ಮುಸ್ಲಿಂ ಸಮುದಾಯದ ಮೀಸಲಾತಿಗೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಘಟಕ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದ ಕಾರ್ಟೂನ್ ವಿಡಿಯೋವನ್ನು ತಕ್ಷಣ ತೆಗೆದು ಹಾಕುವಂತೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ. ಈ ಸಂಬಂಧ X ನ ನೋಡಲ್ ಅಧಿಕಾರಿಗೆ ಪತ್ರ ಬರೆದಿದ್ದು, ಪತ್ರದ ಜೊತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ಧ ಈಗಾಗಲೇ ದಾಖಲಾಗಿರುವ ಎಫ್ಐಆರ್ ಪ್ರತಿಯನ್ನು ಸಹ ಚುನಾವಣಾ ಆಯೋಗ ಲಗತ್ತಿಸಿದೆ.

SC ST ಹಾಗು ಓಬಿಸಿಯವರನ್ನ ಮೊಟ್ಟೆಗಳಂತೆ ಬಿಂಬಿಸಿದ್ರು. ಆ ಮೊಟ್ಟೆಗಳಿರುವ ಬುಟ್ಟಿಗೆ ಮುಸ್ಲಿಂ ಮೊಟ್ಟೆಯನ್ನು ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ತಂದು ಇಡುವಂತೆ ಗ್ರಾಫಿಕ್ಸ್ ಮಾಡಿದ್ರು. ಆಮೇಲೆ ಮೊಟ್ಟೆ ಮರಿಯಾದ ಬಳಿಕ SC-ST ಮತ್ತು ಹಿಂದುಳಿದ ವರ್ಗಗಳ ಮರಿಗಳಿಗೆ ಸೇರಬೇಕಾದ ಅನುದಾನ ಮುಸ್ಲಿಂ ಮರಿಗಳಿಗೆ ಮಾತ್ರ ನೀಡುತ್ತಾರೆ ಅಂತ ರಾಜ್ಯ ಬಿಜೆಪಿ ನಾಯಕರು ಶೀರ್ಷಿಕೆ ಹಾಕಿದ್ರು. ಈ ವಿಡಿಯೋ ತುಣಕನ್ನ ಬಿಜೆಪಿಯ ಕರ್ನಾಟಕ ರಾಜ್ಯ ಘಟಕ ‘ಎಕ್ಸ್’ ಖಾತೆಯಲ್ಲಿ ಶನಿವಾರ ಹಂಚಿಕೊಂಡಿತ್ತು.







