• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶಿಕ್ಷಣ ಸಚಿವ ಬಿಸಿ ನಾಗೇಶ್ ರೊಂದಿಗೆ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಸಂವಾದ.

ಕರ್ಣ by ಕರ್ಣ
July 19, 2022
in ಕರ್ನಾಟಕ
0
ಶಿಕ್ಷಣ ಸಚಿವ ಬಿಸಿ ನಾಗೇಶ್ ರೊಂದಿಗೆ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಸಂವಾದ.
Share on WhatsAppShare on FacebookShare on Telegram

ಹಳ್ಳಿಗಾಡಿನ ಸರ್ಕಾರಿ ಶಾಲೆ ಮಕ್ಕಳಿಗೆ ಸಾರಿಗೆ ಸೌಲಭ್ಯ ಕಲ್ಪಿಸಲು ನಿಟ್ಟಿನಲ್ಲಿ ‘ಶಾಲೆಗೊಂದು ವಾಹನ’ ಯೋಜನೆ ಜಾರಿಗೆ ಚಿಂತನೆ ನಡೆಸಲಾಗಿದೆ ಎಂದು  ಪ್ರಾಥಮಿಕ, ಪ್ರೌಢ ಶಿಕ್ಷಣ ಮತ್ತು ಸಕಾಲ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು. ನಗರದಲ್ಲಿಂದು ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಂವಾದದಲ್ಲಿ ಮಾತನಾಡಿದ ಅವರು,  ಗ್ರಾಮಾಂತರ ಪ್ರದೇಶದ ಮಕ್ಕಳಿಗೆ ಶಾಲೆಗೆ ಒಳ್ಳೆಯ ಸಮವಸ್ತ್ರ ಧರಿಸಬೇಕು ಎನ್ನುವ ಆಸೆ ಇರುತ್ತೇ. ಅದೇ ರೀತಿ, ತಾವು ವಾಹನದಲ್ಲಿ ತೆರಳಬೇಕು ಎನ್ನುವ ಆಸೆಯೂ ಇದೆ. ಹಾಗಾಗಿ, ಅಗತ್ಯಕ್ಕೆ ತಕ್ಕಂತೆ ಆಯಾ ಕ್ಷೇತ್ರವಾರು ಶಾಸಕರ ಅನುದಾನದಲ್ಲಿ ಶಾಲೆಗೆ ಒಂದು ವಾಹನ ಖರೀದಿ ಮಾಡಲಾಗುವುದು.ಆನಂತರ, ಇದನ್ನು ಆಯಾ ಶಾಲೆಯ ಎಸ್ ಡಿಎಂಸಿ ಸಮಿತಿಗಳೇ ನಿರ್ವಹಣೆ ಮಾಡಲಿವೆ ಎಂದು ಅವರು ವಿವರಿಸಿದರು.

ADVERTISEMENT

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಕನ್ನಡ ಭಾಷೆ ಉಳಿಸುವುದಕ್ಕೆ ಮಾದರಿ ಶಾಲೆಗಳನ್ನು ರೂಪಿಸಲು ಯೋಚಿಸುತ್ತಿದ್ದೇವೆ. ಶೀಘ್ರದಲ್ಲಿಯೇ ಇದನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದ ಅವರು, ಮಾದರಿ ಶಾಲೆಗಳಲ್ಲಿ ಸ್ಪೋಕನ್‌ ಇಂಗ್ಲಿಷ್‌ ಮಾತ್ರ ಕಲಿಸಿ ಇನ್ನುಳಿದವುಗಳನ್ನು ಕನ್ನಡ ಮಾಧ್ಯಮದಲ್ಲಿ ಕಲಿಸುವುದಕ್ಕೆ ಯೋಚಿಸುತ್ತಿದ್ದೇವೆ. ಪ್ರತಿ ಕ್ಲಾಸ್‌ಗೂ ಒಂದು ಕೊಠಡಿ ಇರಬೇಕು, ಪ್ರತಿ ಕ್ಲಾಸ್‌ಗೊಂದು ಶಿಕ್ಷಕರಿರಬೇಕು ಎಂಬುದನ್ನು ಯೋಚನೆ ಮಾಡುತ್ತಿದ್ದೇವೆ. ರಾಜ್ಯದ 1,500 ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿಸುವ ಗುರಿಯಿದೆ ಎಂದರು.

1 ರಿಂದ 8 ನೇ ಕ್ಲಾಸ್ ಮಕ್ಕಳಿಗೆ ಊಟದ ಜತೆ ಮೊಟ್ಟೆ ವಿತರಿಸಲು ನಿರ್ಧರಿಸಲಾಗಿದ್ದು, ಅದರಂತೆ ಶೈಕ್ಷಣಿಕ ಸಾಲಿನ 46  ವಾರಗಳಲ್ಲಿ ಯಾರು ಮೊಟ್ಟೆ ತಿನ್ನಲು ಇಚ್ಛೆ ಪಡುತ್ತಾರೆ, ಆ ವಿದ್ಯಾರ್ಥಿಗಳಿಗೆ ಮಾತ್ರ ಮೊಟ್ಟೆ ನೀಡಲಾಗುವುದು. ಯಾರಿಗೂ ಬಲವಂತವಾಗಿ ಮೊಟ್ಟೆ ತಿನ್ನಿಸುವ ಹಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಅದರ ಜೊತೆಗೆ ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಪೌಷ್ಠಿಕಯುಕ್ತ ಚಿಕ್ಕಿ ಅಥವಾ ಬಾಳೆ ಹಣ್ಣನ್ನು ವಿತರಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಸುಮಾರು 200 ಕೋಟಿ ರೂ. ವೆಚ್ಚವಾಗಬಹುದು ಎಂದು ಸ್ಪಷ್ಟಪಡಿಸಿದರು.

ಪ್ರೌಢಶಾಲಾ ಶಿಕ್ಷಕರ ಮುಂಬಡ್ತಿ ಕುರಿತು ಪ್ರತಿಕ್ರಿಯಿಸಿದ ಅವರು, ಶಿಕ್ಷಕರ ಮುಂಬಡ್ತಿ ಪ್ರಕ್ರಿಯೆ ಶೀಘ್ರದಲ್ಲೇ ಕೈಗೆತ್ತಿಕೊಳ್ಳಲಾಗುವುದು. ಅದರಲ್ಲೂ 60:40  ಅನುಗುಣವಾಗಿ ನೇಮಕ ಮಾಡುವ ಇದೊಂದು ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದ ಅವರು, ಅತಿಥಿ ಶಿಕ್ಷಕರು ಶಾಲಾ ಆರಂಭದಿಂದ ಬರಬೇಕೆಂದು ಸೂಚಿಸಲಾಗಿದ್ದು, 36 ಸಾವಿರ ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ನುಡಿದರು. ಕೊರೋನಾ ಕಾರಣದಿಂದ ಕಲಿಕೆಯಲ್ಲಿಆಗಿದ್ದ ಹಿನ್ನಡೆಯಿಂದ ಮಕ್ಕಳ ಮೇಲೆ ಗಂಭಿರ ಪರಿಣಾಮ ಬೀರಿದೆ. ಅದನ್ನು ಸರಿ ಮಾಡಲು ಕಲಿಕಾ ಚೇತರಿಕೆಗೆ ಒತ್ತು ನೀಡಿದ್ದೇವೆ. ಶಾಲೆಗಳಲ್ಲಿ ಶೇ.100ರಷ್ಟು ಮಕ್ಕಳ ಹಾಜರಾತಿ ಮಾಡುವ ಗುರಿಯಿದೆ ಎಂದು ನುಡಿದರು.

ಸಂವಾದದಲ್ಲಿ ಪ್ರೆಸ್ ಕ್ಲಬ್ ಅಧ್ಯಕ್ಷ ಆರ್.ಶ್ರೀಧರ್ ಪ್ರಸ್ತಾಪಿಸಿ, ಶಾಲಾ ಮಕ್ಕಳಿಗೆ ಅನುಕೂಲ ಆಗುವ ರೀತಿಯಲ್ಲಿ ಬಸ್ ನಿಲ್ದಾಣಗಳಲ್ಲಿ ಬಸ್ ಗಳನ್ನು ನಿಲ್ಲಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಪ್ರಾಥಮಿಕ, ಪ್ರೌಢ ಶಿಕ್ಷಣ ಮತ್ತು ಸಕಾಲ ಸಚಿವ ಬಿ.ಸಿ.ನಾಗೇಶ್, ಇಂದೇ ಕೆಎಸ್ ಆರ್ ಟಿಸಿ, ಬಿಎಂಟಿಸಿ ಎಂಡಿಗಳೊಂದಿಗೆ ಸಭೆ ನಡೆಸಿ, ಸೂಚನೆ ನೀಡಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಈ ವಸ್ತುಗಳಿಗೆ GST ಅನ್ವಯಿಸಲ್ಲ ಆದರೆ ಷರತ್ತುಗಳು ಅನ್ವಯ : ನಿರ್ಮಲಾ ಸೀತಾರಾಮನ್‌ ಹೇಳಿದ್ದೇನು?

Next Post

ಮಂಕಿಪಾಕ್ಸ್ ಪತ್ತೆಯಾದ ಐವರಲ್ಲಿ ಮೂವರು ಸಲಿಂಗಿಗಳು; WHO ಮಾಹಿತಿ

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

May 12, 2026
Next Post
ಮಂಕಿಪಾಕ್ಸ್ ಪತ್ತೆಯಾದ ಐವರಲ್ಲಿ ಮೂವರು ಸಲಿಂಗಿಗಳು; WHO ಮಾಹಿತಿ

ಮಂಕಿಪಾಕ್ಸ್ ಪತ್ತೆಯಾದ ಐವರಲ್ಲಿ ಮೂವರು ಸಲಿಂಗಿಗಳು; WHO ಮಾಹಿತಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada