ಕಾಮಗಾರಿ ಹಿನ್ನೆಲೆ ನಗರದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಬೆಳಗ್ಗೆ 6 ರಿಂದ ರಾತ್ರಿ 11 ಗಂಟೆಯವರೆಗೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕಾಮಗಾರಿ ಪೂರ್ಣಗೊಳ್ಳುವವರೆಗೂ ಫ್ಲೈಓವರ್ ಕ್ಲೋಸ್ ಆಗಲಿದೆ.

ಕಾಮಗಾರಿ ಹಿನ್ನೆಲೆ ಇಂದಿನಿಂದ ರಾತ್ರಿ ವೇಳೆ ಅಂದರೆ 11 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೂ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ (Flyover) ಮೇಲೆ ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.

ಈ ಕುರಿತಾಗಿ ಪತ್ರಿಕಾ ಪ್ರಕಟನೆ ಹೊರಡಿಸಿರುವ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ನಗರದ ಎಲೆಕ್ಟ್ರಾನಿಕ್ ಸಿಟಿಯಿಂದ ಸಿಲ್ಕ್ ಬೋರ್ಡ್ ಫ್ಲೈಓವರ್ ಕ್ಲೋಸ್ ಆಗಲಿದ್ದು, ಬೆಳಗ್ಗೆ 6ರಿಂದ ರಾತ್ರಿ 11ರವರೆಗೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕಾಮಗಾರಿ ಪೂರ್ಣಗೊಳ್ಳುವವರೆಗೂ ಫ್ಲೈಓವರ್ ಕ್ಲೋಸ್ ಆಗಲಿದೆ ಎಂದು ತಿಳಿಸಿದೆ.

ಬೆಳಿಗ್ಗೆ ವೇಳೆಯಲ್ಲಿ ಬೆಳಿಗ್ಗೆ 06-00 ಗಂಟೆಯಿಂದ ರಾತ್ರಿ 11-00 ಗಂಟೆಯವರೆಗೆ ಇದು ಎಲ್ಲಾ ರೀತಿಯ ವಾಹನಗಳಿಗೆ ಸಂಚಾರಕ್ಕೆ ತೆರೆದಿರುತ್ತದೆ. ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.