ಮಹಾರಾಷ್ಟ್ರ ನೂತನ ಮೈತ್ರಿ ಸರ್ಕಾರದ ಸಚಿವ ಸಂಪುಟ ರಚನೆ ಕುರಿತು ಮಾತುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ದೆಹಲಿಗೆ ದೌಡಾಯಿಸಿದ್ದು ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಆದರೆ, ಸುದ್ದಿ ಮೂಲಗಳ ಪ್ರಕಾರ ಸಂಪುಟ ರಚನೆ ಕುರಿತು ಬಿಜೆಪಿ ವರಿಷ್ಠರೊಂದಿಗೆ ಭೇಟಿ ಮಾಡಿ ಈ ಇಬ್ಬರು ನಾಯಕರು ಚರ್ಚಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಈಗಾಗಲೇ ಸಂಪುಟ ಸೇರುವವರ ಪಟ್ಟಿಯನ್ನು ಬಿಜೆಪಿ ವರಿಷ್ಠರಿಗೆ ಕಳುಹಿಸಿದ್ದು ಯಾರಿಗೆ ಯಾವ ಖಾತೆ ನೀಡಬೇಕು ಎಂಬುದರ ಬಗ್ಗೆ ಒಪ್ಪಿಗೆ ಪಡೆಯಲು ದೆಹಲಿಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ಮಹಾರಾಷ್ಟ್ರದ ಮುಖ್ಯಮಂತ್ರಿ-ಉಪಮುಖ್ಯಮಂತ್ರಿಯಾಗಿ ಶಿಂಧೆ ಹಾಗೂ ಫಡ್ನವೀಸ್ ಪ್ರಮಾಣ ವಚನ ಸ್ವೀಕರಿಸಿ 35 ದಿನಗಳು ಕಳೆದರು ಸಹ ಇನ್ನು ಸಹ ಸಚಿವ ಸಂಪುಟ ರಚನೆಯಾಗಿಲ್ಲ.
ಆಗಷ್ಟ್ 15ರೊಳಗೆ ಸಚಿವ ಸಂಪುಟ ರಚನೆಯಾಗಲಿದೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ಬರದಿ ಮಾಡಿವೆ.