• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಿಂದೂ ಧರ್ಮ ರಕ್ಷಣೆಗೆ ಕ್ರಾಂತಿವೀರ ಬ್ರಿಗೇಡ್‌ ಸ್ಥಾಪನೆ.. ಈಶ್ವರಪ್ಪ ಮುಂದಾಳತ್ವ..

ಪ್ರತಿಧ್ವನಿ by ಪ್ರತಿಧ್ವನಿ
December 17, 2024
in Top Story, ಇತರೆ / Others
0
Share on WhatsAppShare on FacebookShare on Telegram

ಹುಬ್ಬಳ್ಳಿ: ಕ್ರಾಂತಿವೀರ ಬ್ರಿಗೇಡ್ ಸ್ಥಾಪನೆಗೆ ಮಾಜಿ ಡಿಸಿಎಂ ಈಶ್ವರಪ್ಪ ನಿರ್ಧಾರ ಮಾಡಿದ್ದಾರೆ. ಮಠಾಧೀಶರ ನೇತೃತ್ವದಲ್ಲಿ ಕ್ರಾಂತಿವೀರ ಬ್ರಿಗೇಡ್‌ ಸ್ಥಾಪನೆ ಮಾಡಲಾಗುವುದು ಎಂದು ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಫೆಬ್ರವರಿ 4 ರಂದು ರಥಸಪ್ತಮಿ ದಿನದಂದು ಬ್ರಿಗೇಡ್ ಉದ್ಘಾಟನೆ ಮಾಡಲಾಗುವುದು. ಕ್ರಾಂತಿಕಾರಿ ಬಸವಣ್ಣನವರ ಬಸವನ ಬಾಗೇವಾಡಿಯಲ್ಲಿ ಬ್ರಿಗೇಡ್‌ಗೆ ಚಾಲನೆ ನೀಡಲಾಗುವುದು. ಸೋಮೇಶ್ವರ ಸ್ವಾಮೀಜಿ ಮತ್ತಿತರರು ಇದರ ನೇತೃತ್ವ ವಹಿಸಲಿದ್ದಾರೆ ಎಂದಿದ್ದಾರೆ.

ADVERTISEMENT

1008 ಸಾಧು ಸಂತರ ಪಾದ ಪೂಜೆ ಮಾಡಿ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ ಮಾಡಲಿದ್ದೇವೆ. ಬ್ರಿಗೇಡ್‌ಗೆ ಒಂದು ಸಮಿತಿಯಾಗಬೇಕಿದೆ, ಈ ಹಿಂದೆ ನಮ್ಮ ಸರ್ಕಾರ ಇದ್ದಾಗ ಎರಡು ಬಾರಿ ಮಠಕ್ಕೆ ಹಣ ಬಿಡುಗಡೆ ಮಾಡಿದ್ದೆವು. ಸದಾನಂದಗೌಡ ಹಾಗೂ ಬಸವರಾಜ್ ಬೊಮ್ಮಾಯಿ ಎರಡು ಬಾರಿ ಹಣ ಬಿಡುಗಡೆ ಮಾಡಿದ್ರು. ಕರ್ನಾಟಕ ರಾಜ್ಯದಲ್ಲಿ ಸಾವಿರಾರು ಸಣ್ಣ ಮಠಗಳಿವೆ, ಆ ಸಣ್ಣ ಸಣ್ಣ ಮಠಗಳಿಗೆ ಅದಾಯವೂ ಇಲ್ಲ. ಸಣ್ಣ ಸಣ್ಣ ಮಠಗಳಿಗೂ ನ್ಯಾಯ ಸಿಗಬೇಕು. ಕ್ರಾಂತಿವೀರ ಬ್ರಿಗೇಡ್‌ನಿಂದ ಸಣ್ಣ ಸಣ್ಣ ಮಠಗಳಿಗೆ ನ್ಯಾಯ ಕೊಡಿಸೋ ಕೆಲಸ ಮಾಡ್ತೇವೆ ಎಂದಿದ್ದಾರೆ.

ಈ ಹಿಂದೆ ನಾನು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮಾಡಿದಾಗ ಕೆಲವರು ಹೈಕಮಾಂಡ್ ನಾಯಕರಿಗೆ ದೂರು ಕೊಟ್ಟರು. ಕೆಲವರು ರಾಣಿ ಚೆನ್ನಮ್ಮ ಬ್ರಿಗೇಡ್ ಎಂದು ಹೇಳಿದ್ರು. ಯತ್ನಾಳ್ ಬರ್ತೀನಿ ಅಂದಿದ್ರು, ಬರಬಹುದು. ಯಾವಾಗ ಬರ್ತಾರೋ ಗೊತ್ತಿಲ್ಲ. ಮೀಸಲಾತಿ ವಿಚಾರವಾಗಿ ನಮ್ಮ ಬ್ರಿಗೇಡ್ ಮಾತಾಡಲ್ಲ. ಹಿಂದೂ ಧರ್ಮದ ರಕ್ಷಣೆಗೆ ಬ್ರಿಗೇಡ್ ಹೋರಾಟ ಮಾಡುತ್ತದೆ. ಪಂಚಮಸಾಲಿ 2ಎ ಮೀಸಲಾತಿ ಹೋರಾಟ ವಿಚಾರವಾಗಿ ಮಾತನಾಡಿ, ನಾನು ಮೀಸಲಾತಿ ಪರವೂ ಅಲ್ಲ, ವಿರೋಧವೂ ಅಲ್ಲ. ಇದು ಹಿಂದೂ ಧರ್ಮದ ರಕ್ಷಣೆ ಮಾಡುವ ಸಂಘಟನೆ ಎಂದಿದ್ದಾರೆ ಈಶ್ವರಪ್ಪ.

ಹಿಂದೂಗಳ ಹಿತ ರಕ್ಷಣೆಗಾಗಿ ಕ್ರಾಂತಿವೀರ ಬ್ರಿಗೇಡ್ ಸ್ಥಾಪನೆ ಮಾಡಲಾಗ್ತಿದೆ ಎಂದು ಕ್ರಾಂತಿವೀರ ಬ್ರಿಗೇಡ್ ಅಧ್ಯಕ್ಷ ಮಖಣಾಪುರ ಸೋಮೇಶ್ವರ ಸ್ವಾಮೀಜಿ ಹೇಳಿದ್ದಾರೆ. ವಕ್ಫ್ ವಿರುದ್ಧ ಮಠಾಧೀಶರ ನೇತೃತ್ವದಲ್ಲಿ ಹೋರಾಟ ಮಾಡ್ತೇವೆ. ಅದಕ್ಕೆ ಪೂರಕವಾಗಿ ಕ್ರಾಂತಿವೀರ ಬ್ರಿಗೇಡ್ ಸ್ಥಾಪನೆ ಮಾಡಲಾಗ್ತಿದೆ. ಸಾದು ಸಂತರ ನೇತೃತ್ವದಲ್ಲಿ ಮಾರ್ಗದರ್ಶಕ ಮಂಡಳಿ ರಚನೆ ಮಾಡಲಾಗುತ್ತದೆ. ಫೆಬ್ರವರಿ 4ಕ್ಕೆ ಬಸವನ ಬಾಗೇವಾಡಿಯಲ್ಲಿ ಬ್ರಿಗೇಡ್ ಪ್ರಾರಂಭ ಮಾಡಲಿದ್ದು, 1008 ಸ್ವಾಮೀಜಿಗಳ ಪಾದ ಪೂಜೆ ಮಾಡಿ ಆರಂಭ ಮಾಡುತ್ತೇವೆ. ಮಹಾತ್ಮರೆಲ್ಲ ಸೇರಿ ಒಂದು ಸಂಘಟನೆ ಮಾಡಿಕೊಂಡು ನಾಮಕರಣ ಮಾಡಿದ್ದೇವೆ. 100 ಮಠಾಧೀಶರು ಸೇರಿ ಕ್ರಾಂತಿವೀರ ಬ್ರಿಗೇಡ್ ಎಂಬ ಸಂಘಟನೆ ಮಾಡಿಕೊಂಡಿದ್ದೇವೆ ಎಂದಿದ್ದಾರೆ.

Tags: BJPestablish Krantiveera Brigade.February 4feet of 1008 sadhu saints.Former DCM EshwarappaRani Chennamma Brigade.
Previous Post

ನಿನ್ನ ನೆನೆಯದಿರಲಾರೆ ನೆನೆದು ಸುಮ್ಮನಿರಲಾರೆ

Next Post

ಕಣ್ಣೂರಿನಲ್ಲಿ ಇಬ್ಬರಿಗೆ ಮಂಕಿ ಪಾಕ್ಸ್‌ ಪತ್ತೆ

Related Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
Top Story

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

by ಪ್ರತಿಧ್ವನಿ
April 30, 2026
0

ಬೆಂಗಳೂರು : ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ...

Read moreDetails
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
Next Post

ಕಣ್ಣೂರಿನಲ್ಲಿ ಇಬ್ಬರಿಗೆ ಮಂಕಿ ಪಾಕ್ಸ್‌ ಪತ್ತೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada