ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ ತೃಣಮೂಲ ಕಾಂಗ್ರೆಸ್ನ ರಾಷ್ಟ್ರೀಯ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.
ಸೆಪ್ಟೆಂಬರ್ 2 ಶುಕ್ರವಾರ ಬೆಳ್ಳಗ್ಗೆ 10:30ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿದ್ದು ಅಭಿಷೇಕ್ ವಿಚಾರಣೆ ನಡೆಸಲು ದೆಹಲಿಯಿಂದ ಅಧಿಕಾರಿಗಳ ತಂಡ ಬರಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ರಾಷ್ಟ್ರೀಯ ಸುದ್ದಿ ವಾಹಿನಿ ಪಿಟಿಐಗೆ ತಿಳಿಸಿದ್ದಾರೆ.
ಇತ್ತೀಚಿಗೆ ನಡೆದ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದರು ತಮ್ಮ ಸೋದರಳಿಯ ಹಾಗೂ ತಮ್ಮ ಪಕ್ಷದ ನಾಯಕರಿಗೆ ಇಡಿ ನೋಟಿಸ್ ನೀಡಿರುವುದನ್ನು ಖಂಡಿಸಿದ ಅವರು ಇಷ್ಟರಲ್ಲೇ ವಿಚಾರಣೆಗೆ ಹಾಜರಾಗುವಂತೆ ಕೇಂದ್ರಿಯ ಸಂಸ್ಥೆಗಳು ವಿಚಾರನೆಗೆ ಹಾಜರಾಗುವಂತೆ ನೋಟಿಸ್ ನೀಡುತ್ತವೆ ಎಂದು ಶಂಕಿಸಿದ್ದರು.