• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

EIA2020; ಕರಡು, ಸೂಟ್-ಬೂಟ್ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಡೆ: ಶ್ರೀನಿವಾಸ್ ಬಿ.ವಿ

by
August 13, 2020
in ದೇಶ
0
EIA2020; ಕರಡು
Share on WhatsAppShare on FacebookShare on Telegram

ಕೇಂದ್ರ ಹೊರಡಿಸಿರುವ ಪರಿಸರ ಪ್ರಭಾವದ ಮೌಲ್ಯಮಾಪನ ಅಧಿಸೂಚನೆಯು (ಪರಿಸರ ಪರಿಣಾಮದ ಮೌಲ್ಯಮಾಪನ ಅಧಿಸೂಚನೆ 2020) ಈ ಸರ್ಕಾರದ ಮತ್ತೊಂದು ಜನ ವಿರೋಧಿ ನಡೆಯಾಗಿದೆ ಎಂದು ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಅವರು ಅಭಿಪ್ರಾಯಪಟ್ಟಿದ್ದಾರೆ.

ADVERTISEMENT

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಅವರು, ಈಗಾಗಲೇ ಕೇಂದ್ರ ಸರ್ಕಾರ ದೇಶದ ಆರ್ಥಿಕತೆಯನ್ನು ಪ್ರಪಾತಕ್ಕೆ ತಳ್ಳಿ ಯುವಜನರ ಉದ್ಯೋಗವನ್ನು ಕಸಿದುಕೊಂಡಿದೆ. ಈಗ ಕೇಂದ್ರ ಸರ್ಕಾರವು ತನ್ನ ಸೂಟ್-ಬೂಟ್ ಸ್ನೇಹಿತರ ಅನುಕೂಲಕ್ಕಾಗಿ ಪರಿಸರಕ್ಕೆ ಮಾರಕವಾಗಿರುವ ಪರಿಸರ ಪ್ರಭಾವದ ಮೌಲ್ಯಮಾಪನ ಅಧಿಸೂಚನೆಯನ್ನು ಹೊರಡಿಸಿದೆ. ಇದು ಜನ ವಿರೋಧಿ ಮತ್ತು ಪ್ರಜಾಪ್ರಭುತ್ವ ವಿರೋಧಿಯೂ ಆಗಿದೆ ಎಂದಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

“ಇಐಎ 2020ರ ಕರಡಿನ ಮೂಲಕ ಭಾರತದ ಪರಿಸರ, ಜೀವವೈವಿಧ್ಯ, ಪರಿಸರ ವಿಜ್ಞಾನ, ಪ್ರಾಣಿ, ಸಸ್ಯ, ಬಡ ಬುಡಕಟ್ಟು ಮತ್ತು ಹಿಂದುಳಿದ ವರ್ಗದ ಜನರು ಮತ್ತು ಭವಿಷ್ಯದ ಪೀಳಿಗೆಗೆ ಅಪಾಯವನ್ನುಂಟು ಮಾಡಲು ಸಂಚು ರೂಪಿಸಲಾಗಿದೆ” ಎಂದು ಶ್ರೀನಿವಾಸ್ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಹೊಸ ಪರಿಸರ ಪ್ರಭಾವದ ಮೌಲ್ಯಮಾಪನ ಅಧಿಸೂಚನೆಯು ‘ಪರಿಹಾರ ಕೊಟ್ಟು ಪರಿಸರ ಮಾಲಿನ್ಯ ಮಾಡಿ’ ಎಂಬ ರೀತಿ ಇದೆ. ಈ ಮೂಲಕ ತನ್ನ ಸೂಟ್-ಬೂಟ್ ಸ್ನೇಹಿತರಿಗೆ ಬಿಜೆಪಿ ಸರ್ಕಾರವು ದೇಶದ ಪರಿಸರ ಮತ್ತು ನೈಸರ್ಗಿಕ ಸಂಪನ್ಮೂಲಗಳನ್ನು ಮುಕ್ತ ಲೂಟಿ ಮಾಡಲು ಮಾರ್ಗವನ್ನು ಸಿದ್ಧಪಡಿಸಿಕೊಡುತ್ತಿದೆ. ಇಂಥ ಅವಕಾಶ ನೀಡುವ ಮೂಲಕ ನೈಸರ್ಗಿಕ ಸಂಪನ್ಮೂಲಗಳ ಲೂಟಿಯನ್ನು ಉತ್ತೇಜಿಸುತ್ತಿದೆ ಎಂದು ಶ್ರೀನಿವಾಸ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಮೋದಿ ಸರ್ಕಾರಕ್ಕೆ ಸಾರ್ವಜನಿಕ ಹಿತಾಸಕ್ತಿ ಮತ್ತು ಪ್ರಜಾಪ್ರಭುತ್ವದ ಬಗ್ಗೆ ನಂಬಿಕೆಯಿಲ್ಲ. ಆದ್ದರಿಂದ ಈ ಉದ್ದೇಶಿತ ಕರಡಿನಲ್ಲಿ ಸಾರ್ವಜನಿಕ ಸಮಾಲೋಚನೆಯನ್ನು ಅನೌಪಚಾರಿಕಗೊಳಿಸಲಾಗಿದೆ”. ಸೂಟ್ ಬೂಟ್ ಎನ್ನುವುದು ಮೋದಿ ಸರ್ಕಾರದ ನೀತಿಯಾಗಿದ್ದು, ಇದರ ಮೂಲಕ ಭಾರತದ ಜನರ ಜೀವನ, ಜೀವನೋಪಾಯ, ಶುದ್ಧ ಗಾಳಿ, ಶುದ್ಧ ನೀರನ್ನು ಕಸಿದುಕೊಳ್ಳಲಾಗುತ್ತಿದೆ. ಈ ನೀತಿಯ ದೂರಗಾಮಿ ಪರಿಣಾಮಗಳು ಭವಿಷ್ಯದ ಪೀಳಿಗೆಗೆ ಪ್ರತಿಕೂಲವಾಗಿ ಪರಿಣಮಿಸುತ್ತವೆ. ಇದಲ್ಲದೆ ಒಕ್ಕೂಟ ವ್ಯವಸ್ಥೆಯ ಮನೋಭಾವವನ್ನು ಕೊಲ್ಲುವ ಮೂಲಕ ರಾಜ್ಯಗಳಲ್ಲಿ ಪರಿಸರ ಪ್ರಭಾವದ ಅಧಿಕಾರಿಗಳನ್ನು ನಿರಂಕುಶಾಧಿಕಾರದಲ್ಲಿ ನೇಮಿಸುವ ಹಕ್ಕನ್ನು ಕೇಂದ್ರ ಸರ್ಕಾರ ಪಡೆದುಕೊಳ್ಳುತ್ತಿದೆ ಎಂದು ಶ್ರೀನಿವಾಸ್ ಕಿಡಿಕಾರಿದ್ದಾರೆ.

“ಇಐಎ 2020ರ ಕರಡನ್ನು ನೋಡಿದಾಗ ಕೇಂದ್ರದಲ್ಲಿರುವ ಮೋದಿ ಸರ್ಕಾರವು ಕೈಗಾರಿಕೋದ್ಯಮಿ ಸ್ನೇಹಿತರ ಲಾಭದ ಬಗ್ಗೆ ಮಾತ್ರ ಕಾಳಜಿ ವಹಿಸುತ್ತದೆಯೇ ಹೊರತು ಪರಿಸರ ಮತ್ತು ಪರಿಸರ ವಿಜ್ಞಾನದ ಬಗ್ಗೆ ಅಲ್ಲ ಎಂಬುದು ಗೊತ್ತಾಗುತ್ತದೆ. 40 ರೀತಿಯ ಯೋಜನೆಗಳನ್ನು ಪರಿಸರ ಪರಿಣಾಮದ ಮೌಲ್ಯಮಾಪನದಿಂದ ಹೊರಗಿಡಲಾಗಿದೆ. ಈ ನೀತಿಯು ಸಾಮಾನ್ಯ ಜನರ ಜೀವನದ ಮೇಲೆ ಪರಿಣಾಮ ಬೀರಲಿದೆ. ಆದ್ದರಿಂದ ಈ ಕರಡು ಸಂಸತ್ತಿನಲ್ಲಿ ಚರ್ಚೆಯಾಗಬೇಕು. ಆದರೆ ಕೇಂದ್ರ ಸರ್ಕಾರ ಇದನ್ನು ಸಾರ್ವಜನಿಕ ಚರ್ಚೆಗೆ ತರುವುದನ್ನು ನಿರಂತರವಾಗಿ ತಪ್ಪಿಸುತ್ತಿದೆ. ಸಂಸದೀಯ ಸಂಪ್ರದಾಯಗಳಲ್ಲಿ ಮೋದಿ ಸರ್ಕಾರಕ್ಕೆ ನಂಬಿಕೆ ಇಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ” ಎಂದು ಶ್ರೀನಿವಾಸ್ ಬಿ.ವಿ. ಹೇಳಿದ್ದಾರೆ.

ಭಾರತದ ಜನಸಂಖ್ಯೆಯ 14 ಪ್ರತಿಶತ ಕರಾವಳಿ ಜಿಲ್ಲೆಗಳಲ್ಲಿ ವಾಸಿಸುತ್ತಿದೆ. ಭಾರತದ ಜನಸಂಖ್ಯೆಯ ಹೆಚ್ಚಿನ ಭಾಗವು ಬಡತನ ರೇಖೆಗಿಂತ ಕೆಳಗಿದೆ ಮತ್ತು ಸಮುದ್ರ ಮಟ್ಟ ಏರಿಕೆ, ಹೆಚ್ಚಿನ ತಾಪಮಾನ ಮತ್ತು ಹವಾಮಾನ ಅನಿರೀಕ್ಷಿತ ಘಟನೆಗಳಿಂದ ಪ್ರಭಾವಿತವಾಗಿರುತ್ತದೆ. ಈ ಅಂಶಗಳನ್ನು ಪರಿಸರ ಪ್ರಭಾವದ ಮೌಲ್ಯಮಾಪನ ಅಧಿಸೂಚನೆಯಲ್ಲಿ ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಈ ಅಧಿಸೂಚನೆಯನ್ನು ಕೆಲವೇ ಕೆಲವರ ಲಾಭಕ್ಕಾಗಿ ವಿನ್ಯಾಸಗೊಳಿಸಲಾಗಿದೆ ಎಂದು ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Tags: EIAಇಐಎ
Previous Post

ಪ್ರಣಬ್ ಮುಖರ್ಜಿ ನಿಧನ ವಾರ್ತೆ ಸುಳ್ಳು: ಪುತ್ರ ಅಭಿಜಿತ್ ಸ್ಪಷ್ಟನೆ

Next Post

ಬೆಂಗಳೂರು ಗಲಭೆ: ದಲಿತ vs ಮುಸ್ಲಿಂ ಆಯಾಮ ನೀಡಿದ ಬಿಎಲ್ ಸಂತೋಷ್‌ಗೆ ಜ಼ಮೀರ್ ಕ್ಲಾಸ್

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
Next Post
ಬೆಂಗಳೂರು ಗಲಭೆ: ದಲಿತ vs ಮುಸ್ಲಿಂ ಆಯಾಮ ನೀಡಿದ ಬಿಎಲ್ ಸಂತೋಷ್‌ಗೆ ಜ಼ಮೀರ್ ಕ್ಲಾಸ್

ಬೆಂಗಳೂರು ಗಲಭೆ: ದಲಿತ vs ಮುಸ್ಲಿಂ ಆಯಾಮ ನೀಡಿದ ಬಿಎಲ್ ಸಂತೋಷ್‌ಗೆ ಜ಼ಮೀರ್ ಕ್ಲಾಸ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada