• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನಾಲ್ಕೈದು ಹಳ್ಳಿಗಳಲ್ಲಿ ಪುನರ್ವಸತಿ ಕೇಂದ್ರಗಳ ನಿರ್ಮಾಣದ ಜೊತೆಗೆ ಶಿಕ್ಷಣದ ವ್ಯವಸ್ಥೆ: ಸಿಎಂ ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
March 9, 2023
in ಕರ್ನಾಟಕ, ರಾಜಕೀಯ
0
ನಾಲ್ಕೈದು ಹಳ್ಳಿಗಳಲ್ಲಿ ಪುನರ್ವಸತಿ ಕೇಂದ್ರಗಳ ನಿರ್ಮಾಣದ ಜೊತೆಗೆ ಶಿಕ್ಷಣದ ವ್ಯವಸ್ಥೆ: ಸಿಎಂ ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ವಿಜಯಪುರ: ನಾಲ್ಕೈದು ಹಳ್ಳಿಗಳಲ್ಲಿ ಪುನರ್ವಸತಿ ಕೇಂದ್ರಗಳನ್ನು ಅಕ್ಕಪಕ್ಕದಲ್ಲಿಯೇ ನಿರ್ಮಿಸಿ, ಜನರಿಗೆ ಸಾಮಾನ್ಯ ವ್ಯವಸ್ಥೆಗಳನ್ನು ನೀಡುವ ಜೊತೆಗೆ ಶಾಲಾ ಕಾಲೇಜು, ಪಾಲಿಟೆಕ್ನಿಕ್ ಕಾಲೇಜುಗಳನ್ನೂ ನಿರ್ಮಿಸುವ ಮೂಲಕ ಜನರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ADVERTISEMENT

ಅವರು ಇಂದು   3ನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಭೂಮಿ ಕಳೆದುಕೊಂಡ  ರೈತರಿಗೆ  ಪರಿಹಾರ ವಿತರಿಸಿ ಮಾತನಾಡಿದರು.

ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಜಮೀನು ಮನೆ ಕಳೆದುಕೊಂಡಿರುವವರಿಗೆ ಪರಿಹಾರದ ದರವನ್ನು ಏಕಸ್ವರೂಪಗೊಳಿಸಿ, ಪರಿಹಾರದ ತಾರತಮ್ಯವನ್ನು ಸರಿಪಡಿಸಲು  ಸಚಿವಸಂಪುಟದಲ್ಲಿ ತೀರ್ಮಾನಿಸಿ, ಒಣಬೇಸಾಯಕ್ಕೆ  2ಲಕ್ಷದಿಂದ ಗರಿಷ್ಟ 20 ಲಕ್ಷ ರೂ.ವರೆಗೆ ಪರಿಹಾರ ನೀಡಲಾಗುತ್ತಿದೆ. ರೈತರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಾಗಿದೆ. ಭೂಸ್ವಾಧೀನಕ್ಕೆ ಜಮೀನು ಮನೆ ಕೊಡಲು ಇಚ್ಛಿಸದವರು ಭೂ ಸ್ವಾಧೀನದ ವಿರುದ್ಧ ನ್ಯಾಯಾಯಲಯಕ್ಕೆ ಹೋಗುವ ಅವಕಾಶದ ಬಗ್ಗೆ ಕಾನೂನು ತಜ್ಞರ ಸಲಹೆಯನ್ನು ಪಡೆಯಲಾಗುವುದು. ಆರ್ ಎಂಡ್ ಆರ್ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಮುಳವಾಡಿ, ಚಿಮ್ಮಲಗಿ ಏತ ನೀರಾವರಿ ಪ್ರದೇಶದಲ್ಲಿ 15 ಲಕ್ಷ ಎಕರೆ ಜಮೀನಿಗೆ ನೀರು ಒದಗಿಸಲಾಗುವುದು. ರೇವಣಸಿದ್ಧೇಶ್ವರ ಏತನೀರಾವರಿಗೆ ಅಡಿಗಲ್ಲು ಹಾಕಲಾಗಿದೆ ಎಂದು ತಿಳಿಸಿದರು.

ಮನೆಗಳ ನಿರ್ಮಾಣಕ್ಕೆ ವಿಶೇಷ ಯೋಜನೆ :

ಪುನರ್ವಸತಿ ಮತ್ತು ಪುನರ್ನಿಮಾಣಕ್ಕೆ ಸಂಬಂಧಿಸಿದಂತೆ, ಯೋಜನೆಗಳಿಗೆ ಜಮೀನು ಕಳೆದುಕೊಳ್ಳುವ ರೈತರ ಬದುಕು ಉತ್ತಮವಾಗಿ ರೂಪುಗೊಳ್ಳಬೇಕೆಂಬುದು ನಮ್ಮ ನೀತಿ. ಪುರ್ನವಸತಿ ಕೇಂದ್ರದಲ್ಲಿ ಮೂಲಭೂತ ಸೌಕರ್ಯ, ಶಾಲೆ , ರಸ್ತೆಗಳಿಲ್ಲ ಎಂದು ಹಲವು ದೂರಗಳು ಬರುತ್ತಿವೆ. ಮನೆಕಳೆದುಕೊಳ್ಳುವವರಿಗೆ ಮನೆಯ ಪ್ರಸ್ತುತ ಬೆಲೆ ಯ ಜೊತೆಗೆ ಶೇ.20 ರಷ್ಟು ಪರಿಹಾರವನ್ನು ನೀಡುವ ಹೊಸ ಚಿಂತನೆಯನ್ನು ಮಾಡಲಾಗಿದೆ. ಪುನರ್ವಸತಿ ಮತ್ತು ಪುನರ್ನಿಮಾಣ ಕೇಂದ್ರಗಳಲ್ಲಿ ನಷ್ಟ ಅನುಭವಿಸಿದವರಿಗೆ ಜಮೀನು ನೀಡುವುದರ ಜೊತೆಗೆ ಮನೆಯನ್ನು ನಿರ್ಮಿಸಿಕೊಡುವ ವಿಶೇಷ ಯೋಜನೆಯನ್ನು ಕೈಗೊಳ್ಳಲಾಗುವುದು ಎಂದರು.

ನೀರಾವರಿಗೆ ಹೆಚ್ಚಿನ ಪ್ರಾಶಸ್ತ್ಯ:

ಕೃಷ್ಣೆಯ ತೀರದ ರೈತರು, ನದಿಯ ನೀರನ್ನು ಬಳಸುವ ವ್ಯವಸ್ಥೆ ಇರಲಿಲ್ಲ. ಇಲ್ಲಿನ ರೈತರ ಪ್ರಾಮಾಣಿಕರು ಮತ್ತು ಕಾಯಕನಿಷ್ಠೆಯುಳ್ಳವರು. ಕೃಷ್ಣೆಯ ನೀರು ಹಾಗೂ ಮಣ್ಣು ನಿಸರ್ಗ ಕೊಟ್ಟಿರುವ ವರವಾಗಿದ್ದು, ಗುಣಮಟ್ಟದ ಬೆಳೆಯನ್ನು ಇಲ್ಲಿ ಬೆಳೆಯಲಾಗುತ್ತದೆ. ವಿಜಯಪುರ, ಬೆಳಗಾವಿ, ಬಾಗಲಕೋಟೆಗಳಲ್ಲಿ ಉತ್ತಮ ಗುಣಮಟ್ಟದ ಕಬ್ಬನ್ನು ಬೆಳೆಯಲಾಗುತ್ತಿದೆ. ಪಂಚನದಿಗಳು ಹರಿಯುವ ಪ್ರದೇಶದಲ್ಲಿ ನೀರಾವರಿ ಸಮರ್ಥವಾಗಿಲ್ಲದಿರುವುದು ಚಿಂತನೆಯ ವಿಷಯವಾಗಿದ್ದು, ಈಗ ಪರಿಸ್ಥಿತಿ ಸುಧಾರಿಸುತ್ತಿದೆ. ಮೊದಲಿನಿಂದಲೂ ರಾಜ್ಯದಲ್ಲಿ ನೀರಾವರಿಗೆ ಹೆಚ್ಚಿನ ಪ್ರಾಶಸ್ತ್ಯವನ್ನು ನೀಡಬೇಕಾಗಿತ್ತು. ಈಗಲಾದರೂ ನೀರಾವರಿ ಯೋಜನೆಗಳನ್ನೂ ಪೂರ್ಣಗೊಳಿಸಿ  ಈ ಭಾಗದ ರೈತರಿಗೆ ನ್ಯಾಯ ಒದಗಿಸಬೇಕಿದೆ ಎಂದರು.

ರೈತರ ಹೊಲಗಳಿಗೆ ನೀರು :

ನಾನು ನೀರಾವರಿ ಸಚಿವನಾಗಿದ್ದಾಗ ಕೃಷ್ಣಾ ಜಲಾನಯನ ಪ್ರದೇಶದಲ್ಲಿ  ಎ ಮತ್ತು ಬಿ ಸ್ಕೀಂ ಗಳೆಂದು ನೆನೆಗುದಿಗೆ ಬಿದ್ದಿದ್ದ 9 ನೀರಾವರಿ ಯೋಜನೆಗಳಿಗೆ ಚಾಲನೆ ನೀಡಿದ್ದೇನೆ. ಮುಳವಾಡಿ, ಚಿಮ್ಮಲಗಿ, ಗುತ್ತಿಬಸವಣ್ಣ ಏತನೀರಾವರಿ ,ಕೊಪ್ಪಳ ಏತ ನೀರಾವರಿ ಸೇರಿದಂತೆ ಹಲವು ಯೋಜನೆಗಳಿಗೆ ಅಡಿಗಲ್ಲು ಹಾಕಿ, ಪಂಪ್ ಹೌಸ್ ಗಳು ನಿರ್ಮಾಣಗೊಳಿಸಿ, ನೀರು ರೈತರ ಹೊಲಗಳಿಗೆ ನೀರು ಬಂದಾಗ ನಮ್ಮ ಸಂಕಲ್ಪ ಪೂರ್ಣಗೊಳ್ಳುತ್ತದೆ ಎಂದರು.

ಸಚಿವರಾದ ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ, ಶಾಸಕ ಎಂ.ಬಿ ಪಾಟೀಲ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Tags: Basavaraj BommaiVijayapuraಕೃಷ್ಣಾ ಮೇಲ್ದಂಡೆ ಯೋಜನೆಬಿಜೆಪಿ
Previous Post

ಬಸವ ಉತ್ಸವ ಉದ್ಘಾಟನಾ ಸಮಾರಂಭ: ವಿವಿಧ ಕಾರ್ಯಕ್ರಮ

Next Post

ತೃತಿಯ ಲಿಂಗಿ ಮತದಾರರಿಗೆ ಮತದಾರರ ಚೀಟಿ: ಡಾ. ಕೆ ವಿ ರಾಜೇಂದ್ರ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ತೃತಿಯ ಲಿಂಗಿ ಮತದಾರರಿಗೆ ಮತದಾರರ ಚೀಟಿ: ಡಾ. ಕೆ ವಿ ರಾಜೇಂದ್ರ

ತೃತಿಯ ಲಿಂಗಿ ಮತದಾರರಿಗೆ ಮತದಾರರ ಚೀಟಿ: ಡಾ. ಕೆ ವಿ ರಾಜೇಂದ್ರ

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada