• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಿನಲ್ಲಿ ಏರೋಸ್ಪೇಸ್ ಉದ್ಯಮಕ್ಕೆ ಪ್ರೋತ್ಸಾಹ ನೀಡಿ, ಪ್ರತಿಭಾ ಪಲಾಯನ ತಡೆಯಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
February 10, 2025
in Top Story, ಕರ್ನಾಟಕ, ದೇಶ, ವಿಶೇಷ
0
ಬೆಂಗಳೂರಿನಲ್ಲಿ ಏರೋಸ್ಪೇಸ್ ಉದ್ಯಮಕ್ಕೆ ಪ್ರೋತ್ಸಾಹ ನೀಡಿ, ಪ್ರತಿಭಾ ಪಲಾಯನ ತಡೆಯಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

“ಬೆಂಗಳೂರು, ಏರೋಸ್ಪೇಸ್(Aerospace)ಉದ್ಯಮದಲ್ಲಿ ಅತ್ಯುತ್ತಮ ಪ್ರತಿಭೆಗಳನ್ನು ಹೊಂದಿದೆ. ಇದು ವಿಮಾನ ಮತ್ತು ಹೆಲಿಕಾಪ್ಟರ್ ಉತ್ಪಾದನಾ ಸೌಲಭ್ಯಗಳನ್ನು ಸ್ಥಾಪಿಸಲು ಸೂಕ್ತ ಸ್ಥಳವಾಗಿದೆ. ತಯಾರಕರಿಗೆ ಪ್ರೋತ್ಸಾಹ ನೀಡುವ ಮೂಲಕ, ಪ್ರತಿಭಾ ಪಲಾಯನವನ್ನು ತಡೆದು ನಮ್ಮ ದೇಶದ ಪ್ರತಿಭೆಗಳನ್ನು ಭಾರತದೊಳಗೆ ಉಳಿಸಿಕೊಳ್ಳಬಹುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DCM DK Sivakumar)ಅವರು ಅಭಿಪ್ರಾಯಪಟ್ಟರು.

ADVERTISEMENT

ಬೆಂಗಳೂರು ಏರ್ ಶೋ 2025 ರ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್(DCM DK Sivakumar) ಅವರು ಸೋಮವಾರ ಮಾತನಾಡಿದರು.

“ರಕ್ಷಣಾ ಸಚಿವರು ಕರ್ನಾಟಕದಲ್ಲಿ(Karnataka) ಏರೋಸ್ಪೇಸ್ ಉದ್ಯಮವನ್ನು ಸ್ಥಾಪಿಸಲು ಹಾಗೂ ವಿಮಾನ ಮತ್ತು ಹೆಲಿಕಾಪ್ಟರ್‌ಗಳ ತಯಾರಕರನ್ನು ಹೆಚ್ಚು, ‌ಹೆಚ್ಚು ಬೆಂಗಳೂರಿನ ಕಡೆಗೆ ಗಮನ ಹರಿಸುವಂತೆ ಪ್ರೋತ್ಸಾಹ ನೀಡಬೇಕಾಗಿ ಮನವಿ ಮಾಡುತ್ತೇನೆ” ಎಂದು ಹೇಳಿದರು.

“ಕರ್ನಾಟಕ ಭಾರತದ ತಾಂತ್ರಿಕ ಮತ್ತು ಕೈಗಾರಿಕಾ ಪ್ರಗತಿಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯ. ವಿಶ್ವ ದರ್ಜೆಯ ಸಂಶೋಧನಾ ಸಂಸ್ಥೆಗಳು, ಅತ್ಯಾಧುನಿಕ ಏರೋಸ್ಪೇಸ್ ಕಂಪನಿಗಳನ್ನು ಹೊಂದಿರುವ ಕೌಶಲ್ಯಪೂರ್ಣ ಕಾರ್ಯಪಡೆಯೇ ನಮ್ಮಲ್ಲಿದೆ” ಎಂದರು.

“ಇತ್ತೀಚಿನ ವರ್ಷಗಳಲ್ಲಿ, ಕರ್ನಾಟಕವು ದೇಶದ ಒಟ್ಟು ದೇಶೀಯ ಉತ್ಪನ್ನ, ಕೈಗಾರಿಕಾ ಬೆಳವಣಿಗೆ ಮತ್ತು ಹೂಡಿಕೆಯ ಒಳಹರಿವು ಸೇರಿದಂತೆ ಪ್ರಮುಖ ಆರ್ಥಿಕ ಕ್ಷೇತ್ರಗಳಲ್ಲಿ ಅಗಾಧ ಬೆಳವಣಿಗೆ ಕಂಡಿದೆ” ಎಂದರು.

“ಸಂಶೋಧನೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ಉದ್ದಿಮೆಗೆ ಪ್ರೋತ್ಸಾಹಿಸುವ ಭವಿಷ್ಯದ ದೃಷ್ಟಿಯಿಂದ ಕೈಗಾರಿಕಾ ನೀತಿಯನ್ನು ಪೋಷಿಸಲು ನಮ್ಮ ಸರ್ಕಾರ ಬದ್ಧವಾಗಿದೆ” ಎಂದು ಹೇಳಿದರು.

bigbosss11 ಬಿಗ್ ಬಾಸ್ ಹನುಮಂತನ ಹಾಡಿಗೆ ಕುಣಿದು ಕುಪ್ಪಳಿಸಿದ ಜನ ಈ ಮಸ್ತ್ ಹಾಡು ಒಂದ್ಸಲ ಕೇಳಲೇ ಬೇಕು..! #biggboss

“ಆಕಾಶಕ್ಕೆ ಮಿತಿಯಿಲ್ಲ ಎಂಬುದನ್ನು ಈ ಏರ್ ಶೋ ಮೂಲಕ ನಾವು ಕಂಡುಕೊಳ್ಳಬಹುದು. ಬೆಂಗಳೂರು ಏರ್ ಶೋ(Air Show)ನಾಗರಿಕ ಮತ್ತು ಮಿಲಿಟರಿ(Military)ವಾಯುಯಾನ ಎರಡರಲ್ಲೂ ಭಾರತದ ಪ್ರಗತಿಯನ್ನು ಎತ್ತಿ ತೋರಿಸುವ ದೊಡ್ಡ ಕಾರ್ಯಕ್ರಮ” ಎಂದು ತಿಳಿಸಿದರು.

“ಏರೋ ಇಂಡಿಯಾ ಕೇವಲ ಪ್ರದರ್ಶನವಲ್ಲ. ಇದು ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಭಾರತದ ಸಾಮರ್ಥ್ಯ ಬೆಳೆಯುತ್ತಿರುವುದಕ್ಕೆ ಸಾಕ್ಷಿ ಮತ್ತು ಅಂತರರಾಷ್ಟ್ರೀಯ ಪಾಲುದಾರಿಕೆಗಳನ್ನು ಬೆಳೆಸುವ ವೇದಿಕೆ” ಎಂದರು.

“2013 ರಲ್ಲಿ ಏರೋಸ್ಪೇಸ್(Aerospace) ನೀತಿಯನ್ನು ಘೋಷಿಸಿದ ಮೊದಲ ರಾಜ್ಯ ಕರ್ನಾಟಕ. ನಮ್ಮ ರಾಜ್ಯವು ದೇವನಹಳ್ಳಿ ಬಳಿ ಏರೋಸ್ಪೇಸ್ ಕಂಪನಿಗಳಿಗಾಗಿ 1 ಸಾವಿರ ಎಕರೆ ಪ್ರದೇಶವನ್ನು ಮೀಸಲಿಟ್ಟು ಏರೋಸ್ಪೇಸ್ ಪಾರ್ಕ್ ಸ್ಥಾಪಿಸಿದೆ” ಎಂದರು.

“ಇಂದು ಏರೋಸ್ಪೇಸ್(Aerospace) ಉದ್ಯಮವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಬೆಂಗಳೂರು ಅತ್ಯುತ್ತಮ ನಗರವಾಗಿದೆ. ಅನೇಕ ಬ್ರ್ಯಾಂಡ್‌ಗಳು ಮತ್ತು ಅತ್ಯುತ್ತಮ ತಂತ್ರಜ್ಞಾನಗಳನ್ನು ಪ್ರದರ್ಶಿಸಲು ಬೆಂಗಳೂರು ಸೂಕ್ತ ಸ್ಥಳವಾಗಿದೆ” ಎಂದರು.

“ವ್ಯಾಪಾರ ಒಪ್ಪಂದಗಳನ್ನು ಮಾಡಿಕೊಳ್ಳಲು, ಉದ್ದಿಮೆಗಳ ಅತ್ಯುತ್ತಮ ಉತ್ಪನ್ನಗಳನ್ನು ಪರೀಕ್ಷಿಸಲು ಇದು ಸೂಕ್ತ ಸ್ಥಳವಾಗಿದೆ. ಏರೋಸ್ಪೇಸ್(Aerospace) ಭವಿಷ್ಯವು ರೂಪುಗೊಳ್ಳುತ್ತಿರುವ ಸ್ಥಳವೇ ಬೆಂಗಳೂರು” ಎಂದು ಹೇಳಿದರು.

ದೇಶದ ಏರೋಸ್ಪೇಸ್(Aerospace) ರಾಜಧಾನಿ ಬೆಂಗಳೂರು

“ಬೆಂಗಳೂರು ಭಾರತದ ಏರೋಸ್ಪೇಸ್ ರಾಜಧಾನಿ. ದೇಶದ ಏರೋಸ್ಪೇಸ್(Aerospace) ಉತ್ಪಾದನೆ ಮತ್ತು ರಕ್ಷಣಾ ಸಂಶೋಧನೆಯ ಶೇ. 60 ಕ್ಕಿಂತ ಹೆಚ್ಚು ಕೊಡುಗೆಯನ್ನು ನಮ್ಮ ರಾಜ್ಯ ನೀಡುತ್ತಿದೆ” ಎಂದರು.

“ಎಚ್ ಎಎಲ್(H AL), ಇಸ್ರೋ(Isrō)ಮತ್ತು ಬೋಯಿಂಗ್ ಇಂಡಿಯಾದಂತಹ ಪ್ರಮುಖ ಸಂಸ್ಥೆಗಳು ಭಾರತದ ರಕ್ಷಣಾ ಮತ್ತು ಬಾಹ್ಯಾಕಾಶ ಸಾಮರ್ಥ್ಯಗಳಿಗೆ ಸಾಕಷ್ಟು ಕೊಡುಗೆಗಳನ್ನು ನೀಡುತ್ತಿವೆ. ಬೆಂಗಳೂರಿನ ಏರೋಸ್ಪೇಸ್ ವಲಯದಲ್ಲಿ 1,50,000 ಕ್ಕೂ ಹೆಚ್ಚು ಜನರು ಕೆಲಸ ಮಾಡುತ್ತಿದ್ದಾರೆ, ಇದು ನಗರವನ್ನು ವಾಯುಯಾನ ಮತ್ತು ರಕ್ಷಣಾ ತಂತ್ರಜ್ಞಾನದಲ್ಲಿ ಜಗತ್ತಿನಲ್ಲಿಯೇ ಸಾಕಷ್ಟು ಹೆಸರು ಮಾಡಿದೆ” ಎಂದರು.

“ವಿದೇಶಿ ಹೂಡಿಕೆಗಳನ್ನು ಆಕರ್ಷಿಸುವಲ್ಲಿ ಬೆಂಗಳೂರು ಜಾಗತಿಕ ಏರೋಸ್ಪೇಸ್(Aerospace) ನಗರಗಳಲ್ಲಿ ಮೂರನೇ ಸ್ಥಾನವನ್ನು ಪಡೆದಿದೆ. ಕರ್ನಾಟಕ ಸರ್ಕಾರವು ಕರ್ನಾಟಕದಾದ್ಯಂತ ಅಂದರೆ ಬೆಂಗಳೂರು, ಬೆಳಗಾವಿ, ಮೈಸೂರು, ತುಮಕೂರು ಮತ್ತು ಚಾಮರಾಜನಗರಗಳಲ್ಲಿ ಏರೋಸ್ಪೇಸ್ ಮತ್ತು ರಕ್ಷಣಾ ಕೇಂದ್ರಗಳನ್ನು ಅಭಿವೃದ್ಧಿಪಡಿಸುತ್ತಿದೆ” ಎಂದು ಹೇಳಿದರು.

“ವಾಣಿಜ್ಯ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಕ್ರಾಂತಿಯನ್ನೇ ಉಂಟು ಮಾಡುತ್ತಿರುವ ಡ್ರೋನ್ ತಂತ್ರಜ್ಞಾನ ಮತ್ತು ಮಾನವರಹಿತ ವೈಮಾನಿಕ ತಂತ್ರಜ್ಞಾನದ ರುವಾರಿಯಾಗಿ ಬೆಂಗಳೂರು ಬೆಳೆಯುತ್ತಿದೆ” ಎಂದರು.

“ಬೆಂಗಳೂರು ಭಾರತದಲ್ಲಿಯೇ ಅತಿ ಹೆಚ್ಚು ಸಾಫ್ಟ್‌ವೇರ್ ಕಂಪನಿಗಳನ್ನು ಹೊಂದಿದೆ. ಅದಕ್ಕೆ ಇದನ್ನು ಭಾರತದ ಸಿಲಿಕಾನ್ ಸಿಟಿ(Silicon City) ಎಂದು ಕರೆಯುತ್ತಾರೆ. ತಂತ್ರಜ್ಞಾನ ಮತ್ತು ಏರೋಸ್ಪೇಸ್ ವಲಯವನ್ನು ಮುನ್ನಡೆಸುವ ನಗರವಾಗಿ ಬೆಂಗಳೂರು ಬೆಳೆದಿದೆ” ಎಂದು ಹೇಳಿದರು.

“ರಾಜಧಾನಿಯಲ್ಲಿ 21 ಎಂಜಿನಿಯರಿಂಗ್ ಕಾಲೇಜುಗಳಿವೆ. ವಿಶ್ವದ ಯಾವುದೇ ನಗರಗಳಿಗೆ ಹೋಲಿಸಿದರೆ ನಾವೇ ಮೊದಲ ಸ್ಥಾನದಲ್ಲಿ ನಿಲ್ಲುತ್ತೇವೆ. ಬೆಂಗಳೂರಿನ ವಿಶಿಷ್ಟ ಪರಿಸರವು ಭಾರತ ಮತ್ತು ಪ್ರಪಂಚದಾದ್ಯಂತದ ಅತ್ಯುತ್ತಮ ಪ್ರತಿಭೆಗಳನ್ನು ಆಕರ್ಷಿಸುತ್ತಿದೆ‌. ಬೆಂಗಳೂರು ನಿಮ್ಮ ಪ್ರತಿಭೆಯನ್ನು ಬಳಸಿಕೊಳ್ಳುವ, ಬೆಲೆಸುವ, ಕನಸುಗಳನ್ನು ನನಸು ಮಾಡುವ ಸ್ಥಳವಾಗಿದೆ” ಎಂದರು.

“ಕರ್ನಾಟಕವು ಭಾರತದ ಏರೋಸ್ಪೇಸ್ ವಲಯದಲ್ಲಿ ಅನೇಕ ಬಾರಿ ನಿರ್ಣಾಯಕ ಪಾತ್ರವನ್ನು ವಹಿಸಿದೆ. ಅಲ್ಲದೇ ರಕ್ಷಣಾ ಸೇವೆಗಳಿಗಾಗಿ ದೇಶದ ವಿಮಾನ ಮತ್ತು ಹೆಲಿಕಾಪ್ಟರ್ ಉತ್ಪಾದನೆಯ ಶೇ.67 ಮತ್ತು ಭಾರತದ ಏರೋಸ್ಪೇಸ್-ಸಂಬಂಧಿತ ರಫ್ತಿನ ಶೇ.65 ಕೊಡುಗೆ ನೀಡುತ್ತಿದೆ” ಎಂದು ಹೇಳಿದರು.

“ವಿಮಾನ ಸೇವೆ ಮತ್ತು ವಿಮಾನಗಳನ್ನು ದುರಸ್ತಿ ಮಾಡುವ ಕ್ಷೇತ್ರದಲ್ಲಿ ಭಾರತ ಮುಂದಿದೆ. ಆದರೆ ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳ ತಯಾರಿಕೆ ಇನ್ನೂ‌ ಸ್ವಲ್ಪ ಹಿಂದೆ ಬಿದ್ದಿದೆ. ದೇಶವು ಬಳಸುವ ಹೆಚ್ಚಿನ ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳನ್ನು ಇನ್ನೂ ಇತರ ರಾಷ್ಟ್ರಗಳಿಂದ ಖರೀದಿಸಲಾಗುತ್ತಿದೆ” ಎಂದು ವಿಷಾದ ವ್ಯಕ್ತಪಡಿಸಿದರು.

“ವಾಣಿಜ್ಯ ಮತ್ತು ರಕ್ಷಣಾ ವಿಮಾನ ನಿಲ್ದಾಣಗಳು ಕಾರ್ಯನಿರ್ವಹಿಸುತ್ತಿರುವ ವಿಶ್ವದ ಏಕೈಕ ನಗರ ಬೆಂಗಳೂರು. ಈ ಕ್ಷೇತ್ರಕ್ಕೆ ಹೆಚ್ಚಿನ ಮಹಿಳೆಯರು ಕೊಡುಗೆ ನೀಡುತ್ತಿದ್ದಾರೆ. ಯು.ಎಸ್., ಫ್ರಾನ್ಸ್(US, France) ಮತ್ತು ರಷ್ಯಾದಂತಹ ದೇಶಗಳೊಂದಿಗೆ ಪಾಲುದಾರಿಕೆಗಳ ಮೂಲಕ ಭಾರತದ ಏರೋಸ್ಪೇಸ್(Aerospace) ಉದ್ಯಮವು ಬೆಳೆಯುತ್ತಿದೆ” ಎಂದರು.

ಜಾಗತಿಕ ಮಾರುಕಟ್ಟೆಯಲ್ಲಿ ನಮ್ಮ ಸ್ಥಾನವನ್ನು ಈ ಏರ್ ಶೋ(Air show) ಬಲಪಡಿಸುತ್ತಿದೆ. ಈ ಪ್ರದರ್ಶನವು ದೇಶಗಳು ಒಗ್ಗೂಡಲು, ಜ್ಞಾನವನ್ನು ಹಂಚಿಕೊಳ್ಳಲು ಮತ್ತು ಎಲ್ಲರಿಗೂ ಪ್ರಯೋಜನವಾಗುವ ವಾತಾವರಣ ನಿರ್ಮಿಸಲು ಉತ್ತಮ ಅವಕಾಶ ನೀಡುತ್ತದೆ” ಎಂದರು.

ಬೆಂಗಳೂರು ಏರ್ ಶೋ ಸಣ್ಣ ಕಾರ್ಯಕ್ರಮವಲ್ಲ. ಇದು ಬಾಹ್ಯಾಕಾಶದಲ್ಲಿ ಭಾರತದ ಶಕ್ತಿ, ಪ್ರಗತಿ ಮತ್ತು ನಾಯಕತ್ವದ ಸಂಕೇತವಾಗಿದೆ. ಬಾಹ್ಯಾಕಾಶ ಮತ್ತು ರಕ್ಷಣಾ ಹೂಡಿಕೆದಾರರು, ಉದ್ಯಮಿಗಳು ಮತ್ತು ವ್ಯಾಪಾರ ನಾಯಕರು ಕರ್ನಾಟಕವನ್ನು ಮೊದಲು ಆಯ್ಕೆ ಮಾಡಬೇಕು ಎಂದು ನಾನು ಕೋರುತ್ತೇನೆ” ಎಂದರು.

“2025 ರ ಏರ್ ಶೋ(Air show)ಎಲ್ಲರಿಗೂ ಯಶಸ್ವಿ ಮತ್ತು ಸ್ಪೂರ್ತಿದಾಯಕ ಅನುಭವವನ್ನು ನೀಡಲಿ. ಭಾರತದ ಶಕ್ತಿ ಪ್ರದರ್ಶನದ ಉದ್ಘಾಟನೆಯಲ್ಲಿ ಭಾಗವಹಿಸುತ್ತಿರುವುದು ನನ್ನ ಸೌಭಾಗ್ಯ. 1996 ರಲ್ಲಿ ಪ್ರಾರಂಭವಾದಾಗಿನಿಂದ ಇಲ್ಲಿಯ ತನಕ ಈ ಕಾರ್ಯಕ್ರಮ ಸಾಕಷ್ಟು ಎತ್ತರಕ್ಕೆ ಬೆಳೆದಿದೆ” ಎಂದು ತಿಳಿಸಿದರು.

Tags: Aerospace DCM DK Sivakumar Air Show US
Previous Post

ರಾಜ್ಯಪಾಲರ ಅಂಗಳದಲ್ಲಿ ಸುಗ್ರೀವಾಜ್ಞೆ ಚೆಂಡು – ಇನ್ನಾದ್ರೂ ಸಹಿ ಹಾಕ್ತಾರಾ ಗವರ್ನರ್..?! 

Next Post

FACT CHECK : ಶಾಂಪೂಗೆ ವೋಡ್ಕಾ ಮಿಕ್ಸ್ ಮಾಡಿದ್ರೆ ಕೂದಲು ಅಂದಗೊಳ್ಳುತ್ತಾ..?! ವೈರಲ್ ಆದ ಈ ಟಿಪ್ಸ್ ಅಸಲಿಯತ್ತೇನು ಗೊತ್ತಾ..?! 

Related Posts

 Daily Horoscope February 14: ಇಂದು ಕೆಲಸದಲ್ಲಿ ಬಡ್ತಿ ಪಡೆಯುವ ರಾಶಿಗಳಿವು..!
Top Story

 Daily Horoscope February 14: ಇಂದು ಕೆಲಸದಲ್ಲಿ ಬಡ್ತಿ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
February 14, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಇಂದು ನೀವು ಕೆಲಸದ ವಿಷಯದಲ್ಲಿ ಸ್ವಲ್ಪ ಗಂಭೀರವಾಗಿರುತ್ತೀರಿ. ಕಚೇರಿಯ ಬಾಕಿ ಕೆಲಸಗಳನ್ನು ಮುಗಿಸಲು ಹೆಚ್ಚಿನ ಶ್ರಮ ವಹಿಸಬೇಕಾಗಬಹುದು. ಪ್ರೇಮ ಸಂಬಂಧಗಳಲ್ಲಿ ಇರುವವರಿಗೆ...

Read moreDetails
ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

February 13, 2026
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
Next Post
FACT CHECK : ಶಾಂಪೂಗೆ ವೋಡ್ಕಾ ಮಿಕ್ಸ್ ಮಾಡಿದ್ರೆ ಕೂದಲು ಅಂದಗೊಳ್ಳುತ್ತಾ..?! ವೈರಲ್ ಆದ ಈ ಟಿಪ್ಸ್ ಅಸಲಿಯತ್ತೇನು ಗೊತ್ತಾ..?! 

FACT CHECK : ಶಾಂಪೂಗೆ ವೋಡ್ಕಾ ಮಿಕ್ಸ್ ಮಾಡಿದ್ರೆ ಕೂದಲು ಅಂದಗೊಳ್ಳುತ್ತಾ..?! ವೈರಲ್ ಆದ ಈ ಟಿಪ್ಸ್ ಅಸಲಿಯತ್ತೇನು ಗೊತ್ತಾ..?! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada