• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Rajiv Gandhi | ದ್ವೇಷದ ರಾಜಕಾರಣವನ್ನು ಕೊನೆಗಾಣಿಸುವುದೇ ನಾವು ರಾಜೀವ್ ಗಾಂಧಿಯವರಿಗೆ ಸಲ್ಲಿಸುವ ನಿಜವಾದ ಗೌರವ ; CM ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
May 21, 2023
in Top Story, ಇತರೆ / Others, ಇದೀಗ
0
Rajiv Gandhi | ದ್ವೇಷದ ರಾಜಕಾರಣವನ್ನು ಕೊನೆಗಾಣಿಸುವುದೇ ನಾವು ರಾಜೀವ್ ಗಾಂಧಿಯವರಿಗೆ ಸಲ್ಲಿಸುವ ನಿಜವಾದ ಗೌರವ ; CM ಸಿದ್ದರಾಮಯ್ಯ
Share on WhatsAppShare on FacebookShare on Telegram

ದ್ವೇಷದ ರಾಜಕಾರಣವನ್ನು ಕೊನೆಗಾಣಿಸುವುದೇ ನಾವು ರಾಜೀವ್ ಗಾಂಧಿಯವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ಇರುವವರೆಗೂ ಸಮಾಜದಲ್ಲಿ ಶಾಂತಿ, ನೆಮ್ಮದಿ ಸಾಮರಸ್ಯ ಇರುವುದಿಲ್ಲ. ಬಡವರು, ದಲಿತರು, ಹಿಂದುಳಿದವರು ದೇಶದ ಅನೇಕ ಭಾಗಗಳಲ್ಲಿ ಆತಂಕದಲ್ಲಿ ಬದುಕುತ್ತಿದ್ದಾರೆ. ಜಗತ್ತು ಮತ್ತು ದೇಶದಲ್ಲಿ ಶಾಂತಿ ನೆಲೆಸಿದ್ದರೆ ಮಾತ್ರ ಮನುಕುಲ ಉದ್ಧಾರವಾಗುತ್ತದೆ. ರಾಜ್ಯದಲ್ಲಿ ಸರ್ವ ಜನಾಂಗದ ಶಾಂತಿಯ ತೋಟವನ್ನು ನಿರ್ಮಿಸಬೇಕಿದೆ. ಇದನ್ನು ಸ್ಥಾಪಿಸಲು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಮತ್ತಿತರರು ಪ್ರಯತ್ನಿಸಿದರು. ರಾಜೀವ್ ಗಾಂಧಿಯಂತಹ ಮಹಾನ್ ನಾಯಕನೊಬ್ಬನನ್ನು ಭಯೋತ್ಪಾದನೆ ಬಲಿತೆಗೆದುಕೊಂಡಿದೆ. ರಾಜೀವ್ ಗಾಂಧಿಯವರು ಒಬ್ಬ ಕ್ರಿಯಾಶೀಲ ನಾಯಕರು ಎಂದು ಮುಖ್ಯಮಂತ್ರಿಗಳು ಬಣ್ಣಿಸಿದರು. ಅವರು ಹಾಕಿಕೊಟ್ಟ ದಾರಿಯಲ್ಲಿ ಎಲ್ಲರೂ ನಡೆಯುವ ಪ್ರಯತ್ನ ಮಾಡೋಣ ಎಂದರು.

ADVERTISEMENT

ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಕೊಡುಗೆ ಕಾಂಗ್ರೆಸ್ ನವರು ಭಯೋತ್ಪಾದನೆಯನ್ನು ಬೆಂಬಲಿಸುತ್ತಾರೆ ಎಂದು ಮಾತನಾಡುವ ಬಿಜೆಪಿಯವರು ಯಾರೂ ಭಯೋತ್ಪಾದನೆಯಲ್ಲಿ ಪ್ರಾಣ ಕಳೆದುಕೊಂಡಿಲ್ಲ. ಕಾಂಗ್ರೆಸ್ಸಿನವರು ದೇಶದಲ್ಲಿ ಭಯೋತ್ಪಾದನೆ ತೊಲಗಿಸಲು ಹೋರಾಡಿದರು. ಭಯೋತ್ಪಾದನೆಯಿಂದ ದೇಶಕ್ಕೆ ಅಪಾಯ. ಜನರ ನೆಮ್ಮದಿ, ಶಾಂತಿಯನ್ನು ಹಾಳು ಮಾಡುವ ಭಯೋತ್ದಾದನೆಯನ್ನು ತೊಡೆದುಹಾಕಲು ಕಾಂಗ್ರೆಸ್ ಮೊದಲಿನಿಂದಲೂ ಹೋರಾಟ ಮಾಡುತ್ತಿದೆ. ಭಯೋತ್ಪಾದನೆಗೆ ರಾಜೀವ್ ಗಾಂಧಿ ಹಾಗೂ ಇಂದಿರಾ ಗಾಂಧಿ ಬಲಿಯಾಗಿದ್ದಾರೆ. ದೇಶದ ಐಕ್ಯತೆ, ಸಾರ್ವಭೌಮತ್ವವನ್ನು ಎತ್ತಿಹಿಡಿಯುವಲ್ಲಿ ಕಾಂಗ್ರೆಸ್ ಮುಂಚೂಣಿಯಲ್ಲಿದೆ. ದೇಶಕ್ಕೆ ಸ್ವಾತಂತ್ರ್ಯ ತರಲು ಹೋರಾಡಿ, ಭಾರತೀಯರಿಗೆ ಅವರದ್ದೇ ಸರ್ಕಾರ ರೂಪಿಸಲು ಅವಕಾಶ ಮಾಡಿಕೊಟ್ಟಿದ್ದು ಕಾಂಗ್ರಸ್ ಪಕ್ಷ. ಸ್ವಾತಂತ್ರ್ಯದ ಬೆಲೆ ಕಾಂಗ್ರೆಸ್ ಗೆ ತಿಳಿದಿದೆ. ರಾಜೀವ್ ಗಾಂಧಿಯವರು ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ತಮ್ಮದೇ ಕೊಡುಗೆ ನೀಡಿದ್ದಾರೆ. ನೆಹರೂ ಅವರು ಪ್ರಜಾಪ್ರಭುತ್ವದ ಬುನಾದಿ ಹಾಕಿದವರು. ಭಾರತದಂತಹ ದೊಡ್ಡ ದೇಶದಲ್ಲಿ ಪ್ರಜಾಪ್ರಭುತ್ವ ಯಶಸ್ವಿಯಾಗಲು ಜವಾಹರ್ ಲಾಲ್ ನೆಹರು ಅವರು ಹಾಕಿದ ಬುನಾದಿಯೇ ಕಾರಣ. ವಿರೋಧ ಪಕ್ಷಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕೆಂದು ಬೆಂಬಲ ಸಹಕಾರ ನೀಡಿದರು. ಈಗಿನ ಪ್ರಧಾನಿಗಳಿಗೂ ನೆಹರೂ ಅವರಿಗೂ ಹೋಲಿಕೆ ಮಾಡಲು ಸಾಧ್ಯವೇ ಇಲ್ಲ. ರಾಜೀವ್ ಗಾಂಧಿಯವರು ಪ್ರಜಾಪ್ರಭುತ್ವದಲ್ಲಿ ಜನರ ಪಾಲ್ಗೊಳ್ಳುವಿಕೆಯನ್ನು ಬಯಸಿದ್ದರು. ರಾಹುಲ್ ಗಾಂಧಿಯವರು ಅದನ್ನು ಮುಂದುವರೆಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಸಂಸತ್ತಿನಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ನೀಡಲಿ
ಕಾಂಗ್ರೆಸ್ ಪಕ್ಷ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ, ದಲಿತರಿಗೆ, ಹಿಂದುಳಿದವರಿಗೆ ಮೀಸಲಾತಿ ಕಲ್ಪಿಸಿದೆ. ಜನತಂತ್ರದ ವಿಕೇಂದ್ರೀಕರಣ ಜಾರಿಗೆ ತಂದಿದ್ದು ರಾಜೀವ್ ಗಾಂಧಿಯವರು. ಸಂಸತ್ತಿನಲ್ಲಿ ಮಹಿಳೆಯರಿಗೆ ಶೇ33 ರಷ್ಟು ಮೀಸಲಾತಿ ನೀಡುವ ಮಸೂದೆ ಇದೆ. ಶೇ.50ಕ್ಕೆ ಏರಿಸಿದರೆ ನಮ್ಮ ತಕರಾರು ಇಲ್ಲ ಎಂದರು. ನಿಜವಾದ ಅರ್ಥದಲ್ಲಿ ಸಮಪಾಲು. ಸಮಬಾಳು ದೊರೆಯಬೇಕು. ದೇಶದಲ್ಲಿ ಜ್ಯಾತ್ಯಾತೀತ ವ್ಯವಸ್ಥೆ ಉಳಿದು ಬೆಳೆಯಲು ಕಾಂಗ್ರೆಸ್ ಪಕ್ಷ ಕಾರಣ. ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ರಾಜೀವ್‍ಗಾಂಧಿಯವರ ಕೊಡುಗೆ ಅಪಾರ ಎಂದು ಸ್ಮರಿಸಿದರು.

ಏಳು ಕೋಟಿ ಕನ್ನಡಿಗರ ಗೆಲುವು
ಚುನಾವಣೆಯ ಗೆಲುವು ಕಾಂಗ್ರೆಸ್ ಪಕ್ಷದ್ದಲ್ಲ, ಇದು ಏಳು ಕೋಟಿ ಕನ್ನಡಿಗರ ಗೆಲುವು ಎಂದ ಮುಖ್ಯಮಂತ್ರಿಗಳು, ಜನ ಸುಭದ್ರ ಸರ್ಕಾರವನ್ನು ಬಯಸಿದ್ದಾರೆ. ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನಡೆಸುವುದೇ ನಮ್ಮ ಮುಂದಿರುವ ಸವಾಲು. ಐದು ಗ್ಯಾರಂಟಿಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಡಿರುವ ವ್ಯಾಖ್ಯಾನಕ್ಕೆ ಉತ್ತರ ನೀಡಿ ಮುಂದಿನ ಅಧಿವೇಶನದಲ್ಲಿ ಈ ಐದೂ ಗ್ಯಾರಂಟಿಗಳನ್ನು ಮತ್ತೊಮ್ಮೆ ಸ್ಥಿರೀಕರಿಸಿ ಆದೇಶ ಹೊರಡಿಸಿ ಅಂದಿನಿಂದಲೇ ಜಾರಿಗೆ ತರುತ್ತೇವೆ ಎಂದರು. ಮಾಹಿತಿ ಸಂಗ್ರಹಣೆ ಮುಗಿದ ಕೂಡಲೇ ಅನುಮೋದನೆ ನೀಡಿ, ಆದೇಶ ಹೊರಡಿಸಲಾಗುವುದು ಎಂದರು. ನಮ್ಮ ಪ್ರಣಾಳಿಕೆಯಲ್ಲಿ ಹೇಳಿರವ ಅನೇಕ ವಿಚಾರಗಳನ್ನೂ ಜಾರಿಗೆ ತರಲಾಗುವುದು. ಭರವಸೆಗಳನ್ನು ಚಾಚೂ ತಪ್ಪದೆ ಈಡೇರಿಸಿ, ನುಡಿದಂತೆ ನಡೆಯುವುದಾಗಿ ಭರವಸೆಯಿತ್ತರು. ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವ ಎಂ.ಬಿ.ಪಾಟೀಲ್ , ಬಿ.ಕೆ ಹರಿಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

Tags: cmsiddaramiahCongress PartyDKShivakumarRajiv Gandhiಸಿದ್ದರಾಮಯ್ಯ
Previous Post

List of Ministers Reduced From 28 to 8 ; 28ರಿಂದ 8ಕ್ಕೆ ಇಳಿದ ಸಚಿವರ ಪಟ್ಟಿ; ಸಿದ್ದು ವಿರುದ್ಧ ಮಂತ್ರಿಗಿರಿ ವಂಚಿತರ ಬೇಸರ , ಸಮಾರಂಭದಲ್ಲಿ ಗೈರು..!

Next Post

CM Siddaramaiah | ಜಲಾವೃತಗೊಂಡ ಕೆಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಸಿಲುಕಿದ್ದ ಮಹಿಳೆ ಸಾವು..!

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
Next Post
CM Siddaramaiah | ಜಲಾವೃತಗೊಂಡ ಕೆಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಸಿಲುಕಿದ್ದ ಮಹಿಳೆ ಸಾವು..!

CM Siddaramaiah | ಜಲಾವೃತಗೊಂಡ ಕೆಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಸಿಲುಕಿದ್ದ ಮಹಿಳೆ ಸಾವು..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada