ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರೇಜರ್ ಪೇ, ಕ್ಯಾಶ್ ಫ್ರೀ ಹಾಗೂ ಪೇಟಿಎಂ ಬೆಂಗಳೂರಿನ ಕಚೇರಿಗಳ ಮೇಲೆ ದಾಳಿ ಮಾಡಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಆನ್ಲೈನ್ ಕ್ರೆಡಿಟ್ ಕಾರ್ಡ್ ಹಾಗೂ ಮೊಬೈಲ್ ಅಪ್ಲಿಕೇಶನ್ ಮೂಲಕ ಸಾಲ ನೀಡಿ ಜನರಿಗೆ ಕಿರುಕುಳ ನೀಡುತ್ತಿರುವ ಆರೋಪದ ಮೇಲೆ ಸಿಸಿಬಿ ಪೊಲೀಸರು ೊಟ್ಟು 18 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದರು.
ದಾಖಲಾಗಿರುವ ಪ್ರಕರಣಗಳ ಅಂಶಗಳ ಆಧಾರದ ಮೇಲೆ ನಗರದಲ್ಲಿರುವ ಸಂಸ್ಥೆಗಳ ಕಚೇರಿಗಳ ಮೇಲೆ ದಾಳಿ ಮಾಡಲಾಗಿದೆ ಎಂದು ಇಡಿ ತಿಳಿಸಿದೆ.
ಚೀನಾದ ನಿಯಂತ್ರಣದಲ್ಲಿರುವ ಈ ಅಪ್ಲಿಕೇಶನ್ಗಳನ್ನು ಬಳಸಿಕೊಂಡು ಹಣ ಮರುಪಾವತಿ ತಡವಾದಲ್ಲಿ ಜನರಿಗೆ ಕಿರುಕುಳ ನೀಡುತ್ತಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದಾಳಿಯ ವೇಳೆ ಅಕ್ರಮ ಹಣ ವರ್ಗಾವಣೆ ನಡೆದಿರುವುದು ಬೆಳಕಿಗೆ ಬಂದಿದೆ ಮತ್ತು ಇಡಿ ಅಧಿಕಾರಿಗಳು ಲೆಕ್ಕಸಿಗದ ಒಟ್ಟು 17 ಕೋಟಿ ಹಣವನ್ನ ಜಪ್ತಿ ಮಾಡಿದ್ದಾರೆ.