• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಆನೆಗಳನ್ನು ಪೂಜೆ ಕಾರ್ಯಕ್ಕೆ ಬಳಸುವುದು ತಪ್ಪು; ಆನೆ ಕಾಡಿನಲ್ಲಿ ಇರಬೇಕು, ದೇವಸ್ಥಾನದಲ್ಲಿ ಅಲ್ಲ: ಕರ್ನಾಟಕ ಹೈಕೋರ್ಟ್

ಪ್ರತಿಧ್ವನಿ by ಪ್ರತಿಧ್ವನಿ
August 20, 2021
in ಕರ್ನಾಟಕ
0
ಬೋಧಕ, ಬೋಧಕೇತರರನ್ನು ಕರೋನಾ ಫ್ರಂಟ್ ಲೈನ್ ಕಾರ್ಯಕರ್ತರೆಂದು ಪರಿಗಣಿಸಿ: ಬೊಮ್ಮಾಯಿ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
Share on WhatsAppShare on FacebookShare on Telegram

ಬೆಂಗಳೂರಿನ ದೇವಸ್ಥಾನವೊಂದರಲ್ಲಿ ಪೂಜಾ ಕಾರ್ಯಕ್ಕೆ ಬಳಸಲು ಆನೆಯನ್ನು ಇರಿಸಿಕೊಂಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹೈಕೋರ್ಟ್‌, ಆನೆಗಳು ಕಾಡಿನಲ್ಲಿ ಇರಬೇಕು ಹೊರತು ದೇವಸ್ಥಾನದಲ್ಲಿ ಅಲ್ಲ ಎಂದು‌ ಮಹತ್ವದ ತೀರ್ಪು ನೀಡಿದೆ.

ADVERTISEMENT

ಬೆಂಗಳೂರು ನಗರದ ತಿಂಡ್ಲುವಿನ ವಿದ್ಯಾರಣ್ಯಪುರದ ಕಾಳಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ಕೆ ಬಳಸಲು ಆನೆಯನ್ನು ಇರಿಸಿಕೊಂಡಿರುವುದಕ್ಕೆ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.

ಈ ಸಂಬಂಧಿಸಿದಂತೆ ಸಲ್ಲಿಸಿದ್ದ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್‌ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗ ನಡೆಸಿದ್ದು. ಈ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಕಾಳಿಕಾ ದುರ್ಗಾಪರಮೇಶ್ವರಿ ದೇವಸ್ಥಾನ ಖಾಸಗಿ ದೇವಾಲಯವಾಗಿತ್ತು. ಅಲ್ಲಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲು ಆನೆಯೊಂದನ್ನು ತಂದು ಪೋಷಿಸಲಾಗುತ್ತಿತ್ತು. ಇದೀಗ ದೇವಸ್ಥಾನವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಪಡೆದ ಕಾರಣ ಆನೆಯೂ ಸರ್ಕಾರದ ವಶದಲ್ಲಿದೆ. ಅದನ್ನು ಸ್ಥಳಾಂತರಿಸದೇ ದೇವಸ್ಥಾನದಲ್ಲಿಯೇ ಇರಿಸಲು ಮುಜರಾಯಿ ಇಲಾಖೆಗೆ ನಿರ್ದೇಶಿಸಬೇಕು ಎಂದುಕೋರಿದರು.

ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಆನೆಗಳು ಕಾಡಿನಲ್ಲಿರಬೇಕೇ ಹೊರತು ದೇಗುಲಗಳಲ್ಲಲ್ಲ ಎಂದಿದೆ. ಎಂದು ಅರ್ಜಿದಾರರಿಗೆ ಕೋರ್ಟ್ ಚಾಟಿ ಬೀಸಿದೆ.

ಆನೆಯನ್ನು ದೇವಸ್ಥಾನದಲ್ಲಿರಿಸಿ ಪೂಜಾ ಕಾರ್ಯಕ್ರಮಕ್ಕೆ ಬಳಸುವುದು ಎಷ್ಟು ಸರಿ ಎಂದು ಪೀಠ ಅರ್ಜಿದಾರರನ್ನು ನೇರವಾಗಿ ಪ್ರಶ್ನಿಸಿದೆ. ಅದಕ್ಕೆ ವಕೀಲರು ಈ ಪದ್ಧತಿ ಹಿಂದಿನಿಂದಲೂ ಜಾರಿಯಲ್ಲಿದೆ ಎಂದುದ್ದಾದರು. ಇದನ್ನು ಆಕ್ಷೇಪಿಸಿದ ಪೀಠ, ಹಿಂದಿನ ಕಾಲದಲ್ಲಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ ಜಾರಿಯಲ್ಲಿರಲಿಲ್ಲ. ಇದೀಗ ಆ ಕಾಯ್ದೆ ಜಾರಿಯಲ್ಲಿದೆ. ಪದ್ಧತಿ ಇತ್ತು ಎಂದು ಮುಂದುವರಿಸುತ್ತೀರಿ ಎನ್ನುವುದಾದರೆ ಒಪ್ಪಲಾಗದು ಎಂದು ಖಾರವಾಗಿ ಉತ್ತರಿಸಿದೆ.

ಸರ್ಕಾರಿ ವಕೀಲ ವಿಜಯ್‌ ಕುಮರ್‌ ಪಾಟೀಲ್‌, ಆನೆಗೆ ಆರೋಗ್ಯ ಸಮಸ್ಯೆಯಿದೆ. ಚಿಕಿತ್ಸೆ ನೀಡುವ ಅಗತ್ಯ ಇರುವುದರಿಂದ ಅದನ್ನು ಮಾಲೂರಿನ ಅರಣ್ಯ ಇಲಾಖೆಯ ಪುನರ್ವಸತಿ ಕೇಂದ್ರಕ್ಕೆ ರವಾನಿಸಿ ಅಗತ್ಯ ಚಿಕಿತ್ಸೆ ನೀಡಲಾಗುವುದು ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಅದನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ 2 ವಾರ ಕಾಲಾವಕಾಶ ನೀಡಿತು. ಜತೆಗೆ, ಆನೆಗೆ ಸೂಕ್ತ ಚಿಕಿತ್ಸೆ ಕಲ್ಪಿಸಿ, ವೈದ್ಯಕೀಯ ವರದಿ ನೀಡುವಂತೆ ಸರ್ಕಾರಕ್ಕೆ ಸೂಚಿಸಿ ಸೆ.13ಕ್ಕೆ ವಿಚಾರಣೆ ಮುಂದೂಡಲಾಗಿದೆ.

Tags: High Court of Karnataka
Previous Post

ಸೆಪ್ಟೆಂಬರ್‌ ಅಂತ್ಯದೊಳಗೆ ಮಕ್ಕಳಿಗೂ ಕರೋನಾ ಲಸಿಕೆ: ಭಾರತ್‌ ಬಯೋಟೆಕ್‌ ಭರವಸೆ !

Next Post

ತಾಲಿಬಾನ್‌ ವಿರುದ್ಧ ಅಫ್ಘನ್‌ ನಾಗರಿಕರ ಪ್ರತಿಭಟನೆ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
Next Post

ತಾಲಿಬಾನ್‌ ವಿರುದ್ಧ ಅಫ್ಘನ್‌ ನಾಗರಿಕರ ಪ್ರತಿಭಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada