ದೇಶದಲ್ಲಿ ಐದು ರಾಜ್ಯಗಳಲ್ಲಿ ವಿಧಾನಸಭಾ ಉಪಚುನಾವಣೆಯ ಹಾಗು ಕರ್ನಾಟಕದ ಲೋಕಸಭಾ ಮತ್ತು ವಿಧಾನಸಭಾ ಉಪಚುನಾವಣಾ ಫಲಿತಾಂಶ ಮೇ 2 ರಂದು ಪ್ರಕಟವಾಗಲಿದೆ. ಮತ ಏಣಿಕೆ ನಂತರ ಗೆದ್ದ ಪಕ್ಷ ವಿಜಯೋತ್ಸವ ಆಚರಿಸುವಂತಿಲ್ಲ ಎಂದು ಚುನಾವಣಾ ಆಯೋಗ ಖಡಕ್ ಆದೇಶ ಹೊರಡಿಸಿದೆ.
ಅಸ್ಸಾಂ, ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ ಮತ್ತು ಪುದುಚೇರಿಯ ವಿಧಾನಸಭೆ ಚುನಾವಣಾ ಫಲಿತಾಂಶ ಸೇರಿದಂತೆ, ಕರ್ನಾಟಕದ ಬೆಳಗಾವಿ ಲೋಕಸಭಾ, ಬಸವಕಲ್ಯಾಣ, ಮಸ್ಕಿ ಉಪಚುನಾವಣೆಯ ಫಲಿತಾಂಶ ಮೇ 2 ರಂದು ಬರಲಿದೆ.
ಕರೋನಾ ಎರಡನೇ ಅಲೆ ದೇಶವನ್ನು ಸಂಕಷ್ಟಕ್ಕೆ ಸಿಲುಕಿಸಿದ್ದು, ಈ ಸಂಬಂಧ ಕರೋನಾ ನಿಯಂತ್ರಣದ ಸಲುವಾಗಿ ಚುನಾವಣಾ ಆಯೋಗ ಈ ತೀರ್ಮಾನ ಕೈಗೊಂಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈಗಾಗಲೇ ಪಶ್ಚಿಮ ಬಂಗಾಳದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ ಅಭ್ಯರ್ಥಿಗಳ ವಿರುದ್ಧ ಎಫ್ಐಆರ್ ಮತ್ತು ಶೋಕಾಸ್ ನೋಟಿಸ್ ಕೊಟ್ಟಿದೆ.