3 ತಿಂಗಳಲ್ಲಿ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನ ಚುನಾವಣಾ ಆಯೋಗ ಪ್ರಧಾನಿ ಇಮ್ರಾನ್ ಖಾನ್ ಗೆ ತಿಳಿಸಿದೆ.
ಅವಿಶ್ವಾಸ ಗೊತ್ತುವಳಿಯನ್ನು ಪ್ರತಿಪಕ್ಷಗಳು ಮಂಡಿಸಿದ ಬೆನ್ನಲ್ಲೇ 3 ತಿಂಗಳಲ್ಲಿ ಚುನಾವಣೆ ನಡೆಸುವುದಾಗಿ ಪ್ರಧಾನಿ ಇಮ್ರಾನ್ ಖಾನ್ ಘೋಷಿಸುವ ಮೂಲಕ ಅಚ್ಚರಿ ಮೂಡಿಸಿದ್ದರು.

ಕಾನೂನಾತ್ಮಕ ತೊಡಕು, ಲಾಜಿಸ್ಟಿಕ್ ಸಮಸ್ಯೆ ಸೇರಿದಂತೆ ಹಲವು ಕಾರಣಗಳಿಂದ 3 ತಿಂಗಳಲ್ಲಿ ದೇಶದಲ್ಲಿ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.
ಡೆಪ್ಯುಟಿ ಸ್ಪೀಕರ್ ಪ್ರಧಾನಿ ವಿರುದ್ಧ ಅವಿಶ್ವಾಸ ನಿರ್ಣಯ ಕುರಿತ ಪ್ರಸ್ತಾಪವನ್ನು ತಿರಸ್ಕರಿಸಿದ್ದರು. ಸ್ಪೀಕರ್ ನಿರ್ಣಯವನ್ನು ಖಂಡಿಸಿ ಪ್ರತಿಪಕ್ಷಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ವಿಚಾರಣೆಗೆ ಅಂಗೀಕರವಾಗಿದೆ.










