• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎಸ್ಸಿ, ಎಸ್ಟಿ ಉದ್ಯಮಿಗಳಿಗೆ ಅಗತ್ಯ ತರಬೇತಿ ವ್ಯವಸ್ಥೆ: ಎಂ.ಬಿ. ಪಾಟೀಲ್‌

ಪ್ರತಿಧ್ವನಿ by ಪ್ರತಿಧ್ವನಿ
September 22, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಪರಿಶಿಷ್ಟ ಜಾತಿ/ವರ್ಗಗಳ ಉದ್ಯಮಿಗಳಿಗೆ (Entrepreneurs) ಸೂಕ್ತ ತರಬೇತಿಯ ಅಗತ್ಯವಿದೆ. ಈ ಸಂಬಂಧ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರೊಂದಿಗೆ ಚರ್ಚಿಸಿ ಈ ವ್ಯವಸ್ಥೆ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ (MB Patil) ಹೇಳಿದ್ದಾರೆ.

ADVERTISEMENT

ಕರ್ನಾಟಕ ದಲಿತ ಉದ್ಯಮಿಗಳ ಸಂಘಟನೆ (ಕೆಇಡಿಎ) ಏರ್ಪಡಿಸಿದ್ದ ಬೃಹತ್ ಪ.ಜಾತಿ/ವರ್ಗಗಳ ಎಂಎಸ್‌ಎಂಇ ಸಮಾವೇಶದಲ್ಲಿ ಅವರು ಮಾತನಾಡಿದರು.

ಸರಿಯಾದ ರೀತಿಯಲ್ಲಿ ತರಬೇತಿ ನೀಡುವುದರಿಂದ ಪರಿಶಿಷ್ಟ ಉದ್ಯಮಿಗಳನ್ನು ಇನ್ನೂ ಹೆಚ್ಚು ಮಾಡಬಹುದು ಎಂದು ತಿಳಿಸಿದ ಅವರು, ಉದ್ಯಮ ಕ್ಷೇತ್ರದಲ್ಲಿ ಪ.ಜಾತಿ/ವರ್ಗಗಳ ಉದ್ಯಮಶೀಲರ ಬೆಳವಣಿಗೆಗೆ ಸರ್ಕಾರ ಒತ್ತಾಸೆಯಾಗಿದೆ. ಆರ್ಥಿಕ, ಮೂಲಸೌಕರ್ಯ, ಸ್ಟಾರ್ಟಪ್ ಹಾಗೂ ಎಂಎಸ್‌ಎಂಇ ಗಳಿಗೆ ನಿಯಂತ್ರಕ ವ್ಯವಸ್ಥೆ ಇತ್ಯಾದಿ ಉಪಕ್ರಮಗಳನ್ನು ಜಾರಿಗೊಳಿಸಲಾಗಿದೆ. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕೆಐಎಡಿಬಿ, ಕೆಎಸ್‌ಎಸ್‌ಐಡಿಸಿ, ಕೆಎಸ್‌ಎಫ್‌ಸಿ, ಕೆಯುಎಂ, ಜಿಲ್ಲಾ ಕೈಗಾರಿಕಾ ಕೇಂದ್ರಗಳು ಉದ್ಯಮಿಗಳ ಅಹವಾಲುಗಳನ್ನು ನಿಯಮಿತವಾಗಿ ಆಲಿಸುತ್ತಿವೆ ಎಂದು ವಿವರಿಸಿದರು.

ಕೆಐಎಡಿಬಿ ಪ್ಲಾಟ್ ಹಾಗೂ ಕೆಎಸ್‌ಎಸ್‌ಐಡಿಸಿ ಷೆಡ್‌ಗಳ ಹಂಚಿಕೆಯಲ್ಲಿ ಪರಿಶಿಷ್ಟ ಜಾತಿ/ವರ್ಗದ ಉದ್ಯಮಿಗಳಿಗೆ ಶೇ. 24.1 ರಷ್ಟು ಮೀಸಲು, ಭೂಮಿ ಮಂಜೂರಾತಿಯಲ್ಲಿ ಶೇ. 75 ರಷ್ಟು ಸಬ್ಸಿಡಿ, ಕೆಎಸ್ ಎಫ್‌ಸಿಯಿಂದ ರೂ. 10 ಕೋಟಿಯವರೆಗೆ ಶೇ. 4ರಷ್ಟು ಬಡ್ಡಿ ದರದಲ್ಲಿ ಸಾಲ ನೆರವು, ಮಾರ್ಜಿನ್ ಮನಿಯ ಶೇ. 50 ರಷ್ಟು (ಗರಿಷ್ಠ ರೂ. 75 ಲಕ್ಷ) ಬೀಜಧನದ ನೆರವು ಸೌಲಭ್ಯಗಳನ್ನು ಸರ್ಕಾರ ನೀಡುತ್ತಿದೆ ಎಂದರು.

ಎಸ್ಸಿ, ಎಸ್ಟಿ ಉದ್ಯಮಿಗಳಿಗೆ ಮಾಡಿರುವ ನಿವೇಶನ ಹಂಚಿಕೆಯಡಿ ಕೆಐಎಡಿಬಿಗೆ ಸರ್ಕಾರದಿಂದ 900 ಕೋಟಿ ರೂಪಾಯಿ ಬಾಕಿ ಇದೆ. ಹಾಗೆಂದು, ನಾವು ನೆರವನ್ನು ನಿಲ್ಲಿಸಿಲ್ಲ. ಸಮಾಜ ಕಲ್ಯಾಣ ಇಲಾಖೆಯ ಸಲಹೆಗಾರರಾಗಿರುವ ವೆಂಕಟಯ್ಯನವರಂಥವರು ಇತ್ತ ಗಮನ ಹರಿಸಿ, ಒತ್ತಡ ಹೇರಿದರೆ ಕೈಗಾರಿಕಾ ಇಲಾಖೆಗೂ ಒಳ್ಳೆಯದಾಗುತ್ತದೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ.ಜಾತಿ ಉದ್ಯಮಿಗಳಿಗೆ ಶೇ. 75ರಷ್ಟು ಸಬ್ಸಿಡಿ ಬಾಬ್ತಿಗೆ ರೂ. 245.50 ಕೋಟಿ, ಹಾಗೆಯೇ ಪ.ವರ್ಗದವರಿಗೆ ರೂ. 62.24 ಕೋಟಿ ಬಿಡುಗಡೆಗೊಳಿಸಿದೆ. ಜತೆಗೆ, ಕೈಗಾರಿಕಾ ಪ್ರದೇಶಗಳ ಸಿಎ ಪ್ಲಾಟ್‌ಗಳಲ್ಲಿ ಶೇ. 24.1 ರಷ್ಟನ್ನು ಈ ಸಮುದಾಯಗಳಿಗಾಗಿ ಮೀಸಲಾತಿ ನಿಗದಿಗೊಳಿಸಿ, ಹಂಚಿಕೆ ಮಾಡಲಾಗುತ್ತಿದೆ ಎಂದು ಸಚಿವರು ಹೇಳಿದರು.

ಭೂಮಿ ಮಂಜೂರು ಕಳೆದ 15 ತಿಂಗಳ ಅವಧಿಯಲ್ಲಿ ಸರ್ಕಾರವು ಪರಿಶಿಷ್ಟ ಜಾತಿಯ 121 ಉದ್ಯಮಿಗಳಿಗೆ 130 ಎಕರೆ ಹಾಗೂ ಪರಿಶಿಷ್ಟ ವರ್ಗದ 39 ಉದ್ಯಮಿಗಳಿಗೆ 42 ಎಕರೆ ಭೂಮಿ ಮಂಜೂರು ಮಾಡಿದೆ ಎಂದು ಇದೇ ವೇಳೆ ತಿಳಿಸಿದರು.

ಈ ವೇಳೆ ಕೇಂದ್ರ ಸಚಿವೆ ಶೋಭಾ‌ ಕರಂದ್ಲಾಜೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್, ಕೆಐಎಡಿಬಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಮಹೇಶ, ಕೋಲಾರ ಸಂಸದ ಮಲ್ಲೇಶ ಬಾಬು, ಚಿಕ್ಕೋಡಿ ಸಂಸದೆ ಪ್ರಿಯಾಂಕ ಜಾರಕಿಹೊಳಿ, ರಾಜ್ಯಸಭಾ ಮಾಜಿ ಸದಸ್ಯ ಡಾ.ಎಲ್. ಹನುಮಂತಯ್ಯ, ಸಿ.ಜಿ. ಶ್ರೀನಿವಾಸನ್ ಹಾಗೂ ಮತ್ತಿತರರು ಇದ್ದರು.

Tags: Minister M B PatilPraiyanka kharge ministerUnion Minister Shobha Karandlaje
Previous Post

ನಕ್ಸಲ್‌ ಮುಕ್ತ ಬಸ್ತಾರ್‌ ಗಾಗಿ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಶಾಂತಿ ಸಮಿತಿ ಸದಸ್ಯರು

Next Post

ಈಶಾನ್ಯ ರಾಜ್ಯಗಳಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿ

Related Posts

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ
Top Story

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

by ಪ್ರತಿಧ್ವನಿ
April 27, 2026
0

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವು ರಾಜ್ಯದ ಭದ್ರತಾ ವ್ಯವಸ್ಥೆಯನ್ನು ಎಚ್ಚರಿಸಿದ ಪ್ರಮುಖ ಉಗ್ರ ಕೃತ್ಯಗಳಲ್ಲಿ ಒಂದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದ...

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post

ಈಶಾನ್ಯ ರಾಜ್ಯಗಳಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada