• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಇಂಜಿನಿಯರ್‌ಗಳು, ಕಂಟ್ರಾಕ್ಟರ್‌ಗಳು ಹಾಗೂ ಸರ್ಕಾರ ಎಲ್ಲರೂ ಸೇರಿ ಗೋಲ್ಮಾಲ್‌ ಮಾಡಿದ್ದಾರೆ : ಸಿದ್ದರಾಮಯ್ಯ

Any Mind by Any Mind
May 18, 2022
in ಕರ್ನಾಟಕ
0
ರಾಜ್ಯಗಳ ನಡುವೆ ಜಲ ವಿವಾದ ಸೃಷ್ಟಿಸಲೆಂದೇ ಕೇಂದ್ರ ಸರ್ಕಾರವು ನದಿ ಜೋಡಣೆ ಪ್ರಸ್ತಾಪಿಸಿದೆ: ಸಿದ್ದರಾಮಯ್ಯ
Share on WhatsAppShare on FacebookShare on Telegram

ರಾಯಚೂರು ಜಿಲ್ಲೆ ಲಿಂಗಸೂಗೂರು ಹಾಗೂ ದೇವದುರ್ಗಾ ತಾಲೂಕುಗಳಲ್ಲಿ ನಾರಾಯಣಪುರ ಬಲದಂಡೆ ನಾಲೆಯ 1 ರಿಂದ 15 ವಿತರಣಾ ನಾಲೆಗಳ ಆಧುನೀಕರಣ ಮಾಡಲು (ಈ, ಆರ್‌,ಎಮ್) 23/07/2021 ರಲ್ಲಿ 828 ಕೋಟಿ ರೂಪಾಯಿ ಮೊತ್ತದ ಹಾಗೂ 16 ರಿಂದ 18 ಉಪಕಾಲುವೆಗಳ ಅಂದಾಜು ವೆಚ್ಚ 791 ಕೋಟಿ ರೂಪಾಯಿಯ ಒಟ್ಟು 1,619 ಕೋಟಿ ರೂಪಾಯಿ ಟೆಂಡರ್‌ ಕರೆಯಲಾಗಿದೆ. ಈ ಎರಡೂ ಟೆಂಡರ್‌ ಎನ್.ಡಿ ವಡ್ಡರ್ ಅವರ ಹೆಸರಿಗಾಗಿದೆ, ಇವರು ಲಿಂಗಸೂಗೂರಿನ ಮಾಜಿ ಶಾಸಕರಾದ ಮಾನಪ್ಪ ವಜ್ಜಲ್ ಅವರ ಸಹೋದರ. ಕೆಲಸವೇ ಆಗದೆ 425 ಕೋಟಿ ರೂಪಾಯಿ ಬಿಲ್‌ ಪಾವತಿಯಾಗಿದೆ ಎಂದು ಹೇಳಿದ್ದಾರೆ.

ADVERTISEMENT

ವಿರೋಧ ಪಕ್ಷದ  ನಾಯಕರಾದ ಸಿದ್ದರಾಮಯ್ಯ ಅವರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ, ಹಾಲಿ ಶಾಸಕರಾದ ಹುಲಿಗೇರಿ ಅವರು ಮುಖ್ಯಮಂತ್ರಿಗಳಿಗೆ, ಕೇಂದ್ರ ಹಾಗೂ ರಾಜ್ಯದ ನೀರಾವರಿ ಸಚಿವರಿಗೆ, ಜಲ ಸಂಪನ್ಮೂಲ ಇಲಾಖೆಯ ಸಂಬಂಧಿತ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಇದಾದ ನಂತರ ಮುಖ್ಯಮಂತ್ರಿಗಳು ಸ್ಥಳ ಪರಿಶೀಲನೆ ಮಾಡಿ ವರದಿ ನೀಡುವಂತೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿಗಳು ಪತ್ರ ಬರೆದ ಮೇಲೆ ಒಂದು ತಾಂತ್ರಿಕ ಸಮಿತಿಯನ್ನು ರಚನೆ ಮಾಡಲಾಗಿದೆ. ಅದರಲ್ಲಿ ರಾಮ್‌ ಪುರೆ, ಶಿವಕುಮಾರ್‌, ಅಶೋಕ್‌ ಹೊಸನಾಡ್‌, ರಾಜೇಂದ್ರ, ಪ್ರದೀಪ್‌ ಮಿತ್ರ ಮಂಜುನಾಥ್‌ ಸೇರಿದಂತೆ 6 ಜನ ಸದಸ್ಯರಿದ್ದಾರೆ. ಈ ಸಮಿತಿ ಸ್ಥಳಕ್ಕೆ ಭೇಟಿನೀಡಿ ಒಂದು ವರದಿ ನೀಡಿದೆ.

ಸಮಿತಿ ನೀಡಿದ ವರದಿಯಲ್ಲಿ ಈ ಮೊದಲೇ ಮಣ್ಣು ತುಂಬಿಸುವ ಕಾರ್ಯ ಮಾಡಿ ಮುಗಿಸಿರುವುದರಿಂದ ಈಗ ಮತ್ತೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮಣ್ಣು ತುಂಬಿಸುವ ಅಗತ್ಯ ವೇನಿದೆ?, ಇವರು ಮಣ್ಣು ತುಂಬಲಾಗಿದೆ ಎಂದು ತೋರಿಸುತ್ತಿರುವ ಲೆಕ್ಕ ಸುಳ್ಳು ಎಂದು ಹೇಳಿದೆ. ನಿಯಮದ ಪ್ರಕಾರ ಕೆಂಪು ಮಣ್ಣು ಇರುವ ಕಡೆ ಗ್ರಾವೆಲ್‌ ಹಾಕಬೇಕಾದ ಅಗತ್ಯವಿಲ್ಲ, ಆದರೆ ಇಲ್ಲಿ ಗ್ರಾವೆಲ್‌ ಹಾಕಿದ್ದೇವೆ ಎಂದು ಸುಳ್ಳು ಲೆಕ್ಕ ತೋರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಯೋಜನೆಯಲ್ಲಿ ಇಂಜಿನಿಯರ್‌ ಗಳು, ಕಂಟ್ರಾಕ್ಟರ್‌ ಗಳು ಹಾಗೂ ಸರ್ಕಾರ ಎಲ್ಲರೂ ಸೇರಿ ಗೋಲ್ಮಾಲ್‌ ಮಾಡಿದ್ದಾರೆ. ಹಿಂದೊಮ್ಮೆ ಆಧುನೀಕರಣಗೊಂಡ ಕಾಲುವೆಗಳಿಗೆ ಮತ್ತೆ ಮರು ನಿರ್ಮಾಣ ಮಾಡುವುದಾಗಿ ಹೇಳಿ ದುಡ್ಡು ಹೊಡೆಯಲಾಗಿದೆ. ಮಣ್ಣು ತುಂಬಿಸಿದ್ದೇವೆ, ಕಲ್ಲು ಬಂಡೆ ಬ್ಲಾಸ್ಟ್‌ ಮಾಡಿದ್ದೇವೆ, ಮುರಮ್‌ ಹಾಕಿದ್ದೇವೆ ಎಂದೆಲ್ಲ ಸುಳ್ಳು ಲೆಕ್ಕ ನೀಡಿ ಬಿಲ್‌ ಪಡೆಯಲಾಗಿದೆ ಎಂದು ಹೇಳಿದ್ದಾರೆ.

ಎಸ್ಟಿಮೇಟ್‌ ಕಮಿಟಿಯ ಅಧ್ಯಕ್ಷ ಬಿಜೆಪಿ ಶಾಸಕ ಅಭಯ್‌ ಪಾಟೀಲ್. ದೊಡ್ಡನಗೌಡ ಪಾಟೀಲ್ ಕೂಡ ಕಮಿಟಿಯ ಒಬ್ಬ ಸದಸ್ಯ. ಈ ಎಸ್ಟಿಮೇಟ್‌ ಕಮಿಟಿಯವರು ಪರಿಶೀಲನೆ ನಡೆಸಲು ಸ್ಥಳಕ್ಕೆ ಹೋದರೆ ಕಂಟ್ರಾಕ್ಟರ್‌ ಪರವಾದ ಗೂಂಡಾಗಳು ಇವರನ್ನು ಒಳಗೆ ಬಿಡಲೇ ಇಲ್ಲ. ಈ ವಿಚಾರ ಪ್ರಜಾವಾಣಿ ಪತ್ರಿಕೆಯಲ್ಲಿ ವರದಿಯಾಗಿದೆ. ಕಂಟ್ರಾಕ್ಟರ್‌ ಗೆ ಸರ್ಕಾರದ ಕುಮ್ಮಕ್ಕು ಇಲ್ಲದೆ ಹೀಗೆ ತಡೆದು ಕಳಿಸೋಕೆ ಆಗುತ್ತಾ? ಈ ವರೆಗೆ ಕಂಟ್ರಾಕ್ಟರ್‌ ಅಥವಾ ಅವನ ಹಿಂಬಾಲಕ ಗೂಂಡಾಗಳ ಮೇಲೆ ಯಾವ ಕ್ರಮ ಕೈಗೊಂಡಿಲ್ಲ. ದೂರು ನೀಡಲು ಹೋದರೆ ಮೇಲಿನಿಂದ ಒತ್ತಡ ಹಾಕಿ ದೂರು ನೀಡದಂತೆ ತಡೆಯಲಾಗಿದೆ ಎಂದು ಹೇಳಿದ್ದಾರೆ.

ಸುಮಾರು 800 ಕೋಟಿ ರೂಪಾಯಿಯಷ್ಟು ಹಣವನ್ನು ಮಣ್ಣು ತುಂಬಿಸುವುದಾಗಲೀ, , ಮುರಮ್‌ ಹಾಕುವುದಾಗಲೀ ಮಾಡದೆ ದುಡ್ಡು ನುಂಗಲಾಗಿದೆ.

ನನ್ನ ಪ್ರಕಾರ ಈ ಹಗರಣವನ್ನು ಸದನ ಸಮಿತಿಗೆ ವಹಿಸುವುದು ಉತ್ತಮ, ಸರ್ಕಾರ ಸದನ ಸಮಿತಿಗೆ ಪೊಲೀಸ್‌ ಭದ್ರತೆ ನೀಡಿ, ಸ್ಥಳ ಪರಿಶೀಲನೆಗೆ ಅವಕಾಶ ಮಾಡಿಕೊಡಬೇಕು. ಇಲ್ಲಿ ಕಂಡುಬರುತ್ತಿರುವ ಎಲ್ಲಾ ಅವ್ಯವಹಾರಗಳು ನಡೆದಿದ್ದೇ ಆದರೆ ಅಷ್ಟೂ ಹಣವನ್ನು ವಸೂಲಿ ಮಾಡಿ, ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ, ಸಂಬಂಧಿತ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸುತ್ತೇನೆ. ಇದಕ್ಕೆ ಜಲ ಸಂಪನ್ಮೂಲ ಇಲಾಖೆಯ ಸಚಿವರೇ ನೇರ ಹೊಣೆಯಾಗಿದ್ದು, ಹಗರಣದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು.

ಸರ್ಕಾರ ಭ್ರಷ್ಟಾಚಾರವನ್ನು ಬೆಂಬಲಿಸುತ್ತಾ ಇದ್ದರೆ, ಸರ್ಕಾರ ಮಾನಗೆಟ್ಟು ನಿಂತಿದ್ದರೆ ನಾವು ಎಷ್ಟೇ ನ್ಯಾಯಕ್ಕಾಗಿ ಕೂಗಾಡಿದರೂ ಅದರಿಂದ ಪ್ರಯೋಜನವಾಗಲ್ಲ. ನ್ಯಾಯಾಲಯದಲ್ಲಿ ಹೋರಾಟ ಮಾಡುವ ಅವಕಾಶಗಳ ಬಗ್ಗೆಯೂ ಯೋಚನೆ ಮಾಡುತ್ತೇವೆ.

ಸರ್ಕಾರ ಕಮಿಷನ್‌ ಹಗರಣದ ಬಗ್ಗೆ ಕ್ರಮ ಕೈಗೊಳ್ಳದೆ ಹೋದರೆ ನಾವು ಎಲ್ಲಾ ಕಾಮಗಾರಿಗಳನ್ನು ಸ್ಥಗಿತಗೊಳಿಸುವುದಾಗಿ ಈ ಹಿಂದೆ ಕೆಂಪಣ್ಣನವರು ಹೇಳಿದ್ದರು, ಆದರೆ ಈಗ ಕೆಂಪಣ್ಣನವರು ಮುಖ್ಯಮಂತ್ರಿಗಳ ಜೊತೆ ಒಳ ಒಪ್ಪಂದ ಮಾಡಿಕೊಂಡು ಸುಮ್ಮನಾಗಿದ್ದಾರೆ. ಆದರೆ ಅವರು ಪ್ರಧಾನಿಗಳಿಗೆ ಬರೆದ ಪತ್ರ ಸುಳ್ಳಾಗಲು ಸಾಧ್ಯವಿಲ್ಲ.

ನನಗೆ ವರ್ಮಾ ಎನ್ನುವವರು ವಾಚ್‌ ಗಿಫ್ಟ್‌ ಕೊಟ್ಟಿದ್ದರು, ನಾನು ಅದಕ್ಕೆ ಗಿಫ್ಟ್‌ ಟ್ಯಾಕ್ಸ್‌ ಕಟ್ಟಿ ಎ.ಸಿ.ಬಿ ಗೆ ರೆಫರ್‌ ಮಾಡಿದ್ದೆ, ವರ್ಮಾ ಅವರು ದುಬೈನಲ್ಲಿ ಖರೀದಿ ಮಾಡಿದ ಬಿಲ್‌ ಹಾಜರು ಪಡಿಸಿ, ವಾಚ್‌ ನಾನೇ ಕೊಟ್ಟಿದ್ದು ಎಂದು ಅಫಿಡವಿಟ್‌ ಸಲ್ಲಿಸಿದ್ದರು. ಇಷ್ಟೆಲ್ಲಾ ಆದಮೇಲೆ ಆ ವಾಚಿನ ಸಹವಾಸವೇ ಬೇಡ ಎಂದು ಸರ್ಕಾರಕ್ಕೆ ಕೊಟ್ಟಿದ್ದೀನಿ.

ಭಗತ್‌ ಸಿಂಗ್‌ ಅಪ್ಪಟ ದೇಶಭಕ್ತ. ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಬೆಳೆಸಬೇಕು. ಭಗತ್‌ ಸಿಂಗ್‌ ರಂಥವರ ಬಗ್ಗೆ ಓದಿದರೆ ಮಕ್ಕಳಿಗೆ ದೇಶಾಭಿಮಾನ, ಸ್ಪೂರ್ತಿ ಬರುತ್ತದೆ. ಇವರ ಬಗೆಗಿನ ಪಾಠ ತೆಗೆದು ಹೆಡ್ಗೇವಾರ್‌ ಅವರ ಬಗ್ಗೆ ಪಾಠ ಸೇರಿಸಿದರೆ ಏನು  ಉಪಯೋಗ?

ದೇಶಕ್ಕೆ ಹೆಡ್ಗೇವಾರ್‌  ಕೊಡುಗೆ ಏನು? ಜಾತೀಯತೆ ಪ್ರಚಾರ ಮಾಡಿದ್ದು, ಆರ್‌,ಎಸ್‌,ಎಸ್‌ ಹುಟ್ಟುಹಾಕಿದ್ದು, ಹಿಂದುತ್ವ ಪ್ರಚಾರ ಮಾಡಿದ್ದು ಇವು ಹೆಡ್ಗೇವಾರ್‌ ಮಾಡಿದ್ದು. ಅವರು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದಾರ? ಅವರು ಮಾತನಾಡಿರುವುದು ಬರೀ ದ್ವೇಷ ಭಾವನೆ ಬೆಳೆಸುವಂತವು, ಇವರ ಭಾಷಣ ಕೇಳಿ ವಿದ್ಯಾರ್ಥಿಗಳು ಏನು ಕಲಿಯುತ್ತಾರೆ? ದ್ವೇಷವನ್ನು ಅಲ್ಲವೇ?

ಪಠ್ಯಕ್ರಮದಿಂದ ಭಗತ್‌ ಸಿಂಗ್‌ ಪಾಠ ಕೈಬಿಟ್ಟಿದ್ದರೆ ಕೂಡಲೇ ಸೇರಿಸಬೇಕು. ಯಾವುದೇ ಕಾರಣಕ್ಕೂ ಹೆಡ್ಗೆವಾರ್‌ ಜೀವನ, ವ್ಯಕ್ತಿತ್ವದ ಪಾಠವನ್ನು ಸೇರಿಸಬಾರದು.

Tags: BJPCongress PartyCovid 19ಇಂಜಿನಿಯರ್‌ಗಳು ಕಂಟ್ರಾಕ್ಟರ್‌ಗಳುಎಚ್ ಡಿ ಕುಮಾರಸ್ವಾಮಿಕೋವಿಡ್-19ಗೋಲ್ಮಾಲ್‌ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸರ್ಕಾರಸಿದ್ದರಾಮಯ್ಯ
Previous Post

ಭಾರತ ಟಿ-20ಗೆ ವಿವಿಎಸ್‌ ಲಕ್ಷ್ಮಣ್‌‌ ತಾತ್ಕಾಲಿಕ ಕೋಚ್‌?

Next Post

ಭಾರತದ ವಿದೇಶಿ ವಿನಿಮಯ ಆಪದ್ಧನ ಏಕೆ ಕರಗುತ್ತಿದೆ?

Related Posts

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
0

ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಗೆ (KS Eshwarappa) ಲೋಕಾಯುಕ್ತ (Lokayukta) ಶಾಕ್ ಎದುರಾಗಿದೆ. ಈ ಹಿಂದೆ ಬಿಜೆಪಿ (Bjp) ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಈಶ್ವರಪ್ಪ ಅವರ...

Read moreDetails
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

July 3, 2025
Next Post
ಭಾರತದ ವಿದೇಶಿ ವಿನಿಮಯ ಆಪದ್ಧನ ಏಕೆ ಕರಗುತ್ತಿದೆ?

ಭಾರತದ ವಿದೇಶಿ ವಿನಿಮಯ ಆಪದ್ಧನ ಏಕೆ ಕರಗುತ್ತಿದೆ?

Please login to join discussion

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada