• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, September 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

*ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ 2025- ಮುಂಚೂಣಿ ರಾಜ್ಯಗಳ ಸಾಲಿನಲ್ಲಿ ಕರ್ನಾಟಕ*

ಪ್ರತಿಧ್ವನಿ by ಪ್ರತಿಧ್ವನಿ
September 20, 2026
in Top Story
0
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Share on WhatsAppShare on FacebookShare on Telegram

ಬೆಂಗಳೂರು, ಸೆಪ್ಟೆಂಬರ್ 19: ನೀತಿ ಆಯೋಗ ಬಿಡುಗಡೆ ಮಾಡಿರುವ ಭಾರತ್‌ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ -2025ರಲ್ಲಿ ಕರ್ನಾಟಕವು 73 ಅಂಕಗಳೊಂದಿಗೆ ದೇಶದಲ್ಲಿ ಮೂರನೇ ಸ್ಥಾನ ಪಡೆದು, ದೇಶದ ಮುಂಚೂಣಿ ರಾಜ್ಯಗಳ ಪೈಕಿ ಒಂದಾಗಿ ಹೊರಹೊಮ್ಮಿದೆ.

ADVERTISEMENT

‘ಅತ್ಯುತ್ತಮ ಸಾಧನೆ ಮಾಡಿದ ರಾಜ್ಯ’ಗಳ ಪಟ್ಟಿಯಲ್ಲಿ ಕರ್ನಾಟಕವೂ ಒಂದಾಗಿದ್ದು, ಎಲೆಕ್ಟ್ರಿಕ್ ಸಾರಿಗೆ ಕ್ಷೇತ್ರದಲ್ಲಿ ರಾಜ್ಯ ಸಾಧಿಸಿರುವ ಪ್ರಗತಿಯ ಪ್ರತೀಕ ಇದಾಗಿದೆ.

ಒಟ್ಟಾರೆ ಶ್ರೇಯಾಂಕದಲ್ಲಿ 84 ಅಂಕಗಳೊಂದಿಗೆ ದಿಲ್ಲಿ ಮೊದಲ ಸ್ಥಾನದಲ್ಲಿದ್ದು, ಮಹಾರಾಷ್ಟ್ರ 78 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. 73 ಅಂಕಗಳೊಂದಿಗೆ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ಚಂಡೀಗಢ (71) ಮತ್ತು ಗೋವಾ (65) ಇವೆ. 65 ಅಥವಾ ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ‘ಅತ್ಯುತ್ತಮ ಸಾಧನೆ ಮಾಡಿದವು’ ಎಂದು ಸೂಚ್ಯಂಕದಲ್ಲಿ ವರ್ಗೀಕರಿಸಲಾಗಿದೆ.

ಚಾರ್ಜಿಂಗ್ ಮೂಲಸೌಕರ್ಯ ಸನ್ನದ್ಧತೆ ವಿಭಾಗದಲ್ಲಿ ಕರ್ನಾಟಕವು 97 ಅಂಕಗಳನ್ನು ಗಳಿಸಿದ್ದು, ದೇಶದಲ್ಲೇ ಅಗ್ರಸ್ಥಾನ ಪಡೆದಿದೆ. ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಅಗತ್ಯವಾದ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ರಾಜ್ಯ ಸಾಧಿಸಿರುವ ಪ್ರಗತಿಗೆ ಇದು ಸಾಕ್ಷಿಯಾಗಿದೆ.

ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ ನೀತಿ ಆಯೋಗದ ಕಾರ್ಯಾಗಾರದ ಭಾಗವಾಗಿ ‘ಭಾರತ್‌ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ–2025’ ಬಿಡುಗಡೆ ಸಮಾರಂಭದಲ್ಲಿ ಕರ್ನಾಟಕದ ಪರವಾಗಿ ಈ ಗೌರವ ಸ್ವೀಕರಿಸಿ ಮಾತನಾಡಿದ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, “ನಮ್ಮ ರಾಜ್ಯದ ಎಲೆಕ್ಟ್ರಿಕ್ ಸಾರಿಗೆ ಮೂಲಸೌಕರ್ಯ ಅಭಿವೃದ್ಧಿಯ ಉಪಕ್ರಮಗಳಲ್ಲಿ ಬೆಸ್ಕಾಂನ ‘ಇವಿ ಮಿತ್ರ’, ಏಕೀಕೃತ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಅಪ್ಲಿಕೇಶನ್, ಏಕಗವಾಕ್ಷಿ ಅನುಮತಿ ವ್ಯವಸ್ಥೆ ಮತ್ತು ಇವಿ ಆಕ್ಸಿಲರೇಟರ್ ಸೆಲ್ ಸೇರಿವೆ. ಇವಿ ವಾಹನಗಳ ಮಾರಾಟ, ಚಾರ್ಜಿಂಗ್ ಮೂಲಸೌಕರ್ಯ ಮತ್ತು ಉತ್ಪಾದನಾ ವಲಯಗಳನ್ನು ಒಳಗೊಂಡ ಪ್ರತ್ಯೇಕ ಎಲೆಕ್ಟ್ರಿಕ್ ವಾಹನ ನೀತಿಯನ್ನು 2017ರಲ್ಲಿ ಜಾರಿಗೆ ತಂದ ದೇಶದ ಮೊದಲ ರಾಜ್ಯ ಕರ್ನಾಟಕವಾಗಿದೆ,” ಎಂದರು.

Rahul Gandhi : ಇಂದೋರ್‌ನಲ್ಲಿ Gen-Zಗಳ ಜೊತೆ ರಾಹುಲ್‌ ಗಾಂಧಿ ಸಂವಾದ   #pratidhvani

“ರಾಜ್ಯಾದ್ಯಂತ ಎಲೆಕ್ಟ್ರಿಕ್ ವಾಹನಗಳ ಬಳಕೆ ಮತ್ತು ಚಾರ್ಜಿಂಗ್ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡುತ್ತಿರುವದರ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ. ಸದ್ಯ ರಾಜ್ಯದಲ್ಲಿ 6,979 ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರಗಳಿದ್ದು, ಬೆಂಗಳೂರಿನಲ್ಲೇ 4,896 ಚಾರ್ಚಿಂಗ್‌ ಕೇಂದ್ರಗಳಿವೆ. ಎಲೆಕ್ಟ್ರಿಕ್ ವಾಹನಗಳ ಮಾರಾಟವೂ ಹೆಚ್ಚುತ್ತಿದ್ದು, 2026–27ನೇ ಹಣಕಾಸು ವರ್ಷದ ಮೊದಲ 5 ತಿಂಗಳಲ್ಲಿ ಮಾರಾಟ ಶೇ.15ರಷ್ಟಿದೆ. ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ನಂತರ ದೇಶದಲ್ಲಿ ಅತಿ ಹೆಚ್ಚು ಎಲೆಕ್ಟ್ರಿಕ್ ವಾಹನ ಮಾರಾಟ ದಾಖಲಿಸಿರುವ ರಾಜ್ಯ ನಮ್ಮದು,” ಎಂದು ಅವರು ಹೇಳಿದರು.

“ದೇಶದ ಒಟ್ಟು ಎಲೆಕ್ಟ್ರಿಕ್ ವಾಹನ ನೋಂದಣಿಗಳಲ್ಲಿ ಕರ್ನಾಟಕದ ಪಾಲು ಶೇ.8.81ರಷ್ಟಿದೆ. ಎಲೆಕ್ಟ್ರಿಕ್ ವಾಹನ ನೋಂದಣಿಯಲ್ಲಿ ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ನಂತರದ ಸ್ಥಾನ ಕರ್ನಾಟಕದ್ದು. ದ್ವಿಚಕ್ರ ಮತ್ತು ನಾಲ್ಕುಚಕ್ರ ಎಲೆಕ್ಟ್ರಿಕ್ ವಾಹನ ನೋಂದಣಿಯಲ್ಲಿ ಮಹಾರಾಷ್ಟ್ರದ ನಂತರ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇ-ಬಸ್ ನೋಂದಣಿಯಲ್ಲಿ ದೆಹಲಿ ಮತ್ತು ಮಹಾರಾಷ್ಟ್ರದ ನಂತರ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಎಲೆಕ್ಟ್ರಿಕ್ ಸಾರಿಗೆಯನ್ನು ಜನರಿಗೆ ಇನ್ನಷ್ಟು ಸುಲಭವಾಗಿ ಲಭ್ಯವಾಗುವಂತೆ ಮಾಡುವ ಮೂಲಕ ಈ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಲಾಗುವುದು,” ಎಂದು ಗೌರವ್ ಗುಪ್ತ ಹೇಳಿದರು.

Santosh Lad : ಕುಂದಗೋಳದಲ್ಲಿ ಪ್ರಜಾಸೇವಾ ಆಂದೋಲನ‌ ಸಭೆ, ಸಾರ್ವಜನಿಕರಿಂದ ಅಹವಾಲು ಸಲ್ಲಿಕೆ #pratidhvani

*ಭಾರತ್‌ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ*

ನೀತಿ ಆಯೋಗವು ಡಬ್ಲ್ಯುಆರ್‌ಐ ಇಂಡಿಯಾ ಸಹಯೋಗದಲ್ಲಿ ಅಭಿವೃದ್ಧಿಪಡಿಸಿರುವ ಭಾರತ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕದ ಎರಡನೇ ಆವೃತ್ತಿ ಇದಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಎಲೆಕ್ಟ್ರಿಕ್ ಸಾರಿಗೆ ಕ್ಷೇತ್ರದಲ್ಲಿ ಸಾಧಿಸಿರುವ ಪ್ರಗತಿಯನ್ನು ನೀತಿ ನಿರೂಪಣೆ ಮತ್ತು ಅನುಷ್ಠಾನದ ಆಧಾರದ ಮೇಲೆ ಸೂಚ್ಯಂಕ ಮೌಲ್ಯಮಾಪನ ಮಾಡುತ್ತದೆ.

*ಕೋಟ್‌*

“ಭಾರತ್‌ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ–2025ರಲ್ಲಿ ದೇಶದ ಮುಂಚೂಣಿ ರಾಜ್ಯಗಳ ಸಾಲಿನಲ್ಲಿ ಕರ್ನಾಟಕ ಸ್ಥಾನ ಪಡೆದಿರುವುದು ಸುಸ್ಥಿರ ಸಾರಿಗೆ ವ್ಯವಸ್ಥೆಗೆ ಒತ್ತು ನೀಡುವ ನಮ್ಮ ಪ್ರಯತ್ನಗಳಿಗೆ ಸಾಕ್ಷಿಯಾಗಿದೆ. ನೀತಿ ನಿರೂಪಣೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ಎಲೆಕ್ಟ್ರಿಕ್ ವಾಹನಗಳ ವ್ಯಾಪಕ ಬಳಕೆಗೆ ಉತ್ತೇಜನ ನೀಡುವ ಮೂಲಕ ರಾಜ್ಯದ ಎಲೆಕ್ಟ್ರಿಕ್ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು.”
*ಕೆ.ಜೆ. ಜಾರ್ಜ್,ಇಂಧನ ಮತ್ತು ಪ್ರವಾಸೋದ್ಯಮ ಸಚಿವರು*

Pratap Simha vs Dhananjay | ಧನಂಜಯ ಬಾರೋ ಇಲ್ಲಿಗೆ!” ಮಸೀದಿ ಮುಂದೆ ಪ್ರತಾಪ್ ಸಿಂಹ ವಾಗ್ದಾಳಿ #pratidhvani

“ಕರ್ನಾಟಕದಲ್ಲಿ ಎಲೆಕ್ಟ್ರಿಕ್ ವಾಹನ ಮೂಲಸೌಕರ್ಯ ಅಭಿವೃದ್ಧಿಪಡಿಸುವ ನೋಡಲ್ ಸಂಸ್ಥೆಯಾಗಿ ಬೆಸ್ಕಾಂ, ರಾಜ್ಯದ ಚಾರ್ಜಿಂಗ್ ಜಾಲವನ್ನು ವಿಸ್ತರಿಸಿ ಬಲಪಡಿಸಲು ಬದ್ಧವಾಗಿದೆ. ಜನರಿಗೆ ಸುಲಭವಾಗಿ ಲಭ್ಯವಾಗುವ ಚಾರ್ಜಿಂಗ್ ಮೂಲಸೌಕರ್ಯ ಅಭಿವೃದ್ಧಿಗೆ ನಿರಂತರವಾಗಿ ನೆರವು ನೀಡುವುದರ ಜತೆಗೆ, ರಾಜ್ಯದಲ್ಲಿ ಎಲೆಕ್ಟ್ರಿಕ್ ಸಾರಿಗೆ ವ್ಯವಸ್ಥೆಗೆ ಎಲ್ಲ ಅಗತ್ಯ ಬೆಂಬಲ ನೀಡಲಾಗುವುದು.”
*ಡಾ. ಎನ್. ಶಿವಶಂಕರ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು*

Tags: clean energyElectric MobilityElectric Mobility Index 2025Electric TransportationElectric VehiclesEV AdoptionEV EcosystemEV InfrastructureEV PolicyGreen MobilityKarnatakakarnataka newsMobility IndexSustainable DevelopmentSustainable Transport
Previous Post

ರಾಜ್ಯದಲ್ಲಿ ಸ್ವಸಹಾಯ ಸಂಘಗಳ ನೆರವಿಗಾಗಿ ‘ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ’ ಸ್ಥಾಪನೆ

Next Post

`LPG’ ಸಬ್ಸಿಡಿ ಗ್ರಾಹಕರಿಗೆ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯ.!

Related Posts

ಬಿಗ್ ಬಾಸ್ ವೇದಿಕೆಯಲ್ಲೇ ಟೀ-ಶರ್ಟ್ ಕಳಚಿದ ಸಲ್ಮಾನ್ ಖಾನ್ : ಟ್ರೋಲಿಗರಿಗೆ ಖಡಕ್ ಎಚ್ಚರಿಕೆ
Top Story

ಬಿಗ್ ಬಾಸ್ ವೇದಿಕೆಯಲ್ಲೇ ಟೀ-ಶರ್ಟ್ ಕಳಚಿದ ಸಲ್ಮಾನ್ ಖಾನ್ : ಟ್ರೋಲಿಗರಿಗೆ ಖಡಕ್ ಎಚ್ಚರಿಕೆ

by ಪ್ರತಿಧ್ವನಿ
September 20, 2026
0

ಮುಂಬೈ: ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚುತ್ತಿರುವ ನಕಾರಾತ್ಮಕತೆ ಹಾಗೂ ಬಾಡಿ ಶೇಮಿಂಗ್ ವಿರುದ್ಧ ಬಾಲಿವುಡ್ ನಟ ಸಲ್ಮಾನ್ ಖಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಬಿಗ್ ಬಾಸ್ 20'ರ ಇತ್ತೀಚಿನ...

Read moreDetails
2027ರ ‘ಬೆಂಗಳೂರು ಕ್ವಾಂಟಂ ಸಮಿಟ್’ ಜಾಗತಿಕ ವೇದಿಕೆಯಾಗಿ ವಿಸ್ತರಣೆ: ಸಚಿವ ಡಾ. ಅಜಯ್ ಧರ್ಮಸಿಂಗ್ ಘೋಷಣೆ

2027ರ ‘ಬೆಂಗಳೂರು ಕ್ವಾಂಟಂ ಸಮಿಟ್’ ಜಾಗತಿಕ ವೇದಿಕೆಯಾಗಿ ವಿಸ್ತರಣೆ: ಸಚಿವ ಡಾ. ಅಜಯ್ ಧರ್ಮಸಿಂಗ್ ಘೋಷಣೆ

September 20, 2026
ಕರ್ನಾಟಕ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 576 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 576 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

September 20, 2026
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

September 20, 2026
`LPG’ ಸಬ್ಸಿಡಿ ಗ್ರಾಹಕರಿಗೆ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯ.!

`LPG’ ಸಬ್ಸಿಡಿ ಗ್ರಾಹಕರಿಗೆ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯ.!

September 20, 2026
Next Post
`LPG’ ಸಬ್ಸಿಡಿ ಗ್ರಾಹಕರಿಗೆ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯ.!

`LPG’ ಸಬ್ಸಿಡಿ ಗ್ರಾಹಕರಿಗೆ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada