ಇಡೀ ವಿಶ್ವವೇ ಕಾಯುತ್ತಿದ್ದ ವಿಶ್ವಕಪ್ ಕ್ರಿಕೆಟ್ ಪಂದ್ಯ ಗುರುವಾರ (ಅಕ್ಟೋಬರ್ 5) ಕ್ಕೆ ಅಧಿಕೃತ ಚಾಲನೆ ಸಿಕ್ಕದೆ. ಆದರೆ ಅಧಿಕೃತ ಉದ್ಘಾಟನೆ ಹಾಗೂ ಆರಂಭಿಕ ಪಂದ್ಯದಲ್ಲೇ ಕ್ರೀಡಾಂಗಣದಲ್ಲಿ ವೀಕ್ಷಕರಿಲ್ಲದೇ ಇರುವುದು ಬಾರಿ ಸುದ್ದಿಯಾಗುತ್ತಿದೆ.
ಗುಜರಾತ್ ರಾಜ್ಯದ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವಿಶ್ವಕಪ್ ಪಂದ್ಯಾವಳಿ ಅಧಿಕೃತವಾಗಿ ಉದ್ಘಾಟನೆಯಾಗಿದ್ದು, ಅದ್ದೂರಿ ಸಮಾರಂಭಕ್ಕೆ ಯೋಜನೆ ಹಾಕಿಕೊಂಡಿದ್ದ ಬಿಸಿಸಿಐ ಕೊನೆ ಕ್ಷಣದಲ್ಲಿ ಸಮಾರಂಭ ಕೈಬಿಟ್ಟಿದೆ.
ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳು ಉದ್ಘಾಟನಾ ಪಂದ್ಯ ಆಡುತ್ತಿದ್ದು, ಆರಂಭಿಕ ಪಂದ್ಯಕ್ಕೆ ಅಭಿಮಾನಿಗಳಿಂದ ಅತ್ಯಂತ ನೀರಸವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಇಂದು ವಿಶ್ವಕಪ್ ಪಂದ್ಯ ಪ್ರಧಾನಿ ನರೇಂದ್ರ ಮೋದಿ ಹೆಸರಿನ ಕ್ರೀಡಾಂಗಣದಲ್ಲಿ ಅಧಿಕೃತವಾಗಿ ಆರಂಭವಾಗಿದ್ದು, ಕ್ರೀಡಾಂಗಣ ಸಂಪೂರ್ಣವಾಗಿ ಖಾಲಿ ಖಾಲಿಯಾಗಿದೆ. ಇದರ ಫೋಟೋಗಳು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿವೆ.
ನರೇಂದ್ರ ಮೋದಿ ಕ್ರೀಡಾಂಗಣ 1,32,000ದಷ್ಟು ಆಸನದ ಸಾಮರ್ಥ್ಯವಿದ್ದರೂ ಕೇವಲ 3 ರಿಂದ 4 ಸಾವಿರ ಜನ ಭಾಗವಹಿಸಿದ್ದಾರೆ. ಅಂದರೆ ಕೇವಲ ಶೇ.3 ರಷ್ಟು ಮಂದಿ ಮಾತ್ರ ಎಂದು ವರದಿಯಾಗಿದೆ.
ಈ ರೀತಿಯ ಬೆಳವಣಿಗೆಗೆ ಬಿಸಿಸಿಐ ಕಾರ್ಯದರ್ಶಿ ಹಾಗೂ ಕೇಂದ್ರ ಸಚಿವ ಅಮಿತ್ ಶಾ ಅವರ ಮಗ ಜಯ್ ಶಾ ಅವರೇ ಕಾರಣ ಎಂದು ನೆಟ್ಟಿಗರು ಬರೆದಿದ್ದಾರೆ.

