ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯದ ಕೊರತೆ, ಕಳಪೆ ಮಟ್ಟದ ಬೋಧನೆ ಕಾರಣಕ್ಕಾಗಿ ರಾಜ್ಯದ 6 ಇಂಜಿನಿಯರಿಂಗ್ ಕಾಲೇಜುಗಳಿಗೆ ಮುಚ್ಚಲು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಿರ್ಧಾರ ಮಾಡಿದೆ.
ಪ್ರಸ್ತುತ 2021-22ರ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ ಆರು ಕಾಲೇಜಗಳ ಸೇವೆ ಸ್ಥಗಿತವಾಗಲಿದ್ದು, ಸದರಿ ಕಾಲೇಜುಗಳ ವಿದ್ಯಾರ್ಥಿಗಳನ್ನು ಬೇರೆ ಕಾಲೇಜುಗಳಿಗೆ ವರ್ಗಾವಣೆ ಮಾಡಲು ನಿರ್ಧಾರ ಮಾಡಲಾಗಿದೆ.
ಯಾವ ಯಾವ ಇಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ?
- ಬೆಂಗಳೂರಿನ ಆಲ್ಫಾ ಎಂಜಿನಿಯರಿಂಗ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ.
- ಬೆಳಗಾವಿಯ ಶೇಖ್ ಎಂಜಿನಿಯರಿಂಗ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ.
- ಬೆಂಗಳೂರಿನ ಇಸ್ಲಾಮಿಯಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ.
- ಚಾಮರಾಜನಗರದ ಏಕಲವ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ.
- ಕೆಜಿಎಫ್‌ನ ಶ್ರೀ ವಿನಾಯಕ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ.
- ಬೆಂಗಳೂರಿನ ಬಿಟಿಎಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಗೆ ಬೀಗ.
ಮೂಲಸೌಕರ್ಯ ವಂಚಿತ ಕಾರಣದಿಂದ ಈ ಆರು ಕಾಲೇಜುಗಳನ್ನು ಈ ವರ್ಷದಿಂದಲೇ ಮುಚ್ಚಲಿದ್ದು, ಅಲ್ಲಿನ ವಿದ್ಯಾರ್ಥಿಗಳಿಗೆ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪರ್ಯಾಯ ವ್ಯವಸ್ಥೆ ಮಾಡಿಕೊಡಲಿದೆ ಎನ್ನಲಾಗಿದೆ.