ಜೂನ್ 13ರಂದು ವಿಧಾನ ಪರಿಷತ್ ನ ವಾಯವ್ಯ ಮತ್ತು ದಕ್ಷಿಣ ಪದವೀಧರರ ಕ್ಷೇತ್ರಗಳು, ವಾಯವ್ಯ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ಬುಧವಾರ ಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು, ದಕ್ಷಿಣ ಪದವೀಧರರ ಕ್ಷೇತ್ರದ 2515 ಮತಗಳ ಪಡೆಯುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಮುನ್ನಡೆ ಸಾಧಿಸಿದ್ದಾರೆ.

ಹೌದು, ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಮೊದಲ ಸುತ್ತಿನಲ್ಲಿ ಮುನ್ನಡೆ ಸಾಧಿಸಿದ್ದು, ಒಟ್ಟು ಮಧು ಜಿ. ಮಾದೇಗೌಡ (ಕಾಂಗ್ರೆಸ್)- 2515 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ. ಬಸವರಾಜ ಗುರಿಕಾರ (ಕಾಂಗ್ರೆಸ್)- 2,139 ತೀರ್ವ ಹಿನ್ನಡೆಯಲ್ಲಿದ್ದಾರೆ ತೀರ್ವ ಹಿನ್ನಡೆಯಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿ ಮೈ.ವಿ ರವಿಶಂಕರ್ 1050 ಎರಡನೇ ಸ್ಥಾನದಲ್ಲಿದ್ದರೆ. ಜೆಡಿಎಸ್ ಅಭ್ಯರ್ಥಿ ಹೆಚ್.ಕೆ ರಾಮು-800 ಮತಗಳನ್ನು ಪಡೆದು ತೀವ್ರ ಹಿನ್ನಡೆ ಸಾಧಿಸಿದ್ದಾರೆ. ಅಂಚೆ ಮತದಾನದಲ್ಲಿ ಕಾಂಗ್ರೆಸ್ ಅಲ್ಪಮುನ್ನಡೆ ಕಾಯ್ದುಕೊಂಡಿದೆ.