ಇಂಧನದ ಬೆಲೆ ಏರಿಕೆಯ ಬೆನ್ನಲೆ ವಿದ್ಯುತ್‌ ದರ ಏರಿಸಿದ ಸರ್ಕಾರ

ಪೆಟ್ರೋಲ್‌, ಡೀಸೆಲ್ ಬೆಲೆ ಏರಿಕೆ ಬೆನ್ನೆಲೆ, ರಾಜ್ಯ ಸರ್ಕಾರ ವಿದ್ಯುತ್‌ ದರ ಏರಿಸಿ ಜನಸಾಮಾನ್ಯರಿಗೆ ಮತ್ತೊಂದು  ಶಾಕ್‌ ನೀಡಿದೆ. ಬುಧವಾರ ಈ ಆದೇಶ ಹೊರಡಿಸಿದ್ದು, ಏಪ್ರಿಲ್‌ 1 ರಿಂದಲೇ ಹೊಸ ಪರಿಷ್ಕೃತ ದರಗಳು ಜಾರಿಗೆ ಬಂದಿದೆ ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ತಿಳಿಸಿದೆ.

ಪ್ರತಿ ಯೂನಿಟ್‌ ವಿದ್ಯುತ್‌ಗೆ 83 ಪೈಸೆಯಿಂದ 1.68 ರೂ.ವರೆಗೆ ಏರಿಕೆ ಮಾಡುವಂತೆ ವಿದ್ಯುತ್‌ ಸರಬರಾಜು ಕಂಪನಿಗಳು ಸರ್ಕಾರಕ್ಕೆ  ಪ್ರಸ್ತಾವನೆ ಸಲ್ಲಿಸಿದ್ದವು, ಎಲ್ಲಾ ಸರಬರಾಜು ಕಂಪನಿಗಳಿಗೂ ಅನ್ವಯವಾಗುವಂತೆ ಪ್ರತಿ ಯೂನಿಟ್‌ಗೆ 30 ಪೈಸೆ ಹೆಚ್ಚಳ ಮಾಡಲಾಗಿದೆ.

ಕರೋನಾ ಕಾರಣಕ್ಕೆ ಏಪ್ರಿಲ್‌ ಮತ್ತು ಮೇ ತಿಂಗಳ ದರ ಪರಿಷ್ಕರಣೆ ಬಾಕಿಯನ್ನು ಅಕ್ಟೋಬರ್‌ ಹಾಗು ನವೆಂಬರ್‌ನಲ್ಲಿ  ವಸೂಲಿ ಮಾಡುವಂತೆ ತಿಳಿಸಲಾಗಿದೆ.

ಉಪಚುನಾವಣೆ, ಪಂಚಾಯತ್‌ ಚುನಾವಣೆ ಹಾಗು ಕರೋನಾ ಕಾರಣಕ್ಕೆ ದರ ಪರಿಷ್ಕರಣೆ ವಿಳಂಬವಾಗಿದೆ ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಹೇಳಿದೆ.

Related posts

Latest posts

ಬಡವರಿಗೆ ನೆರವಾಗುವುದನ್ನು ತಡೆಯುವ ಪೊಲೀಸ್ ಅಧಿಕಾರಿಗಳಿಗೆ ಬಿಜೆಪಿ ಬ್ಯಾಡ್ಜ್, ಬಾವುಟ ಕೊಡಿ; ಸರಕಾರದ ವಿರುದ್ಧ ಡಿಕೆಶಿ ಗರಂ

'ಬಿಜೆಪಿ ನಾಯಕರು ಜನರ ತೆರಿಗೆ ಹಣದಲ್ಲಿ ನೀಡುವ ಸರ್ಕಾರಿ ಆಹಾರ ಕಿಟ್, ಔಷಧಿ ಮೇಲೆ ತಮ್ಮ ಹಾಗೂ ಪ್ರಧಾನಿ ಫೋಟೋ ಹಾಕಿಕೊಂಡು ಪ್ರಚಾರ ಪಡೆಯುತ್ತಿದ್ದರೆ, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ತಮ್ಮ ಶ್ರಮಪಟ್ಟು ದುಡಿದ...

ಸುರಕ್ಷಿತವಾಗಿ ಲಾಕ್‌ಡೌನ್ ತೆರವುಗೊಳಿಸಲು ಸರ್ಕಾರಕ್ಕೆ 10 ಶಿಫಾರಸು ನೀಡಿದ ತಜ್ಞರ ತಂಡ SAGE

ಕರ್ನಾಟಕದಲ್ಲಿ ಕರೋನಾ ನಿಯಂತ್ರಿಸಲು ಹೇರಿರುವ ಲಾಕ್‌ಡೌನ್ ಅನ್ನು ಹೇಗೆ ಸುರಕ್ಷಿತವಾಗಿ ಹಾಗೂ ಸೂಕ್ತವಾಗಿ ತೆರವುಗೊಳಿಸಬಹುದೆಂದು ತಜ್ಞರ ತಂಡವು ಸರ್ಕಾರಕ್ಕೆ ಹತ್ತು ಶಿಫಾರಸುಗಳನ್ನು ನೀಡಿದೆ. ಕೋವಿಡ್ ವಿಪತ್ತಿನ ವಿರುದ್ಧದ ಹೋರಾಟಕ್ಕೆ ರೂಪುಗೊಂಡ SAGE (ಸಮಾಜಮುಖಿ ಕಾರ್ಯಪ್ರವೃತ್ತ...

ಬೆಲೆ ಏರಿಕೆ ಮಾಡಿ ಸರ್ಕಾರ ಜನರನ್ನು ಪಿಕ್ ಪಾಕೆಟ್ ಮಾಡುತ್ತಿದೆ- ಡಿ.ಕೆ ಶಿವಕುಮಾರ್

 ಇಂಧನ ಬೆಲೆ ಏರಿಕೆ ಹಿನ್ನೆಲೆ,  ರಾಜ್ಯಾದ್ಯಂತ ಜೂನ್‌ 11 ರಿಂದ 15 ರವರೆಗೆ '100 ನಾಟ್ ಔಟ್' ಹೆಸರಲ್ಲಿ ಕಾಂಗ್ರೆಸ್‌ ಪಕ್ಷದಿಂದ ಆಂದೋಲನ ನಡೆಸಲಾಗುತ್ತಿದೆ. ರಾಜ್ಯಾದ್ಯಂತ ಇಂದು 900ಕ್ಕೂ ಹೆಚ್ಚು ಜಿ.ಪಂ, ಹೋಬಳಿ...