• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಚುನಾವಣಾ ಫಲಿತಾಂಶ: ಮೋದಿಗೆ ಏಕಾಂಗಿಯಾಗಿ ಹೋರಾಟ ನಡೆಸಿದ್ದ ಮಮತಾ ಬ್ಯಾನರ್ಜಿ‌ ಮರ್ಮಾಘಾತ ನೀಡಿದ್ದಾರೆ -ಸಿದ್ದರಾಮಯ್ಯ

Any Mind by Any Mind
May 2, 2021
in ಕರ್ನಾಟಕ
0
ಚುನಾವಣಾ ಫಲಿತಾಂಶ: ಮೋದಿಗೆ ಏಕಾಂಗಿಯಾಗಿ ಹೋರಾಟ ನಡೆಸಿದ್ದ ಮಮತಾ ಬ್ಯಾನರ್ಜಿ‌ ಮರ್ಮಾಘಾತ ನೀಡಿದ್ದಾರೆ -ಸಿದ್ದರಾಮಯ್ಯ
Share on WhatsAppShare on FacebookShare on Telegram

ದೇಶದಲ್ಲಿ ಬಿಜೆಪಿಯ ಅವನತಿಯ ಪರ್ವ ಶುರುವಾಗಿದೆ. ಪಶ್ಚಿಮ‌ ಬಂಗಾಳದಲ್ಲಿ‌  ದುಡ್ಡು,‌ ಅಧಿಕಾರ ಮತ್ತು ತೋಳ್ಬಲದ ವಾಮಮಾರ್ಗದ ಮೂಲಕ‌ ಸ್ವಲ್ಪಮಟ್ಟಿಗೆ ಬಲವನ್ನು ಹೆಚ್ಚಿಸಿಕೊಂಡರೂ ಗೆಲುವಿನ‌‌ ದಡ‌ದ ಸಮೀಪಕ್ಕೆ ಬರಲಾಗದೆ ಮುಖಭಂಗ ಅನುಭವಿಸಿದೆ ಎಂದು ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಬಿಜೆಪಿಯನ್ನು ಟೀಕಿಸಿದ್ದಾರೆ.

ADVERTISEMENT

ಪಶ್ಚಿಮ ಬಂಗಾಳ ಚುನಾವಣೆಯನ್ನು ಗೆಲ್ಲಲೇಬೇಕೆಂಬ ಹಟದಿಂದ‌ ಬಿಜೆಪಿ ಕರೋನಾ ಸೋಂಕಿನ‌ ಅಪಾಯವನ್ನೂ ಧಿಕ್ಕರಿಸಿ, ಚುನಾವಣಾ ಆಯೋಗದ ಮೇಲೆ‌ ಒತ್ತಡ ಹೇರಿ ಅಲ್ಲಿ ಚುನಾವಣೆಯನ್ನು ಘೋಷಿಸಿತ್ತು.ಸೋಲಿನ‌ ಹೊಣೆಯ ಜೊತೆ ಕರೋನಾದಿಂದ ಪ್ರಾಣ ಕಳೆದುಕೊಂಡ ಅಮಾಯಕ‌ ಜನರ ಸಾವಿನ ಹೊಣೆಯನ್ನೂ ನರೇಂದ್ರ ಮೋದಿ‌ ಮತ್ತು ಅಮಿತ್ ಶಾ  ಹೊರಬೇಕಾಗುತ್ತದೆ.

ತಾನು ದೇಶದ ಪ್ರಧಾನಿ ಎನ್ನುವುದನ್ನೇ ಮರೆತು, ಪೂರ್ಣಾವಧಿ ಬಿಜೆಪಿಯ ನಾಯಕನ ರೀತಿ  ಅಲ್ಲಿ ಚುನಾವಣಾ ಪ್ರಚಾರ ನಡೆಸಿದ್ದ ನರೇಂದ್ರ ಮೋದಿಯವರಿಗೆ ಏಕಾಂಗಿಯಾಗಿ ಹೋರಾಟ ನಡೆಸಿದ್ದ ಮಮತಾ ಬ್ಯಾನರ್ಜಿ‌ ಮರ್ಮಾಘಾತ ನೀಡಿದ್ದಾರೆಂದು ಪ್ರಧಾನಿ ಮೋದಿಯನ್ನು ಕಾಲೆಳೆದಿದ್ದಾರೆ.

ಪಶ್ಚಿಮ ಬಂಗಾಳದ ಗೆಲುವಿನ ರೂವಾರಿ‌ ಮಮತಾ ಬ್ಯಾನರ್ಜಿ ಅವರಿಗೆ ನನ್ನ ಅಭಿನಂದನೆಗಳು.

ತಮಿಳುನಾಡು ಮತ್ತು ಕೇರಳ ರಾಜ್ಯಗಳ ಮತದಾರರು ಬಿಜೆಪಿಯನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ತಮಿಳುನಾಡಿನಲ್ಲಿ ಡಿಎಂಕೆ ಮೈತ್ರಿಕೂಟ ಮತ್ತು ಕೇರಳದಲ್ಲಿ‌‌ ಎಲ್‌ಡಿಎಫ್ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಅಲ್ಲಿನ‌‌ ಗೆಲುವಿನ ರೂವಾರಿಗಳಾದ ಎಂ.ಕೆ‌.ಸ್ಟಾಲಿನ್ ಮತ್ತು ಪಿಣರಾಯ್ ವಿಜಯನ್ ಅವರಿಗೂ ಸಿದ್ದರಾಮಯ್ಯ ಅಭಿನಂದನೆ ತಿಳಿಸಿದ್ದಾರೆ.

ನಿರೀಕ್ಷೆಯಂತೆ ಅಸ್ಸಾಂ‌ ಮತ್ತು ಪುದುಚೇರಿ ರಾಜ್ಯಗಳ ಗೆಲುವಷ್ಟೇ ಸೋತು ಹೋದ ಬಿಜೆಪಿಗೆ ಸಿಕ್ಕಿರುವ ಸಮಾಧಾನಕರ ಬಹುಮಾನ. ಪಶ್ಚಿಮ ಬಂಗಾಳದಲ್ಲಿ‌ ಕಾಂಗ್ರೆಸ್ ಮತ್ತು ಎಡಪಕ್ಷಗಳ ಜೊತೆಗಿನ ಮೈತ್ರಿಕೂಟಕ್ಕೆ ಹಿನ್ನಡೆಯಾಗಿರುವುದು ನಿಜ. ಆ ರಾಜ್ಯದ ಜಾಗೃತ ಮತದಾರರು ಜಾತ್ಯತೀತ ಮತಗಳ ವಿಂಗಡಣೆಯಾಗಿ ಬಿಜೆಪಿಗೆ ಲಾಭವಾಗಬಾರದು ಮತ್ತು ದೇಶ ಕಂಟಕ ಬಿಜೆಪಿಯನ್ನು ಸೋಲಿಸಲೇಬೇಕೆಂದು  ಟಿಎಂಸಿಗೆ ಸಾರಾಸಗಟಾಗಿ ಮತ ಹಾಕಿದಂತಿದೆ ಎಂದಿದ್ದಾರೆ.

ದುಡ್ಡು ಮತ್ತು ಅಧಿಕಾರದ ಬಲದಿಂದ ಚುನಾವಣೆಯನ್ನು ಗೆಲ್ಲಬಹುದೆಂಬ ಅವರ ಕುತಂತ್ರದ ರಾಜಕಾರಣಕ್ಕೆ ಈ ಚುನಾವಣೆಗಳು ದೊಡ್ಡ ಹೊಡೆತ ನೀಡಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಹಿಂದಿನ ಚುನಾವಣೆಗಿಂತ ಹೆಚ್ಚು ಸ್ಥಾನಗಳನ್ನು ಗಳಿಸಿರುವುದು ನಿಜವಾದರೂ ಆ ಎಲ್ಲ ಸ್ಥಾನಗಳು ‘ಆಪರೇಷನ್ ಕಮಲ’ ದ ಫಲವಾಗಿದೆ. ತಮ್ಮ ನಿಯಂತ್ರಣದಲ್ಲಿರುವ ಸಿಬಿಐ,‌ ಐಟಿ ಮತ್ತು‌ ಇಡಿ ಮೂಲಕ ಟಿಎಂಸಿ ನಾಯಕರನ್ನು ಹೆದರಿಸಿ ತಮ್ಮ ಪಕ್ಷಕ್ಕೆ ಸೇರಿಸಿಕೊಂಡ ಮೋದಿ-ಶಹಾ ಜೋಡಿ ಅವರನ್ನೇ ಬಳಸಿಕೊಂಡು ಚುನಾವಣೆಯನ್ನು ಎದುರಿಸಿದೆ.

ಟಿಎಂಸಿ ಸರ್ಕಾರದಲ್ಲಿದ್ದ ಭ್ರಷ್ಟ ಮುಕುಲ್ ರಾಯ್, ಸುವೆಂದು ಅಧಿಕಾರಿಯಂತಹವರು ಈಗ ಪಶ್ಚಿಮ ಬಂಗಾಳದ ಬಿಜೆಪಿ ನಾಯಕರು.ಬಿಜೆಪಿ ಬಾಯಿಬಿಟ್ಟರೆ ಐಡಿಯಾಲಜಿ ಬಗ್ಗೆ ಮಾತನಾಡುತ್ತದೆ. ಪಕ್ಷಾಂತರ ಮಾಡಿಕೊಳ್ಳುವಾಗ ಇವರಿಗೆ ಯಾವ ಐಡಿಯಾಲಜಿಯೂ ಇಲ್ಲ. ಪಶ್ಚಿಮ‌ ಬಂಗಾಳದಲ್ಲಿ ಬಿಜೆಪಿ ಹಣದ ಹೊಳೆಯನ್ನೇ ಹರಿಸಿದೆ. ಹೀಗಿದ್ದರೂ ಪಶ್ಚಿಮ ಬಂಗಾಳದ ಮತದಾರರು ಹಣದ ಆಮಿಷಕ್ಕೆ ಈಡಾಗದೆ, ಬಿಜೆಪಿಯ ಹಿಂಸಾತ್ಮಕ ಒತ್ತಡಕ್ಕೆ‌ ಪೂರ್ಣವಾಗಿ ಮಣಿದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ದಕ್ಷಿಣದ ರಾಜ್ಯಗಳು ಎಂದೂ ಕೂಡಾ ಬಿಜೆಪಿಯ‌ ಕೋಮುವಾದಿ ರಾಜಕಾರಣವನ್ನು ಪುರಸ್ಕರಿಸಿಲ್ಲ. ಕೇರಳ, ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಬಿಜೆಪಿಗೆ ಇಲ್ಲಿಯವರೆಗೆ ಸ್ವಂತ ಬಲದಿಂದ ಅಧಿಕಾರ ಹಿಡಿಯಲಾಗಿಲ್ಲ. ಕರ್ನಾಟಕದಲ್ಲಿಯೂ  ಬಿಜೆಪಿ ಅಧಿಕಾರಗಳಿಸಿದ್ದು ಪಾಪದ ಹಣದಿಂದ ನಡೆಸಿದ ‘ ಆಪರೇಷನ್ ಕಮಲ’ ಎಂಬ ಅಡ್ಡಮಾರ್ಗದ ಮೂಲಕ ಎಂದು ರಾಜ್ಯ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೇರಳದಲ್ಲಿ ಈ ಬಾರಿ‌‌ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಧಿಕಾರಕ್ಕೆ ಬರುವ ಎಲ್ಲ ಸೂಚನೆಗಳಿತ್ತು. ಬಹುಷ: ಕೊರೊನಾ ಕಾಲದ ಪಿಣರಯ್ ವಿಜಯನ್ ನೇತೃತ್ವದ ಸರ್ಕಾರದ ಸಾಧನೆಯ ಪರವಾಗಿ ಅಲ್ಲಿನ‌ ಜನತೆ ಮತ ಹಾಕಿದಂತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಿಂದ ಹಿಡಿದು ಇತ್ತೀಚೆಗೆ ನಮ್ಮ ರಾಜ್ಯದಲ್ಲಿ ನಡೆದ ಗ್ರಾಮ ಪಂಚಾಯಿತಿ, ಸ್ಥಳೀಯ ಸಂಸ್ಥೆಗಳ ಚುನಾವಣೆಯವರೆಗೆ ಎಲ್ಲ‌ ಕಡೆ ಜನ ಬಿಜೆಪಿಯನ್ನು ತಿರಸ್ಕರಿಸುತ್ತಿರುವುದು ಮುಂದಿನ ರಾಜಕೀಯ ಬೆಳವಣಿಗೆಯ ದಿಕ್ಸೂಚಿಯಾಗಿದೆ. ಮಸ್ಕಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದೆ. ಆಪರೇಷನ್ ಕಮಲಕ್ಕೆ ಈ ಮೂಲಕ ಅಲ್ಲಿಯ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಜೊತೆಗೆ ಚುನಾವಣಾ ಚಾಣಕ್ಯ ಎಂದು ಮಾಧ್ಯಮಮಗಳ ಮೂಲಕ ಹೊಗಳಿಸಿಕೊಂಡಿದ್ದ ವಿಜಯೇಂದ್ರ ಮತ್ತವರ ಹಣದ ಥೈಲಿಗೆ ಮತದಾರರು ಮಣೆ ಹಾಕಿಲ್ಲ ಎಂಬುದು ಸಾಬೀತಾಗಿದೆ.  ಮಸ್ಕಿ ಕ್ಷೇತ್ರದ ಮತದಾರರಿಗೆ ಎಷ್ಟು ಕೃತಜ್ಞತೆ ಹೇಳಿದರೂ ಸಾಲದು ಎಂದಿದ್ದಾರೆ.

ಬಸವಕಲ್ಯಾಣ ಕ್ಷೇತ್ರದಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿ ಕಣಕ್ಕಿಳಿಸಿದ್ದರಿಂದ, ಈಶ್ವರ ಖಂಡ್ರೆ ಅವರು ಕೊರೊನಾ ಸೋಂಕಿಗೆ ಒಳಗಾಗಿ ಆಸ್ಪತ್ರೆ ಸೇರಿದ್ದರಿಂದ ಹಾಗೂ ಹಲವು ಕಾರಣಗಳಿಂದ ಸೋಲಾಯಿತು. ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ 4 ಲಕ್ಷ ಮತಗಳಿಂದ ಸೋತಿತ್ತು. ಈ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಅವರು ಗೆಲ್ಲುವ ವಿಶ್ವಾಸ ಇತ್ತು. ಆದರೂ ಅವರು ಭಾರಿ ಹೋರಾಟ ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಿಗೆ ಆಶೀರ್ವಾದ ಮಾಡಿರುವ ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭೆ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಮಸ್ಕಿ ಅಭ್ಯರ್ಥಿ ಬಸವನಗೌಡ ತುರುವಿಹಾಳ ಗೆಲುವು ಸಾಧಿಸಿದ್ದು, ಅವರಿಗೂ ಅಭಿನಂದನೆ ಸಲ್ಲಿಸಿದ್ದಾರೆ.

ಈ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಶ್ರಮಿಸಿದ ಶಾಸಕರು, ಸಂಸದರು, ಮುಖಂಡರು ಹಾಗೂ ಎಲ್ಲ ಕಾರ್ಯಕರ್ತರಿಗೂ ನನ್ನ ಕೃತಜ್ಞತೆಗಳು. ರಾಜ್ಯ ಹಾಗೂ ದೇಶ ಸೂತಕದ ಮನೆಯಾಗಿರುವುದರಿಂದ ಇದು ಸಂಭ್ರಮಿಸುವ ಕಾಲವಲ್ಲ. ಹೀಗಾಗಿ ವಿಜಯತೋತ್ಸವದಂಥ ಆಚರಣೆಗಳು ಬೇಡ, ಕೋವಿಡ್ ನಿಯಮಗಳನ್ನು ಪಾಲಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಿ ಎಂದು ರಾಜ್ಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.

Previous Post

ಮಸ್ಕಿಯಲ್ಲಿ ಕಾಂಗ್ರೆಸ್‌ಗೆ ಗೆಲುವು: ಪಕ್ಷದ ಕಾರ್ಯಕರ್ತರು ವಿಜಯೋತ್ಸವ‌ ನಡೆಸದೆ‌ ಸಂಯಮದಿಂದ ವರ್ತಿಸಬೇಕು -ಸಿದ್ದರಾಮಯ್ಯ

Next Post

ಮಮತಾ ಗೆಲುವಿನಿಂದ ಕನ್ನಡಿಗರು ಕಲಿಯಬೇಕಾದ ಪಾಠವೇನು..?

Related Posts

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
0

https://youtube.com/live/zK_8kusfh_Q

Read moreDetails
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

July 12, 2025

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

July 12, 2025
Next Post
ಮಮತಾ ಗೆಲುವಿನಿಂದ ಕನ್ನಡಿಗರು ಕಲಿಯಬೇಕಾದ ಪಾಠವೇನು..?

ಮಮತಾ ಗೆಲುವಿನಿಂದ ಕನ್ನಡಿಗರು ಕಲಿಯಬೇಕಾದ ಪಾಠವೇನು..?

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada