• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, September 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆಗೆ ‘ಕರ್ನಾಟಕ ಹೆರಿಟೇಜ್ ಅಂಡ್‌ ಕಲ್ಚರಲ್‌ ಫೌಂಡೇಶನ್‌ ಸ್ಥಾಪನೆ : ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್‌ ಘೋಷಣೆ

ಕರ್ನಾಟಕದ ಕಲೆ, ಸಂಸ್ಕೃತಿ, ಸಾಹಿತ್ಯ ಮತ್ತು ಪರಂಪರೆಯನ್ನು ಜಾಗತಿಕವಾಗಿ ಪರಿಚಯಿಸಲು ಕೆ.ಜೆ. ಜಾರ್ಜ್‌ ಒತ್ತು..

ಪ್ರತಿಧ್ವನಿ by ಪ್ರತಿಧ್ವನಿ
September 2, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ಸರ್ಕಾರಿ ಗೆಜೆಟ್
0
ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆಗೆ ‘ಕರ್ನಾಟಕ ಹೆರಿಟೇಜ್ ಅಂಡ್‌ ಕಲ್ಚರಲ್‌ ಫೌಂಡೇಶನ್‌ ಸ್ಥಾಪನೆ : ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್‌ ಘೋಷಣೆ
Share on WhatsAppShare on FacebookShare on Telegram

– ಸರ್ಕಾರ, CSR, NRI ಹಾಗೂ ಸಾರ್ವಜನಿಕರ ಸಹಭಾಗಿತ್ವದ ಮೂಲಕ ಸಂರಕ್ಷಣೆಗೆ ಹೊಸ ಮಾದರಿ
– ಐತಿಹಾಸಿಕ ಸ್ಮಾರಕಗಳು, ಪುರಾತತ್ವ ತಾಣಗಳು ಹಾಗೂ ವಸ್ತುಸಂಗ್ರಹಾಲಯಗಳಿಗೆ ಸುಸ್ಥಿರ ಹಣಕಾಸು ವ್ಯವಸ್ಥೆ
– ಜಾಗತಿಕ ಕನ್ನಡಿಗರನ್ನು ಸಾಂಸ್ಕೃತಿಕ ರಾಯಭಾರಿಗಳಾಗಿ ತೊಡಗಿಸಿಕೊಳ್ಳುವ ಉದ್ದೇಶ
– ಸದ್ಯದಲ್ಲೇ ಸಚಿವ ಸಂಪುಟದ ಮುಂದೆ ಪ್ರಸ್ತಾವನೆ

ADVERTISEMENT

ಬೆಂಗಳೂರು : ಕರ್ನಾಟಕದ ರಾಜ್ಯದ ಐತಿಹಾಸಿಕ ಸ್ಮಾರಕಗಳು, ಪುರಾತತ್ವ ತಾಣಗಳು, ವಸ್ತುಸಂಗ್ರಹಾಲಯಗಳು ಹಾಗೂ ಸಾಂಸ್ಕೃತಿಕ ಸಂಪತ್ತಿನ ಸಂರಕ್ಷಣೆಯನ್ನು ವ್ಯವಸ್ಥಿತಗೊಳಿಸುವುದರ ಜೊತೆಗೆ, ರಾಜ್ಯದ ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಉದ್ದೇಶದಿಂದ *‘ಕರ್ನಾಟಕ ಹೆರಿಟೇಜ್ ಅಂಡ್‌ ಕಲ್ಚರಲ್‌ ಫೌಂಡೇಶನ್‌ (KHCF)’* ಸ್ಥಾಪಿಸುವ ಕುರಿತು ರಾಜ್ಯ ಪ್ರವಾಸೋದ್ಯಮ ಇಲಾಖೆ ಯೋಜನೆ ರೂಪಿಸಿದೆ.

ಈ ಸಂಬಂಧ ರಾಜ್ಯ ಪುರಾತತ್ವ, ವಸ್ತುಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಿಂದ ಪ್ರಸ್ತಾವನೆ ಸಿದ್ಧಪಡಿಸಲಾಗಿದ್ದು, ಸದ್ಯದಲ್ಲೇ ಸಚಿವ ಸಂಪುಟದ ಮುಂದೆ ಸಲ್ಲಿಸಲಾಗುವುದು *ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್‌ ತಿಳಿಸಿದ್ದಾರೆ.

ಶಿಲ್ಪಕಲೆಯ ಮಹಾ ಅನುಭೂತಿ: ಹಂಪಿ ವಿಜಯ ವಿಠಲ ದೇವಸ್ಥಾನ - Vittala Temple, Hampi

ರಾಜ್ಯದಲ್ಲಿ ಜಾರಿಯಲ್ಲಿರುವ *‘ಅಡಾಪ್ಟ್ ಎ ಮಾನ್ಯುಮೆಂಟ್‌’* ಯೋಜನೆಗೆ ದೊರೆತಿರುವ ಉತ್ತಮ ಸ್ಪಂದನೆಯನ್ನು ಮತ್ತಷ್ಟು ವಿಸ್ತರಿಸಿ, ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಪುನಶ್ಚೇತನ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಜೊತೆಗೆ ಖಾಸಗಿ ವಲಯ ಮತ್ತು ಸಾರ್ವಜನಿಕರ ಸಹಭಾಗಿತ್ವವನ್ನು ಬಳಸಿಕೊಳ್ಳುವುದು ಫೌಂಡೇಶನ್‌ನ ಪ್ರಮುಖ ಉದ್ದೇಶವಾಗಿದೆ.

ರಾಜ್ಯದ 239 ತಾಲ್ಲೂಕುಗಳಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಸುಮಾರು ಒಂದು ಲಕ್ಷ ಐತಿಹಾಸಿಕ ಸ್ಮಾರಕಗಳು ಹಾಗೂ ಪುರಾತತ್ವ ತಾಣಗಳು ಗುರುತಿಸಲ್ಪಟ್ಟಿವೆ. ಇಂತಹ ವಿಶಾಲ ಐತಿಹಾಸಿಕ ಸಂಪತ್ತಿನ ಸಂರಕ್ಷಣೆಗೆ ದೀರ್ಘಕಾಲಿಕ ಮತ್ತು ಸ್ಥಿರವಾದ ಹಣಕಾಸು ವ್ಯವಸ್ಥೆಯ ಅಗತ್ಯವಿದೆ ಎಂದು ಸಚಿವರು ಹೇಳಿದ್ದಾರೆ.

Historical Monuments to Visit in Karnataka | ಕರ್ನಾಟಕದಲ್ಲಿ ಭೇಟಿ ನೀಡಬೇಕಾದ 6  ಪ್ರಸಿದ್ಧ ಐತಿಹಾಸಿಕ ಸ್ಮಾರಕಗಳು Karnataka News in Kannada

CSR, NRI ಹಾಗೂ ಸಾರ್ವಜನಿಕರ ಸಹಭಾಗಿತ್ವ

ಪ್ರಸ್ತಾವಿತ ಕರ್ನಾಟಕ ಹೆರಿಟೇಜ್ ಅಂಡ್‌ ಕಲ್ಚರಲ್‌ ಫೌಂಡೇಶನ್‌ ಮೂಲಕ CSR ಅನುದಾನ, ಅನಿವಾಸಿ ಭಾರತೀಯರ (NRI) ಕೊಡುಗೆ ಹಾಗೂ ಸಾರ್ವಜನಿಕರ ದೇಣಿಗೆಗಳನ್ನು ಪಾರದರ್ಶಕ ವ್ಯವಸ್ಥೆಯಡಿ ಒಗ್ಗೂಡಿಸುವ ಉದ್ದೇಶ ಹೊಂದಲಾಗಿದೆ. ದಾನಿಗಳು ತಮಗೆ ಆಸಕ್ತಿಯಿರುವ ನಿರ್ದಿಷ್ಟ ಸ್ಮಾರಕ, ಪುರಾತತ್ವ ತಾಣ ಅಥವಾ ವಸ್ತುಸಂಗ್ರಹಾಲಯದ ಸಂರಕ್ಷಣೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಕೊಡುಗೆ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಐತಿಹಾಸಿಕ ಪಾರಂಪರಿಕ ತಾಣವಾದ ಪಟ್ಟದ ಕಲ್ಲಿನ ಕೆಲವು ಸುಂದರ ಚಾಯಾ ಚಿತ್ರಗಳು  ನಿಮಗಾಗಿ. ಮುಂದಿನ ಪೊಸ್ಟನಲ್ಲಿ ಪಟ್ಟದ ಕಲ್ಲಿನ ಮಾಹಿತಿ ನಿಮಗಾಗಿ ನಮ್ಮ ಈ ...

ಸಂರಕ್ಷಣೆಯೊಂದಿಗೆ ಸಂಸ್ಕೃತಿಯ ಪ್ರಚಾರ..

ಫೌಂಡೇಶನ್‌ ಕೇವಲ ಸ್ಮಾರಕಗಳ ಸಂರಕ್ಷಣೆಗೆ ಸೀಮಿತವಾಗದೆ, ಆಯಾ ಸ್ಮಾರಕಗಳ ಕಲೆ, ಸಾಹಿತ್ಯ, ವಾಸ್ತುಶಿಲ್ಪ, ಜನಪದ ಕಲೆ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ದೇಶ-ವಿದೇಶಗಳಲ್ಲಿ ಪರಿಚಯಿಸುವ ವೇದಿಕೆಯಾಗುವ ಉದ್ದೇಶ ಹೊಂದಿದೆ. ವಿಶ್ವದ ವಿವಿಧ ಭಾಗಗಳಲ್ಲಿ ನೆಲೆಸಿರುವ ಕನ್ನಡಿಗರು ತಮಗೆ ಇಷ್ಟವಿರುವಂತಹ ಸ್ಮಾರಕಗಳ ಸಂರಕ್ಷಣೆಗೆ ಅಗತ್ಯ ಸಹಾಯವನ್ನು ನೀಡುವಂತೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿನಿಮಯ ಚಟುವಟಿಕೆಗಳು ಮತ್ತು ಕರ್ನಾಟಕದ ಪರಂಪರೆಯ ಪ್ರಚಾರದಲ್ಲಿ ತೊಡಗಿಸಿಕೊಂಡು ಸಾಂಸ್ಕೃತಿಕ ರಾಯಭಾರಿಗಳಾಗಿ ರೂಪಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಜಾರ್ಜ್‌ ಹೇಳಿದ್ದಾರೆ.

Top 25 Most important historic places of North Karnataka - Hindi  Nativeplanet
ಯುವಜನರು ತಮ್ಮ ಇತಿಹಾಸ ಮತ್ತು ಸಂಸ್ಕೃತಿಯನ್ನು ಕೇವಲ ಪಠ್ಯಪುಸ್ತಕಗಳ ಮೂಲಕ ತಿಳಿದುಕೊಳ್ಳುವುದಕ್ಕಿಂತ, ಸ್ಮಾರಕಗಳು, ಕಲೆ ಮತ್ತು ಸ್ಥಳೀಯ ಪರಂಪರೆಯೊಂದಿಗೆ ನೇರವಾಗಿ ಸಂಪರ್ಕ ಹೊಂದುವಂತಹ ಕಾರ್ಯಕ್ರಮಗಳಿಗೂ ಒತ್ತು ನೀಡಲಾಗುವುದು. ಫೌಂಡೇಶನ್‌ನ ಹಣಕಾಸು ನಿರ್ವಹಣೆ, ಲೆಕ್ಕಪತ್ರ, ಆಡಿಟ್ ಹಾಗೂ ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಖಚಿತಪಡಿಸುವ ವ್ಯವಸ್ಥೆ ರೂಪಿಸಲಾಗಿದೆ ಎಂದು ಸಚಿವ ಜಾರ್ಜ್ ತಿಳಿಸಿದ್ದಾರೆ.

ಕರ್ನಾಟಕದ ಐತಿಹಾಸಿಕ ಸ್ಮಾರಕಗಳು – RAMAN TUTORIALS

ಕರ್ನಾಟಕದ ಸ್ಮಾರಕಗಳು ಕೇವಲ ಕಲ್ಲು ಮತ್ತು ಕಟ್ಟಡಗಳಲ್ಲ; ಅವು ನಮ್ಮ ಇತಿಹಾಸ, ಕಲೆ ಮತ್ತು ಗುರುತಿನ ಜೀವಂತ ಸಾಕ್ಷಿಗಳಾಗಿವೆ. ಅವುಗಳನ್ನು ಸಂರಕ್ಷಿಸುವುದರ ಜೊತೆಗೆ, ಕರ್ನಾಟಕದ ಸಾಂಸ್ಕೃತಿಕ ವೈಭವವನ್ನು ಜಗತ್ತಿಗೆ ಪರಿಚಯಿಸಬೇಕಿದೆ. ಸರ್ಕಾರದ ಪ್ರಯತ್ನಗಳಿಗೆ ಸಿಎಸ್‌ಆರ್‌ (CSR) ಸಂಸ್ಥೆಗಳು, ಅನಿವಾಸಿ ಭಾರತೀಯರು, ಜಾಗತಿಕ ಕನ್ನಡಿಗರು ಮತ್ತು ಸಾರ್ವಜನಿಕರ ಸಹಭಾಗಿತ್ವವನ್ನು ಜೋಡಿಸುವ ಹೊಸ ಮಾದರಿಯಾಗಿ ಕರ್ನಾಟಕ ಹೆರಿಟೇಜ್ ಅಂಡ್‌ ಕಲ್ಚರಲ್‌ ಫೌಂಡೇಶನ್‌ ಅನ್ನು ರೂಪಿಸುವ ಉದ್ದೇಶ ಹೊಂದಿದ್ದೇವೆ. ಮುಂದಿನ ಪೀಳಿಗೆ ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಪಡುವಂತಾಗಬೇಕು ಎಂದು ತಿಳಿಸಿದ್ದಾರೆ.

ಕರ್ನಾಟಕದ ಟಾಪ್ 15 ಐತಿಹಾಸಿಕ ಸ್ಥಳಗಳು | 2026

ಇನ್ನೂ ರಾಜ್ಯದಾದ್ಯಂತ ಹರಡಿರುವ ಐತಿಹಾಸಿಕ ಸ್ಮಾರಕಗಳ ಪ್ರಮಾಣ ಮತ್ತು ವೈವಿಧ್ಯತೆಯನ್ನು ಗಮನಿಸಿದರೆ, ಸಂರಕ್ಷಣೆಗೆ ಸರ್ಕಾರ ಮತ್ತು ಸಮಾಜದ ಜಂಟಿ ಜವಾಬ್ದಾರಿಯ ಅಡಿಯಲ್ಲಿ ದೀರ್ಘಕಾಲಿಕ ಸಂಪನ್ಮೂಲಗಳನ್ನು ರೂಪಿಸುವ ಅಗತ್ಯವಿದೆ. ಕರ್ನಾಟಕ ಹೆರಿಟೇಜ್‌ ಫೌಂಡೇಶನ್‌ ಮೂಲಕ ದಾನಿಗಳು ತಮಗೆ ಆಸಕ್ತಿಯಿರುವ ತಾಣಗಳೊಂದಿಗೆ ನೇರವಾಗಿ ಸಂಪರ್ಕ ಹೊಂದುವಂತೆ ಮಾಡುವುದರ ಜೊತೆಗೆ, ಹಣಕಾಸು ನಿರ್ವಹಣೆ ಮತ್ತು ಯೋಜನೆಗಳ ಅನುಷ್ಠಾನಕ್ಕೆ ಸ್ಪಷ್ಟವಾದ ಪಾರದರ್ಶಕ ವ್ಯವಸ್ಥೆ ರೂಪಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ್‌ ಮಾಹಿತಿ ನೀಡಿದ್ದಾರೆ.

Tags: CM DK ShivakumarCongress GovernmentCorporate FundsCSR FundsHeritage CentersK J GeorgeKarnataka Heritage FoundationPower ministerPratidhvaniTourism Minister Of KarnatakaTourist Places
Previous Post

ಭೂಮಿಗೆ ಇನ್ನು 50 ವರ್ಷ ಮಾತ್ರ?; ಎಲಾನ್ ಮಸ್ಕ್ ಎಚ್ಚರಿಕೆ! ಪರಿಹಾರವೇನು?

Next Post

ತರಕಾರಿ, ಹಣ್ಣು ತರ್ತೀರಾ? ಕೆ.ಆರ್. ಮಾರ್ಕೆಟ್‌ನಲ್ಲಿ ಇನ್ಮುಂದೆ ಶುಲ್ಕ ಕಡ್ಡಾಯ!

Related Posts

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ : ಸಮಾಜಘಾತುಕ ಶಕ್ತಿಗಳ ಬಳಕೆ ; ಗುಡುಗಿದ ಸಿಎಂ ಡಿಕೆಶಿ..
Top Story

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ : ಸಮಾಜಘಾತುಕ ಶಕ್ತಿಗಳ ಬಳಕೆ ; ಗುಡುಗಿದ ಸಿಎಂ ಡಿಕೆಶಿ..

by ಪ್ರತಿಧ್ವನಿ
September 13, 2026
0

ಶಾಂತಿಯುತ ಗಣೇಶ ಹಬ್ಬ ಆಚರಣೆ ಖಾತರಿಗೆ ಪೊಲೀಸರಿಗೆ ಸೂಚನೆ.. ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ.. ಬೆಂಗಳೂರು :  ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು,...

Read moreDetails
ನಮ್ಮ ಕಥೆ ಏನು SIR ? ಹೊರಗುಳಿಯುವವರ ಪ್ರಶ್ನೆ

ನಮ್ಮ ಕಥೆ ಏನು SIR ? ಹೊರಗುಳಿಯುವವರ ಪ್ರಶ್ನೆ

September 13, 2026
730 ನಕಲಿ ಐಎಸ್‌ಐ ಹೆಲ್ಮೆಟ್‌ ಜಪ್ತಿ: ಖರೀದಿಸುವ ಮುನ್ನ  ಇದನ್ನು ಪರಿಶೀಲಿಸಿ!

730 ನಕಲಿ ಐಎಸ್‌ಐ ಹೆಲ್ಮೆಟ್‌ ಜಪ್ತಿ: ಖರೀದಿಸುವ ಮುನ್ನ ಇದನ್ನು ಪರಿಶೀಲಿಸಿ!

September 12, 2026
ಭಯೋತ್ಪಾದನೆ ವಿರುದ್ಧ ಕಠಿಣ ನಿಲುವು; ಭಾರತದ ಭದ್ರತಾ ಮಂಡಳಿ ಬೇಡಿಕೆಗೆ ಬ್ರಿಕ್ಸ್ ಬೆಂಬಲ

ಭಯೋತ್ಪಾದನೆ ವಿರುದ್ಧ ಕಠಿಣ ನಿಲುವು; ಭಾರತದ ಭದ್ರತಾ ಮಂಡಳಿ ಬೇಡಿಕೆಗೆ ಬ್ರಿಕ್ಸ್ ಬೆಂಬಲ

September 12, 2026
ಸತೀಶ್ ಜಾರಕಿಹೊಳಿ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್; ‘ಆರೋಪಗಳಿವೆ, ಬಲವಾದ ಸಾಕ್ಷ್ಯ ಎಲ್ಲಿದೆ?’

ಸತೀಶ್ ಜಾರಕಿಹೊಳಿ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್; ‘ಆರೋಪಗಳಿವೆ, ಬಲವಾದ ಸಾಕ್ಷ್ಯ ಎಲ್ಲಿದೆ?’

September 12, 2026
Next Post
ತರಕಾರಿ, ಹಣ್ಣು ತರ್ತೀರಾ? ಕೆ.ಆರ್. ಮಾರ್ಕೆಟ್‌ನಲ್ಲಿ ಇನ್ಮುಂದೆ ಶುಲ್ಕ ಕಡ್ಡಾಯ!

ತರಕಾರಿ, ಹಣ್ಣು ತರ್ತೀರಾ? ಕೆ.ಆರ್. ಮಾರ್ಕೆಟ್‌ನಲ್ಲಿ ಇನ್ಮುಂದೆ ಶುಲ್ಕ ಕಡ್ಡಾಯ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada