ದೆಹಲಿ: ಬೆಂಗಳೂರು ನಗರದ 5 ಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ ಪೂರ್ಣಗೊಳಿಸಿ ಎಂದು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಚುನಾವಣಾ ಆಯೋಗ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿಗಳ ಪೀಠ ಈ ನಿರ್ದೇಶನ ನೀಡಿದೆ.

ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ಈಗ ಮೀಸಲಾತಿಯ ಕರಡು ಅಧಿಸೂಚನೆ ಹೊರಡಿಸಲಾಗಿದೆ. ಮಾರ್ಚ್ 16ರೊಳಗೆ ಮತದಾರರ ಪಟ್ಟಿ ಅಂತಿಮಪಡಿಸಲಾಗುವುದು. ಹಾಗೆ ಮಾರ್ಚ್ ನಿಂದ ಎಸ್ಎಸ್‌ಎಲ್ ಸಿ ಸೇರಿದಂತೆ ಮತ್ತಿತರ ಪರೀಕ್ಷೆಗಳು ನಿಗದಿಯಾಗಿವೆ. ಹೀಗಾಗಿ ಮೇ 26 ರೊಳಗೆ 5 ಪಾಲಿಕೆಗಳ ಚುನಾವಣೆ ದಿನಾಂಕ ಘೋಷಿಸಿ ಜೂನ್ ತಿಂಗಳೊಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಪೀಠಕ್ಕೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಫೆಬ್ರವರಿ 20 ರೊಳಗೆ ಅಂತಿಮ ಮೀಸಲಾತಿ ಹೊರಡಿಸಲು ಸರ್ಕಾರಕ್ಕೆ, ಚುನಾವಣಾ ಆಯೋಗಕ್ಕರ ಸೂಚನೆ ನೀಡಿದ್ದು, ಜೂನ್ 30 ರೊಳಗೆ ಬೆಂಗಳೂರಿನ 5 ಪಾಲಿಕೆಗಳಿಗೆ ಚುನಾವಣೆಗೆ ನಿರ್ದೇಶನ ನೀಡಿದೆ.











