ಗಾಯಕ, ಕಾಂಗ್ರೆಸ್ ಮುಖಂಡ ಸಿಧು ಮೂಸೇವಾಲ ಹತ್ಯೆ ಪ್ರಕರನಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಗ್ಯಾಂಗ್ಸ್ಟಾರ್ ಗೋಲ್ಡಿ ಬ್ರಾರ್ ವಿರುದ್ದ ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಪಂಜಾಬ್ನ ಅಮೃತಸರದ ಚೀಚಾ ಭಕ್ನಾ ಗ್ರಾಮದಲ್ಲಿ ಆರೋಪಿಗಳು ಅಡಗಿರುವ ಬಗ್ಗೆ ಕಚಿತ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿದ್ದಾಗ ಪೊಲೀಸರು ಹಾಗೂ ಆರೋಪಿಗಳ ನಡುವ ಗುಂಡಿನ ಚಕಮಕಿ ನಡೆದಿದ್ದು ಇಬ್ಬರನ್ನು ಪೊಲೀಸರು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ವರದಿಯಾಗಿದೆ.
ಸುದ್ದಿ ಮೂಲಗಳ ಪ್ರಕಾರ ಶೂಟರ್ಗಳಾದ ಜಗರೂಪ್ ಸಿಂಗ್ ಹಾಗೂ ಮನ್ನು ಕುಸಾ ಹತರಾಗಿದ್ದಾರೆ ಎಂದು ತಿಳಿದು ಬಂದಿದೆ. ಮೇ 29ರಂದು ಸಿಧು ಮೂಸೇವಾಲರನ್ನು ಪಂಅಜಬ್ನ ಮಾನ್ಸಾದಲ್ಲಿ ಗುಂಡಿಕ್ಕಿ ಕೊಲ್ಲಲಾಗಿತ್ತು.
#WATCH | Encounter ensuing between police & gangsters at Cheecha Bhakna village of Amritsar district in Punjab pic.twitter.com/7UA0gEL23z
— ANI (@ANI) July 20, 2022