ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ಕೆಎಸ್ ಈಶ್ವರಪ್ಪ ನೀಡಿದ್ದಾರೆ. ಆದರೆ ನಮ್ಮ ಅವರ ಹೋರಾಟ ಅವರ ರಾಜೀನಾಮೆ ಪಡೆಯುವುದು ಅಲ್ಲ. ಭ್ರಷ್ಟಾಚಾರ ಸೆಕ್ಷನ್ ಅಡಿ ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೇ.೪೦ರಷ್ಟು ಭ್ರಷ್ಟಾಚಾರ ಕೇಳಿದ್ದಾರೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿ ಅವರನ್ನು ಕೂಡಲೇ ಬಂಧಿಸಬೇಕು ಎಂದರು.