ನವದೆಹಲಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಗಳ ಸಿದ್ಧತೆಯನ್ನು ಪರಿಶೀಲಿಸಲು ಚುನಾವಣಾ ಆಯೋಗ ಪ್ರವಾಸ ನಿಗದಿ ಮಾಡಿದೆ.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದಲ್ಲಿ, ಚುನಾವಣಾ ಆಯುಕ್ತರಾದ ಅನುಪ್ ಚಂದ್ರ ಪಾಂಡೆ ಮತ್ತು ಅರುಣ್ ಗೋಯೆಲ್ ಅವರನ್ನೊಳಗೊಂಡ ಆಯೋಗವು ಜನವರಿ 7 ಮತ್ತು 10 ರ ನಡುವೆ ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಪರಿಶೀಲನೆ ನಡೆಸಲು ನಿರ್ಧರಿಸಿದೆ.
ಇದಕ್ಕೂ ಮುನ್ನ ಉಪಚುನಾವಣಾ ಆಯುಕ್ತರು ಜನವರಿ 6ರಂದು ಎರಡು ರಾಜ್ಯಗಳಲ್ಲಿ ಸಿದ್ಧತೆಗಳ ಬಗೆಗಿನ ಮಾಹಿತಿಯನ್ನು ಆಯೋಗಕ್ಕೆ ಒದಗಿಸಲಿದ್ದಾರೆ.
ಉಪಚುನಾವಣಾ ಆಯುಕ್ತರು ಈಗಾಗಲೇ ಬಹುತೇಕ ಎಲ್ಲ ರಾಜ್ಯಗಳಿಗೆ ಭೇಟಿ ನೀಡಿ ರಾಜಕೀಯ ಪಕ್ಷಗಳು, ಹಿರಿಯ ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳು, ಬೂತ್ ಮಟ್ಟದ ಚುನಾವಣಾ ಸಿಬ್ಬಂದಿಗಳನ್ನು ಭೇಟಿ ಮಾಡಿದ್ದಾರೆ.
ಚುನಾವಣೆಗಳಿಗೆ ಮುಂಚಿತವಾಗಿ ರಾಜ್ಯಗಳ ಪ್ರವಾಸವನ್ನು ಕೈಗೊಳ್ಳುವುದು ಚುನಾವಣಾ ಆಯೋಗದ ಸಾಮಾನ್ಯ ಪ್ರಕ್ರಿಯೆಯಾಗಿದೆ. ಆದರೆ, ಆಯೋಗದ ಅಧಿಕಾರಿಗಳು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆಯೇ ಎಂಬುದು ಇನ್ನೂ ಖಚಿತವಾಗಿಲ್ಲ.