ನನ್ನ ಹೆಣವೂ ಬಿಜೆಪಿಗೆ ಹೋಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಸೋಮವಾರ (ಸೆಪ್ಟೆಂಬರ್ 11) ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ನನ್ನ ಇಡೀ ರಾಜಕಾರಣ ಕೋಮುವಾದಿ ಶಕ್ತಿಗಳ ವಿರುದ್ಧವೇ ನಡೆದಿದೆ. ಕುಮಾರಸ್ವಾಮಿ ಹೇಳಿಕೆ ನಗೆಪಾಟಲಿನನ್ನದ್ದು. ನಾನು ಬಿಜೆಪಿಗೆ ಹೋಗುತ್ತೇನೆ ಅಂದ್ರೆ ಯಾರಾದರೂ ನಂಬುತ್ತಾರಾ. ಯಾರನ್ನೋ ಯಾವದೋ ಸಂಧರ್ಭದಲ್ಲಿ ಬೇಟಿ ಮಾಡಿರುತ್ತೇವೆ. ಅದಕ್ಕೆಲ್ಲ ಪಕ್ಷ ಸೇರುತ್ತಾರೆ ಎಂದು ಹೇಳಲು ಸಾಧ್ಯನಾ ಎಂದು ಹೇಳಿದರು.
ಇತ್ತೀಚಿಗೆ ಅಮಿತ್ ಶಾ ಭೇಟಿ ಮಾಡಿದೆ. ಹಿಂದೆ ಯಾವದೊ ಸಂಧರ್ಭದಲ್ಲಿ ಅಡ್ವಾಣಿ ಅವರನ್ನ ಬೇಟಿ ಮಾಡಿದ್ದೆ. ಅದಕ್ಕೆಲ್ಲಾ ಈ ಅರ್ಥ ಕಟ್ಟುವುದಕ್ಕೆ ಆಗುತ್ತದಾ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.