ಮೈಸೂರು ಮುಡಾಗೆ ಇಡಿ ಅಧಿಕಾರಿಗಳ ಲಗ್ಗೆ ಹಾಕಿದ್ದಾರೆ. ಮುಡಾದಲ್ಲಿ 50:50 ಆಧಾರದಲ್ಲಿ ಸೈಟ್ ಹಗರಣ ನಡೆದಿದೆ ಎನ್ನುವ ಪ್ರಕರಣದಲ್ಲಿ 12 ಹೆಚ್ಚು ಅಧಿಕಾರಿಗಳು ಮುಡಾ ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ಮುಡಾ ದಾಖಲೆಗಳ ತಲಾಶ್ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಪತ್ನಿ ಪಾವರ್ತಿ ಅವರು ಪಡೆದಿದ್ದ 14 ಸೈಟ್‌ಗಳು ಅಕ್ರಮ ಎಂದು ಆರೋಪಿಸಲಾಗಿತ್ತು.
ಮುಡಾ ಆಯುಕ್ತ ರಘುನಂದನ್ ಅವರಿಂದ ಮಾಹಿತಿ ಸಂಗ್ರಹ ಮಾಡುತ್ತಿದ್ದು, ಸಾವಿರಾರು ಕೋಟಿ ರೂಪಾಯಿ ಹಣಕಾಸಿನ ವ್ಯವಹಾರ ನಡೆದಿರುವ ಬಗ್ಗೆ ದೂರು ದಾಖಲಾಗಿತ್ತು. ಸ್ನೇಹಮಯಿ ಕೃಷ್ಣ ಇಡಿ ಗೆ ದೂರು ಸಲ್ಲಿಸಿದ್ದರು. ಇದೀಗ ಮುಡಾ ಕಚೇರಿಗೆ ಲಗ್ಗೆಯಿಟ್ಟಿರುವ ಇಡಿ ಅಧಿಕಾರಿಗಳು, ಪ್ರಕರಣದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.
ಇಡಿ ಅಧಿಕಾರಿಗಳ ಜೊತೆಗೆ ಸಿಆರ್‌ಪಿಎಫ್ ಯೋಧರು ಆಗಮಿಸಿದ್ದಾರೆ. ಇಪ್ಪತ್ತಕ್ಕೂ ಹೆಚ್ಚು ಸೆಕ್ಯುರಿಟಿ ಫೋರ್ಸ್ ಅಧಿಕಾರಿಗಳಿಗೆ ಸ್ಥಳೀಯ ಪೊಲೀಸರು ಸಾಥ್ ಕೊಟ್ಟಿದ್ದಾರೆ. ಮುಡಾ ಕಚೇರಿಗೆ ಯಾರೂ ಬಾರದಂತೆ ಅಧಿಕಾರಿಗಳು ತಡೆಯುತ್ತಿದ್ದಾರೆ. ಇವತ್ತು ಸಾರ್ವಜನಿಕ ಸೇವೆಗೂ ಕೂಡ ಮುಡಾ ಅಲಭ್ಯ ಆಗಿದೆ. ಮುಡಾ ಅಧ್ಯಕ್ಷ ಹಾಗು ಕಾರ್ಯದರ್ಶಿ ಕಚೇರಿಯಲ್ಲಿ ತೀವ್ರ ಶೋಧ ನಡೆಸಲಾಗ್ತಿದೆ.
ಮುಡಾ ಕಛೇರಿ ಮೇಲೆ ಇಡಿ ಅಧಿಕಾರಿಗಳ ದಾಳಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯಗೆ ಟೆನ್ಷನ್ ಹೆಚ್ಚಿದೆ. ಪಂಚಮಸಾಲಿ ಮೀಸಲಾತಿ ಮೀಟಿಂಗ್ ನಡುವೆಯೂ ಇಡಿ ದಾಳಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ ಸಿಎಂ ಸಿದ್ದರಾಮಯ್ಯ. ಮೈಸೂರು ಪೊಲೀಸ್ ಆಯುಕ್ತರು ಹಾಗು ಗುಪ್ತಚರ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ ಮಾಡಿದ್ದಾರೆ.