• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ಎಥೆನಾಲ್” ಚರ್ಚೆ- ಸಿದ್ದರಾಮಯ್ಯಗೆ ಜೋಷಿ ತಿರುಗೇಟು

ಪ್ರತಿಧ್ವನಿ by ಪ್ರತಿಧ್ವನಿ
November 8, 2025
in Top Story, ಕರ್ನಾಟಕ, ರಾಜಕೀಯ
0
“ಎಥೆನಾಲ್” ಚರ್ಚೆ- ಸಿದ್ದರಾಮಯ್ಯಗೆ ಜೋಷಿ ತಿರುಗೇಟು
Share on WhatsAppShare on FacebookShare on Telegram

ADVERTISEMENT

 

ಬೆಂಗಳೂರು: ಕಬ್ಬು ಹೋರಾಟಗಾರ ವಿಚಾರ ರಾಜಕೀಯ ನಾಯಕರ ಜಟಾಪಟಿಗೂ ಕಾರಣವಾಗಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮತ್ತು ಸಿದ್ದರಾಮಯ್ಯ ನಡುವೆ ಎಥೆನಾಲ್ ವಿಚಾರಕ್ಕೆ “X” ನಲ್ಲಿ ಬಿರುಸಿನ ಚರ್ಚೆ ನಡೀತಿದೆ.. ಪ್ರಹ್ಲಾದ್ ಜೋಷಿ ಹೇಳಿಕೆಗೆ ದಾಖಲೆ ಸಮೇತ ತಿರುಗೇಟು ನೀಡಿದ್ದ ಸಿದ್ದರಾಮಯ್ಯಗೆ ಮತ್ತೆ ಪ್ರಹ್ಲಾದ್ ಜೋಷಿ ಸುದೀರ್ಘವಾಗಿ ಉತ್ತರ ನೀಡಿದ್ದಾರೆ.

ಈ ಬಗ್ಗೆ‌ X ನಲ್ಲಿ ಬರೆದುಕೊಂಡಿರೋ ಜೋಷಿ, ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ಪರದಾಡುತ್ತಾ ಹತಾಶೆಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಮನಸ್ಸೊ ಇಚ್ಛೆ ಮಾತಾನಾಡುತ್ತಾ‌ ರಾಜ್ಯದ ರೈತರು ಮತ್ತು ಜನರನ್ನು ದಾರಿತಪ್ಪಿಸಲು ದುಸ್ಸಾಹಸಕ್ಕೆ ಕೈಹಾಕಿದ್ದಾರೆ.
ಸಿದ್ದರಾಮಯ್ಯನವರು ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಆಲಿಸುವಲ್ಲಿ ವಿಫಲರಾಗಿ, ಕೇಂದ್ರ ಸರ್ಕಾರದ ಮೇಲೆ ಬೆರಳು ತೋರಿ ಪಲಾಯನವಾದ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರು ಉಲ್ಲೇಖಿಸಿದ ಸಂಸತ್ತಿನ ಉತ್ತರದಲ್ಲಿ 30-06-25 ರವರೆಗಿನ ದತ್ತಾಂಶ ಮಾತ್ರ ಇದೆ. ಆದರೆ, ಎಥೆನಾಲ್ ಸರಬರಾಜು ವರ್ಷವು ನವೆಂಬರ್‌ನಿಂದ ಪ್ರಾರಂಭವಾಗಿ ಅಕ್ಟೋಬರ್‌ನಲ್ಲಿ ಕೊನೆಗೊಳ್ಳುತ್ತದೆ. ಸಂಸತ್ತಿನಲ್ಲಿ ನೀಡಲಾದ ದತ್ತಾಂಶವು 30.06.2025 ರವರೆಗಿನದ್ದು ಮಾತ್ರ.

 

BY vijayendra on Congress Government : ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ..!ಬಿ ವೈ ವಿಜಯೇಂದ್ರ...

2024-25 ರಲ್ಲಿ ಕರ್ನಾಟಕದಿಂದ ತೈಲ ಮಾರುಕಟ್ಟೆ ಕಂಪನಿಗಳಿಗೆ (OMC) ಗಳಿಗೆ ಒಟ್ಟು 139.8 ಕೋಟಿ ಲೀಟರ್ ಎಥೆನಾಲ್ ಅನ್ನು ಪೂರೈಸಿವೆ. ಮುಖ್ಯಮಂತ್ರಿಗಳಾಗಿ ತಾವು ಮಾತನಾಡುವ ಮೊದಲು, ದತ್ತಾಂಶಗಳನ್ನ ಸರಿಯಾಗಿ ಅರ್ಥ ಮಾಡಿಕೊಂಡು, ತಮ್ಮ ಅಧಿಕಾರಿಗಳಿಂದ ಸರಿಯಾದ ಮಾಹಿತಿ ಪಡೆದು, ಅರ್ಥಮಾಡಿಕೊಂಡು ನಂತರ ಮಾತನಾಡಬೇಕು ಎಂಬ ಕನಿಷ್ಠ ಪರಿಜ್ಞಾನವೂ ಇಲ್ಲದೆ ಇರುವುದು ನಿಜಕ್ಕೂ ರಾಜ್ಯದ ದುರಂತ.

2004-2014 ರ ಸಾಲಿನಲ್ಲಿ ಕಬ್ಬು ಬೆಳೆದ ರೈತರಿಗೆ ಸರಿಯಾದ ಸಮಯದಲ್ಲಿ ಹಣ ಪಾವತಿಯಾಗುತ್ತಿರಲಿಲ್ಲಾ, ಈ ವಿಳಂಬ ಧೋರಣೆಯಿಂದ ರೈತರು ಸಂಕಷ್ಟದಲ್ಲಿದ್ದರು. ಅತಿ ಕಡಿಮೆ FRP/MSP, 2005 ರಲ್ಲಿಯೇ ಎಥೆನಾಲ್ ಮಿಶ್ರಣದ ಪ್ರಸ್ತಾಪವನ್ನು ಮಾಡಿದ್ದರೂ, ಎಥೆನಾಲ್ ಬಗ್ಗೆ ಕಿಂಚಿತ್ತೂ ಯೋಚನೆಯೂ ಮಾಡಿರಲಿಲ್ಲಾ. 2013-14 ರಲ್ಲಿ ಕಬ್ಬು ಬೆಳೆ ಖರೀದಿ 57,104 ಕೋಟಿ ರೂ.ಗಳಷ್ಟಿತ್ತು, ಆದರೆ 2024-25ರ ಮೌಲ್ಯ 1,02,687 ಕೋಟಿ ರೂ..

 


ನ್ಯಾಯಯುತ ಮತ್ತು ಲಾಭದಾಯಕ ಬೆಲೆ (FRP) ಮೂಲಕ 2013-14 ರಲ್ಲಿ 210 ರೂ.ಗಳಷ್ಟಿತ್ತು, ಆದರೆ 2025-26ರ ಸಕ್ಕರೆ ಹಂಗಾಮಿನಲ್ಲಿ ಶೇ. 10.25% ರಷ್ಟು ಚೇತರಿಕೆಯೊಂದಿಗೆ ₹355/ಕ್ವಿಂಟಲ್‌ಗೆ ಏರಿಕೆಯಾಗಿದೆ. ಇದು ನಮ್ಮ‌ ಸರ್ಕಾರದ ಬದ್ದತೆ ಸಿದ್ದರಾಮಯ್ಯನವರೇ.

ಹೆಚ್ಚುವರಿ ಸಕ್ಕರೆಯನ್ನು ಸಮತೋಲನಗೊಳಿಸಲು ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ. 2013-14 ರಿಂದ 2024-25 ರವರೆಗೆ ಇಂಧನ ದರ್ಜೆಯ ಎಥೆನಾಲ್ ಉತ್ಪಾದನೆ ಮತ್ತು OMC ಗಳಿಗೆ ಪೂರೈಕೆ 26 ಪಟ್ಟು ಹೆಚ್ಚಾಗಿದೆ. 2013-14 ರಿಂದ, ಕಬ್ಬು ಆಧಾರಿತ ಡಿಸ್ಟಿಲರಿಗಳು ಮತ್ತು ಧಾನ್ಯ ಆಧಾರಿತ ಡಿಸ್ಟಿಲರಿಗಳು ₹2.18 ಲಕ್ಷ ಕೋಟಿಗಿಂತ ಹೆಚ್ಚು ಆದಾಯವನ್ನು ಗಳಿಸಿವೆ, ಇದರಲ್ಲಿ ಕಬ್ಬು ಆಧಾರಿತ ಡಿಸ್ಟಿಲರಿಗಳು (26.10.2025 ರಂತೆ) OMC ಗಳಿಗೆ ಎಥೆನಾಲ್ ಮಾರಾಟದಿಂದ ₹1.29 ಲಕ್ಷ ಕೋಟಿ ಗಳಿಸಿವೆ, ಇದು ಕಬ್ಬಿನ ಗಿರಣಿಗಳಿಗೆ ರೈತರ ಕಬ್ಬಿನ ಬಾಕಿಯನ್ನು ಸಕಾಲಿಕವಾಗಿ ಪಾವತಿಸಲು ಸಹಾಯ ಮಾಡಿದೆ. ರಫ್ತುಗಳನ್ನು ಸಕಾಲಿಕವಾಗಿ ಅನುಮತಿಸಲಾಗಿದೆ.

 

Belagavi sugar factory : ಬೆಳಗಾವಿ ಜಿಲ್ಲೆಯ ಕಾರ್ಖಾನೆಗಳ ಮಾಲೀಕರು ಇವರೇ ನೋಡಿ | ಸಕ್ಕರೆಯ ರಾಜಕೀಯ..! #belagavi

ಸಕ್ಕರೆ ಬೆಲೆಯಲ್ಲಿ ಸಮತೋಲನವನ್ನು ಕಾಯ್ದುಕೊಳ್ಳುವುದು ನಮ್ಮ ಸರ್ಕಾರದ ಬದ್ದತೆ. ಕಳೆದ 10 ವರ್ಷದ ಅವಧಿಯಲ್ಲಿ 10 LMT ಗೆ ಅವಕಾಶ ನೀಡಲಾಗಿತ್ತು, ಈ ವರ್ಷ 15 LMT ಗೆ ಅವಕಾಶ ನೀಡಲಾಗುತ್ತಿದೆ. ಇಡೀ ದೇಶಕ್ಕೆ ‌ಒಂದು ನೀತಿಯನ್ನು ಜಾರಿ ಮಾಡುವುದು ಕೇಂದ್ರ ಸರ್ಕಾರದ ಕೆಲಸ. ನೀವು ರಾಜ್ಯದಲ್ಲಿ ಬೆಳೆಗಾರರ ಬೇಡಿಕೆಯ ಪ್ರಕಾರವಾಗಿ ಕಾರ್ಯನಿರ್ವಹಿಸುವಲ್ಲಿ ವಿಫಲರಾಗಿ ಕೇವಲ ಸುಳ್ಳು ಹೇಳಿಕೊಂಡು, ಸುಳ್ಳಿನ ಮನೆಯನ್ನು ಕರ್ನಾಟಕದಲ್ಲಿ ನಿರ್ಮಿಸಿಕೊಂಡು ಜನರನ್ನು ರೈತರನ್ನು ಬೀದಿಗೆ ತಳ್ಳುವ ನೀಚ ಕೆಲಸ ಮಾಡಿದ್ದೀರಾ.

ಅಂದು ವಿರೋಧ ಪಕ್ಷದಲ್ಲಿದ್ದಾಗ ಬೆಲೆ ನಿಗದಿ ಮಾಡಿ, ಆವರ್ತ ನಿಧಿ ಸ್ಥಾಪನೆ ಮಾಡಿ ಎಂದು ಸರ್ಕಾರಗಳಿಗೆ ಬಿಟ್ಟಿ ಸಲಹೆ ನೀಡಿದ ನೀವು, ಇದೀಗ ಅಧಿಕಾರದಲ್ಲಿರುವಾಗ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿ ಜಾರಿಕೊಳ್ಳುವುದೇ ನಿಮ್ಮ ಮೂಲಭೂತ ಕೆಲಸವಾಗಿದೆಯಾ ಸಿದ್ದರಾಮಯ್ಯನವರೇ.. ಎಂದು ಪ್ರಶ್ನಿಸಿದ್ದಾರೆ.

ಇನ್ನು ಗ್ಯಾರಂಟಿಗಳು ಮಾತ್ರನೇ ನಿಮ್ಮ ಸರ್ಕಾರದ ಆಡಳಿತವಾಗಿದೆ ಹೊರತು ರಾಜ್ಯದ ಅಭಿವೃದ್ಧಿಯಲ್ಲ. ನಿಮ್ಮ ದುರಾಡಳಿತದ ಪರಮಾವಧಿಯಿಂದಲೇ ಇಂದು ರೈತರು ಬೀದಿಗೆ ಬರುವ ಸ್ಥಿತಿ ನಿರ್ಮಾಣವಾಗಿದೆ ಎಂದು ಕಿಡಿಕಾರಿದ್ದಾರೆ.

Tags: #chiefministersiddaramaiah#prahladjoshi
Previous Post

ನೆಲ ನೋಡದ ರಾಜಕೀಯವೂ ಬಿಹಾರದ ಚುನಾವಣೆಗಳೂ

Next Post

ನಟಿ ರುಕ್ಮಿಣಿ ವಸಂತ್‌ ಹೆಸರಿನಲ್ಲಿ ಸೈಬರ್‌ ವಂಚಕರ ಕಾಟ: ಎಚ್ಚರಿಕೆ ನೀಡಿದ ಕಾಂತಾರ ನಾಯಕಿ

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post
ನಟಿ ರುಕ್ಮಿಣಿ ವಸಂತ್‌ ಹೆಸರಿನಲ್ಲಿ ಸೈಬರ್‌ ವಂಚಕರ ಕಾಟ: ಎಚ್ಚರಿಕೆ ನೀಡಿದ ಕಾಂತಾರ ನಾಯಕಿ

ನಟಿ ರುಕ್ಮಿಣಿ ವಸಂತ್‌ ಹೆಸರಿನಲ್ಲಿ ಸೈಬರ್‌ ವಂಚಕರ ಕಾಟ: ಎಚ್ಚರಿಕೆ ನೀಡಿದ ಕಾಂತಾರ ನಾಯಕಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada