ಟ್ರೆಂಡ್ ಪ್ರಕಾರ ಬಿಜೆಪಿ ಪಕ್ಷವು ಮೂರು ರಾಜ್ಯಗಳಲ್ಲಿ ಮುನ್ನಡೆ ಸಾಧಿಸಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಂಜೆ ದೆಹಲಿಯ ಫಕ್ಷದ ಮುಖ್ಯ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಮಧ್ಯಪ್ರದೇಶದ 230 ಸ್ಥಾನಗಳಲ್ಲಿ ಬಿಜೆಪಿ 161 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಛತ್ತೀಸಗಢದ 90 ವಿಧಾನಸಭಾ ಸ್ಥಾನಗಳ ಪೈಕಿ 55 ರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ರಾಜಸ್ಥಾನದ 199 ಸ್ಥಾನಗಳಲ್ಲಿ ಬಿಜೆಪಿ 113 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ.
ತೆಲಂಗಾಣದ 119 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 63 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ 8 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
![](https://pratidhvani.com/wp-content/uploads/2023/10/pm-modi-21-1024x683.jpg)
ಮೂರರಲ್ಲಿ ಬಿಜೆಪಿ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರುವುದು ನಿಚ್ಚಳವಾಗಿದೆ.