ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಜಾರಿ ನಿರ್ದೇಶನಾಲಯ ಸೋಮವಾರ ವಿಚಾರಣೆ ನಡೆಸಿದೆ.
ನ್ಯಾಷನಲ್ ಹೆರಾಲ್ಡ್ ಹಗರಣದ ಹಿನ್ನೆಲೆಯಲ್ಲಿ ಸಮನ್ಸ್ ಜಾರಿಗೊಳಿಸಿದ್ದರಿಂದ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಇಂದು ದೆಹಲಿಯ ಇಡಿ ಕಚೇರಿಗೆ ಭೇಟಿ ನೀಡಿದ್ದು, ಅವರನ್ನು ವಿಚಾರಣೆಗೊಳಪಡಿಸಲಾಗಿದೆ.
ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಹಲವರ ಹೆಸರು ಕೇಳಿ ಬಂದಿದ್ದು, ಅವರನ್ನು ಈಗಾಗಲೇ ವಿಚಾರಣೆಗೊಳಪಡಿಸಲಾಗಿದ್ದು, ಇದೀಗ ಮಲ್ಲಿಕಾರ್ಜುನ ಖರ್ಗೆ ಅವರನ್ನು ವಿಚಾರಣೆಗೊಳಪಡಿಸಲಾಗಿದೆ.