• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಹಕಾರಿ ಸಂಸ್ಥೆಗಳಿಗೆ ಹೆಚ್ಚಿನ ಸ್ವಾಯತ್ತತೆ ನೀಡಿದಾಗ ಆರ್ಥಿಕ ಪ್ರಗತಿ ಸಾಧ್ಯ: ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
September 10, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಸವರಾಜ ಬೊಮ್ಮಾಯಿ

ಸಹಕಾರಿ ಸಂಘ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಭಾಗಿ

Share on WhatsAppShare on FacebookShare on Telegram

ಸಹಕಾರಿ ಸಂಸ್ಥೆಗಳಿಗೆ ಹೆಚ್ಚಿನ ಸ್ವಾಯತ್ತತೆ ನೀಡಿದಾಗ ಮಾತ್ರ ಆರ್ಥಿಕ ಪ್ರಗತಿ ನಿರೀಕ್ಷಿಸಬಹುದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ADVERTISEMENT

ಹಾವೇರಿ ಹಾನಗಲ್ ತಾಲೂಕಿನ ದಿ.ಅಕ್ಕಿ ಆಲೂರು ಅರ್ಬನ್ ಬ್ಯಾಂಕಿನ ಶತಮಾನೋತ್ಸವದಲ್ಲಿ ಶನಿವಾರ (ಸೆಪ್ಟೆಂಬರ್ 9) ಭಾಗವಹಿಸಿ ಅವರು ಮಾತನಾಡಿದರು.

ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳಲ್ಲಿ ಸಹಕಾರಿಗಳು ಸರಕಾರ ಆಳುತ್ತಾರೆ. ಆದರೆ ನಮ್ಮ ರಾಜ್ಯದಲ್ಲಿ ಸರಕಾರ ಸಹಕಾರ ಕ್ಷೇತ್ರವನ್ನು ಆಳುತ್ತಿದೆ. ಇದು ತಪ್ಪಿದಾಗ ಮಾತ್ರ ಆರ್ಥಿಕ ಬೆಳವಣಿಗೆ ಸಾಧ್ಯವಿದೆ. ಕೇಂದ್ರ ಸರಕಾರ ಪ್ರತ್ಯೇಕವಾಗಿ ಸಹಕಾರ ಇಲಾಖೆ ಮಾಡಿ ಹೊಸ ಸ್ವರೂಪ ನೀಡಿದೆ. ಪ್ರತಿ ಗ್ರಾಮಗಳಲ್ಲಿ ಸಹ ವಿವಿಧೋದ್ದೇಶ ಸಂಸ್ಥೆಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಸಮಸ್ಯೆ, ಸವಾಲುಗಳ ಮಧ್ಯೆಯೂ ಅಕ್ಕಿ ಅಲೂರು ಅರ್ಬನ್ ಬ್ಯಾಂಕು ನೂರು ವರ್ಷ ಆಚರಿಸಿಕೊಳ್ಳುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಕಾನೂನು ಸಚಿವ ಎಚ್.ಕೆ. ಪಾಟೀಲ್ ಮಾತನಾಡಿ, ನಿಯಮಾವಳಿಯಲ್ಲಿನ ತೊಡಕುಗಳಿಂದಾಗಿ ಸಹಕಾರಿ ವಲಯದ ಬ್ಯಾಂಕುಗಳು ಸಂಕಷ್ಟಕ್ಕೆ ಸಿಲುಕಿವೆ. ಇದಕ್ಕೆ ಪರಿಹಾರ ಕಂಡುಕೊಳ್ಳುವ ಮೂಲಕ ಸಹಕಾರಿ ವಲಯ ಉಳಿಸಿಕೊಳ್ಳುವ ಪ್ರಯತ್ನ ಸರಕಾರದಿಂದ ನಡೆದಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಆರ್ಥಿಕ ಶಿಸ್ತು ಕಾಪಾಡಿಕೊಂಡಾಗ ಮಾತ್ರ ಸಹಕಾರಿ ವಲಯದ ಸಂಘ, ಸಂಸ್ಥೆಗಳು ಉಳಿಯಲಿವೆ. ಸೊಸೈಟಿಯಾಗಿ ಸ್ಥಾಪಿಸಲ್ಪಟ್ಟು ಆರ್ಬಿಐ ಲೈಸನ್ಸ್ ಪಡೆದು ಗ್ರಾಹಕರ ವಿಶ್ವಾಸದೊಂದಿಗೆ ಬ್ಯಾಂಕು ನೂರು ವರ್ಷದ ಸಂಭ್ರಮದಲ್ಲಿರುವುದು ಸಂತಸದ ಸಂಗತಿ ಎಂದು ಹೇಳಿದರು.

ಹುಬ್ಬಳ್ಳಿಯ ಮೂರುಸಾವಿರ ಮಠದ ಡಾ.ಗುರುಸಿದ್ದ ರಾಜಯೋಗೀಂದ್ರ ಸ್ವಾಮೀಜಿ, ಸ್ಥಳೀಯ ವಿರಕ್ತಮಠದ ಶಿವಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿ ಸಾರ್ಥಕ ಶತಕ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು. ಶಾಸಕ ಶ್ರೀನಿವಾಸ ಮಾನೆ, ಆರ್ಬಿಐ ಜನರಲ್ ಮ್ಯಾನೇಜರ್ ಮೀನಾಕ್ಷಿ ಗಡ, ಬ್ಯಾಂಕಿನ ಅಧ್ಯಕ್ಷ ಷಣ್ಮುಖಪ್ಪ ಮುಚ್ಚಂಡಿ, ಉಪಾಧ್ಯಕ್ಷ ಸಿದ್ದರಾಮಪ್ಪ ವಿರುಪಣ್ಣನವರ, ಸಾಹಿತಿ ಸತೀಶ ಕುಲಕರ್ಣಿ, ರಾಜಶೇಖರ ಮೆಣಸಿನಕಾಯಿ ಸೇರಿದಂತೆ ಇತರರಿದ್ದರು.

Tags: Basavraj BommaiCo Operative BankHaveriಬಸವರಾಜ ಬೊಮ್ಮಾಯಿಸಹಕಾರಿ ಬ್ಯಾಂಕ್‌ಹಾವೇರಿ
Previous Post

ಆಂಧ್ರ ರಾಜಕೀಯ ; ನಟ, ರಾಜಕಾರಣಿ ಪವನ್ ಕಲ್ಯಾಣ್ ಪೊಲೀಸ್ ವಶಕ್ಕೆ!

Next Post

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ: ಬಸವರಾಜ ಬೊಮ್ಮಾಯಿ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಬಸವರಾಜ ಬೊಮ್ಮಾಯಿ

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ: ಬಸವರಾಜ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada