಟಿಸ್ ಜಾರಿ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಕೈಗಾರಿಕೋದ್ಯಮಿ ಗೌತಮ್ ಅದಾನಿ ನಡುವೆ ಸಂಪರ್ಕವಿದೆ ಎಂದು ಆರೋಪಿಸಿ ಎಎಪಿ ಸಾಮಾಜಿಕ ಮಾಧ್ಯಮದಲ್ಲಿ ಮಾಡಿರುವ ಪೋಸ್ಟ್‌ಗಳನ್ನು ಚುನಾವಣಾ ಸಮಿತಿ ಉಲ್ಲೇಖಿಸಿದೆ.
ಚುನಾವಣಾ ಪ್ರಚಾರದಲ್ಲಿ ಘನತೆಯನ್ನು ಕಾಪಾಡಿಕೊಳ್ಳಲು, ಸಭ್ಯತೆಯ ಮಿತಿಗಳನ್ನು ಮೀರದಂತೆ ಮತ್ತು ರಾಜಕೀಯ ಪ್ರತಿಸ್ಪರ್ಧಿಗಳ ವೈಯಕ್ತಿಕ ವ್ಯಕ್ತಿತ್ವ ಮತ್ತು ನಡವಳಿಕೆಯ ಮೇಲೆ ದಾಳಿ ಮಾಡದಂತೆ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳಿಗೆ ಸಲಹೆಗಳನ್ನು ನೀಡಿರುವುದಾಗಿ ಚುನಾವಣಾ ಆಯೋಗ ಹೇಳಿದೆ. ಅದರೂ ಇದನ್ನು ಎಎಪಿ ಪಾಲಿಸಿಲ್ಲ ಎಂದು ಆಯೋಗ ಹೇಳಿದೆ.
ಭಾರತೀಯ ಜನತಾ ಪಕ್ಷದ ಸ್ಟಾರ್ ಪ್ರಚಾರಕರಾಗಿರುವ ಪ್ರಧಾನಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿರುವ ಪೋಸ್ಟ್‌ಗಳ ಬಗ್ಗೆ ನವೆಂಬರ್ 16ರೊಳಗೆ ವಿವರಣೆ ನೀಡುವಂತೆ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್‌ಗೆ ಚುನಾವಣಾ ಆಯೋಗ ಸೂಚಿಸಿದೆ.

ಮಾದರಿ ನೀತಿ ಸಂಹಿತೆ ಉಲ್ಲಂಘನೆಗಾಗಿ ಸೂಕ್ತ ಕ್ರಮವನ್ನು ಏಕೆ ತೆಗೆದುಕೊಳ್ಳಬಾರದು ಎಂದು ಚುನಾವಣಾ ಆಯೋಗಕ್ಕೆ ವಿವರಿಸುವಂತೆಯೂ ಕೇಜ್ರಿವಾಲ್‌ಗೆ ಸೂಚಿಸಲಾಗಿದೆ.










